ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ 
ರಾಜ್ಯ

ಕಾವೇರಿ ಪ್ರತಿಭಟನೆ: ಬೆಂಗಳೂರಿನ ತಮಿಳು ಪ್ರಾಬಲ್ಯ ಪ್ರದೇಶಗಳಲ್ಲಿ ಭದ್ರತೆ ಹೆಚ್ಚಳ

ಕರ್ನಾಟಕದಲ್ಲಿ ಕಾವೇರಿ ಪ್ರತಿಭಟನೆ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. 

ಬೆಂಗಳೂರು: ಕರ್ನಾಟಕದಲ್ಲಿ ಕಾವೇರಿ ಪ್ರತಿಭಟನೆ ತೀವ್ರಗೊಂಡಿದ್ದು, ಬೆಂಗಳೂರಿನಲ್ಲಿ ಭದ್ರತೆಯನ್ನು ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ ತಮಿಳುನಾಡಿನ ಮೂಲದವರು ಹೆಚ್ಚಿನ ಸಂಖ್ಯೆಯಲ್ಲಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ.

ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಡಿಸಿಪಿಗಳೊಂದಿಗೆ ಸರಣಿ ಸಭೆಗಳನ್ನು ನಡೆಸಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೆಚ್ಚು ಅಲರ್ಟ್ ಆಗಿರುವಂತೆ ಸೂಚಿಸಿದ್ದಾರೆ. 

ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಪೊಲೀಸ್ ಆಯುಕ್ತರು ಪಿಟಿಐ ಗೆ ಮಾಹಿತಿ ನೀಡಿದ್ದಾರೆ.ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಕೊಪ್ಪಳ, ವಿಜಯಪುರಗಳಲ್ಲಿ ಪ್ರತಿಭಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!