ಗೋಮಾಂಸ ಸಾಗಿಸುತ್ತಿದ್ದ ಕಾರಿಗೆ ಬೆಂಕಿ 
ರಾಜ್ಯ

ದೇವನಹಳ್ಳಿ: ಗೋಮಾಂಸ ಸಾಗಾಟ ತಡೆದು ಕಾರಿಗೆ ಬೆಂಕಿ; ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸರ ವಶಕ್ಕೆ, ಬಿಗಿ ಬಂದೋಬಸ್ತ್

ಬೆಂಗಳೂರು ಗ್ರಾಮಾಂತರ  ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ‌ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ  ಕಾರ್ಯಕರ್ತರು ತಡೆದಿದ್ದಾರೆ.

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ  ಜಿಲ್ಲೆ ದೊಡ್ಡಬಳ್ಳಾಪುರ ನಗರದ ಐಬಿ‌ ವೃತ್ತದಲ್ಲಿ ಅಕ್ರಮವಾಗಿ 15 ಟನ್ ಗೋಮಾಂಸ ಸಾಗಿಸುತ್ತಿದ್ದ ನಾಲ್ಕು ಗೂಡ್ಸ್ ವಾಹನಗಳನ್ನು ಶ್ರೀರಾಮಸೇನೆ  ಕಾರ್ಯಕರ್ತರು ತಡೆದಿದ್ದಾರೆ.

ಗೋಮಾಂಸ ಹಿಂದೂಪುರ ಯಲಹಂಕ ರಾಜ್ಯ ಹೆದ್ದಾರಿ ಮಾರ್ಗವಾಗಿ ದೊಡ್ಡಬಳ್ಳಾಪುರ ಮೂಲಕ ಬೆಂಗಳೂರಿಗೆ ಬರುತ್ತಿದ್ದ ವಾಹನಗಳನ್ನು ತಡೆದಿದ್ದಕ್ಕೆ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಗೋಮಾಂಸ ಸಾಗಾಟ ಮಾಡುವರು ಹಲ್ಲೆ ಮಾಡಲು ಯತ್ನಿಸಿರುವ ಆರೋಪ ಕೇಳಿಬಂದಿದೆ.

ನಗರದ ಐಬಿ ವೃತ್ತದಲ್ಲಿ ಆಂಧ್ರಪ್ರದೇಶದ ಹಿಂದೂಪುರ ಕಡೆಯಿಂದ ಗೌರಿಬಿದನೂರು-ದೊಡ್ಡಬಳ್ಳಾಪುರ ಮಾರ್ಗವಾಗಿ ಬೆಂಗಳೂರಿನ ಶಿವಾಜಿನಗರಕ್ಕೆ ಗೋಮಾಂಸ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. ಅತಿ ವೇಗದಿಂದ ಕಾರು ತಡೆದಾಗ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕಾರು ತಡೆ ಹಿಡಿದ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾರಿನ ಗಾಜು ಪುಡಿಪುಡಿ ಮಾಡಿ ಕಾರಿನಲ್ಲಿದ್ದ ರಾಶಿ ರಾಶಿ ಮಾಂಸವನ್ನು ರಸ್ತೆಗೆ ಸುರಿದು ಆಕ್ರೋಶ ಹೊರಹಾಕಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಗೂಡ್ಸ್​ ವಾಹನಗಳಲ್ಲಿದ್ದ ಗೋಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

ಶ್ರೀರಾಮ ಸೇನೆ ಕಾರ್ಯಕರ್ತರು ಸಾಗಾಟ ಮಾಡುತ್ತಿದ್ದವರ ತಲೆಯ ಮೇಲೆ‌ ಹಸುಗಳ ರುಂಡಗಳನ್ನು ಇರಿಸಿದ್ದಾರೆ. ಈ ವೇಳೆ ಕಾರ್ಯಕರ್ತ ಗೋಮಾಂಸ ಸಾಗಿಸುತ್ತಿದ್ದವನ ಎದಗೆ ಒದ್ದಿದ್ದಾರೆ.  ಈ ವೇಳೆ ಮಧ್ಯಪ್ರವೇಶಿಸಿದ ಪೋಲೀಸರು ಹಲ್ಲೆ ಮಾಡದಂತೆ ಸೂಚನೆ ನೀಡಿದರು.

ಕಾರಿಗೆ ಬೆಂಕಿ ಹಚ್ಚಿದ ಹಿನ್ನೆಲೆಯಲ್ಲಿ 20 ಕ್ಕೂ ಅಧಿಕ ಶ್ರೀರಾಮಸೇನೆ ಕಾರ್ಯಕರ್ತರನ್ನು ದೊಡ್ಡಬಳ್ಳಾಪುರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಸ್ಥಳದಲ್ಲಿ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಹಾಗೂ ಇನ್ಸ್ಪೆಕ್ಟರ್ ಮೊಕ್ಕಾಂ ಹೂಡಿದ್ದಾರೆ. ಐಬಿ ವೃತ್ತ ಹಾಗೂ ಗುಂಜೂರು ಟೋಲ್​​ಗಳ ಸಿಸಿಟಿವಿಯನ್ನು ಪೊಲೀಸರು ಪರಿಶೀಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ದಾವಣಗೆರೆಯಲ್ಲಿ ಪಕ್ಷ ವಿರೋಧಿ ಚಟುವಟಿಕೆ: ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ತಲೆದಂಡ, ಜಮೀರ್ ಸಚಿವ ಸ್ಥಾನಕ್ಕೂ ಕುತ್ತು?

ಮಗ ವಿದೇಶದಲ್ಲಿ ಓದುತ್ತಿದ್ದಾನೆ, ಹಲ್ಲೆ ಕೇಸ್ ಕೈಬಿಡಿ: ಪುತ್ರನ ಭವಿಷ್ಯಕ್ಕಾಗಿ ಪ್ರಕರಣ ರದ್ದು ಕೋರಿದ ಅನಂತಕುಮಾರ್ ಹೆಗಡೆ!

ನಮಸ್ತೆ.. ಏನ್ರೀ ರಾಹುಲ್ ಹೇಗಿದ್ದೀರಾ? ; ಸಂಸತ್ ಭವನದ ಬಳಿ ಪ್ರಧಾನಿ ಮೋದಿ-Rahul Gandhi ಅಪರೂಪದ ಮುಖಾಮುಖಿ! Video

ಮಾತುಕತೆಗೂ ಮುನ್ನವೇ ಟೆಹ್ರಾನ್‌ಗೆ ದೊಡ್ಡ ಗೆಲುವು; ಫ್ರೀಜ್ ಮಾಡಲಾದ ಇರಾನ್ ಸ್ವತ್ತುಗಳ ಬಿಡುಗಡೆಗೆ ಅಮೆರಿಕ ಒಪ್ಪಿಗೆ!

SCROLL FOR NEXT