ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಾವೇರಿ ವಿವಾದ: ಸುಪ್ರೀಂ ಕೋರ್ಟ್ ಆದೇಶ ಖಂಡಿಸಿ ಸೆಪ್ಟೆಂಬರ್ 23ಕ್ಕೆ ಮಂಡ್ಯ ಬಂದ್

ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಸುಪ್ರೀಂ ತೀರ್ಪು ಖಂಡಿಸಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ ಕರೆ ನೀಡಲಾಗಿದೆ.

ಮಂಡ್ಯದಲ್ಲಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರ ಪ್ರತಿಭಟನೆ
Lingaraj Badiger
Updated On : 21 Sept 2023, 7:07 pm

ಮಂಡ್ಯ: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶ ನೀಡಿದ್ದು, ಸುಪ್ರೀಂ ತೀರ್ಪು ಖಂಡಿಸಿ ಸೆಪ್ಟೆಂಬರ್ 23 ರಂದು ಮಂಡ್ಯ ಬಂದ್​ಗೆ ಕರೆ ನೀಡಲಾಗಿದೆ.

ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಬಂದ್ ಗೆ ಕರೆ ನೀಡಿದ್ದು, ಇಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಇದನ್ನು ಓದಿ: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ​

Advertisement

Advertisement

ರೈತ ಹಿತ ರಕ್ಷಣಾ ಸಮಿತಿ ನಾಳೆ ರೈತರ ಸಭೆ ಕರೆದಿದ್ದು, ಬಂದ್ ರೂಪು-ರೇಷೆ ಬಗ್ಗೆ ಚರ್ಚೆ ನಡೆಸಲಿದೆ.

ಇದನ್ನು ಓದಿ: ಕಾವೇರಿ ಸಮಸ್ಯೆಗೆ ಡಿಎಂಕೆ-ಕಾಂಗ್ರೆಸ್‌ ಹೊಂದಾಣಿಕೆ ಕಾರಣ: ಕೋರ್ಟ್ ಮುಂದೆ ಸಮರ್ಪಕ ವಾದ ಮಂಡಿಸಲು ಸರ್ಕಾರ ವಿಫಲ; ಬಿಎಸ್‌ ಯಡಿಯೂರಪ್ಪ​

ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ಪ್ರತಿ ದಿನವೂ ಐದು ಸಾವಿರ ಕ್ಯೂಸೆಕ್‌ ಹರಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿರ್ದೇಶ ನೀಡಿದೆ. ಸುಪ್ರೀಂ ಸೂಚನೆಯು ಹೊರಬರುತ್ತಿದ್ಧಂತೆ ಮಂಡ್ಯದಲ್ಲಿ ರೈತರು ಮತ್ತು ಕನ್ನಡ ಪರ ಸಂಘಟನೆಗಳ ಹೋರಾಟ ತೀವ್ರಗೊಂಡಿದ್ದು, ಇಂದು ಹಲವು ಕಡೆ ರಸ್ತೆ ತಡೆ ನಡೆಸಿದರೆ, ರೈತರು ನೀರಿಗಿಳಿದು ಪ್ರತಿಭಟನೆ ನಡೆಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments