ಗೋಡೆ ಕುಸಿದು ವಿದ್ಯಾರ್ಥಿ ಸಾವು 
ರಾಜ್ಯ

ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವು, ಮತ್ತೋರ್ವ ವಿದ್ಯಾರ್ಥಿಗೆ ಗಾಯ

ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ.

ರಾಮನಗರ: ಮೊರಾರ್ಜಿ ವಸತಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗುರುವಾರ ರಾಮನಗರದಲ್ಲಿ ನಡೆದಿದೆ.

ರಾಮನಗರದ ಹೊಸೂರು ಗೊಲ್ಲಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಳಗ್ಗೆ ಸ್ನಾನಕ್ಕೆ ತೆರಳಿದ್ದಾಗ ಈ ಘಟನೆ ನಡೆದಿದೆ. ವಿದ್ಯಾರ್ಥಿ ಕೌಶಿಕ್ ಗೌಡ (12)‌ ಮೃತ ದುರ್ದೈವಿ. ನೀರು ಸಂಗ್ರಹಕ್ಕೆ ತಡೆಗೋಡೆ ನಿರ್ಮಿಸಲಾಗಿತ್ತು. ನೀರಿನ ಪ್ರಮಾಣ‌ ತಡೆಯಲಾಗದೇ ಗೋಡೆ ಕುಸಿದಿದೆ ಎಂದು ಹೇಳಲಾಗಿದೆ.

ಘಟನೆಯಲ್ಲಿ ಮತ್ತೊಬ್ಬ ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡಿದ್ದಾನೆ. ಬೆಳಿಗ್ಗೆ 8.30ರ ಸುಮಾರಿಗೆ ತೊಟ್ಟಿ ಬಳಿ ಕೌಶಿಕ್ ಸೇರಿದಂತೆ ಇಬ್ಬರು ವಿದ್ಯಾರ್ಥಿಗಳು ಮುಖ‌ ತೊಳೆಯುತ್ತಿದ್ದರು. ಆಗ, ಐದು ಅಡಿ ಎತ್ತರವಿರುವ ತೊಟ್ಟಿಯ ಶಿಥಿಲಗೊಂಡ ಗೋಡೆ ವಿದ್ಯಾರ್ಥಿಗಳ ಮೇಲೆ ಉರುಳಿದೆ. ಗೋಡೆಯ ಅವಶೇಷಗಳಡಿ ಸಿಲುಕಿದ್ದ ತೀವ್ರವಾಗಿ ಗಾಯಗೊಂಡಿದ್ದ ಕೌಶಿಕ್, ದಯಾನಂದ ಸಾಗರ್ ಸಾಗರ್ ಆಸ್ಪತ್ರೆಗೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾನೆ. ಮೃತ ವಿದ್ಯಾರ್ಥಿಯ ಶವವನ್ನ ದಯಾನಂದ ಆಸ್ಪತ್ರೆ ಶವಗಾರಕ್ಕೆ ರವಾನೆ ಮಾಡಲಾಗಿದೆ.

ಮತ್ತೊಬ್ಬ ವಿದ್ಯಾರ್ಥಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಬಿಡದಿ ಠಾಣೆ ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಮತ್ತು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?