ಸಂಗ್ರಹ ಚಿತ್ರ 
ರಾಜ್ಯ

ಕಾವೇರಿದ ಕಾವೇರಿ ಕಿಚ್ಚು: ಮಂಗಳವಾರ ಬೆಂಗಳೂರು ಬಂದ್, ಬಿಎಂಟಿಸಿ-ಕೆಎಸ್ಆರ್'ಟಿಸಿ ಬೆಂಬಲ, ನಗರ ಬಹುತೇಕ ಸ್ಥಬ್ಧ ಸಾಧ್ಯತೆ

ರಾಜ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್'ಗೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬೆಂಬಲ ವ್ಯಕ್ತಪಡಿಸಿವೆ.

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಕಿಚ್ಚು ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರೆ ನೀಡಲಾಗಿರುವ ಬೆಂಗಳೂರು ಬಂದ್'ಗೆ ಬಿಎಂಟಿಸಿ ಹಾಗೂ ಕೆಎಸ್ಆರ್'ಟಿಸಿ ಬೆಂಬಲ ವ್ಯಕ್ತಪಡಿಸಿವೆ.

ಈಗಾಗಲೇ ಬೆಂಗಳೂರು ಬಂದ್'ಗೆ 100ಕ್ಕೂ ಹೆಚ್ಚು ಸಂಘಗಳು, ಓಲಾ, ಉಬರ್ ಚಾಲಕರು ಹಾಗೂ ಮಾಲೀಕರ ಸಂಘಗಳು ಬೆಂಬಲ ಸೂಚಿಸಿದ್ದು, ಇದೀಗ ಕೆಎಸ್ಆರ್'ಟಿಸಿ ಹಾಗೂ ಬಿಎಂಟಿಸಿ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ನಗರ ಮಂಗಳವಾರ ಬಹುತೇಕ ಸ್ಥಬ್ಧಗೊಳ್ಳುವ ಸಾಧ್ಯತೆಗಳಿವೆ.

ಕೆಎಸ್​ಆರ್​ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಅನಂತ್ ಸುಬ್ಬರಾವ್ ಅವರು ಮಾತನಾಡಿ, ಬೆಂಗಳೂರು ಬಂದ್​ಗೆ ನಮ್ಮ‌ ಸಂಪೂರ್ಣ ಬೆಂಬಲ ಇರುತ್ತೆ. ಸಾರಿಗೆ ಬಸ್ ರಸ್ತೆ​ಗೆ ಇಳಿಯುವುದಿಲ್ಲ ಎಂದು ಹೇಳಿದ್ದಾರೆ.

ಕೆಎಸ್ಆರ್'ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಷನ್ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಿಎಂಟಿಸಿ ಬಸ್ಸುಗಳನ್ನು ಡಿಪೋದಿಂದ ಹೊರಗೆ ತೆಗೆಯುವುದಿಲ್ಲ ಎಂದು ಘೋಷಣೆ ಮಾಡಿದೆ. ಇನ್ನು ಶಾಲಾ ಆಡಳಿತ ಮಂಡಳಿ ಕೂಡ ನೈತಿಕ ಬೆಂಬಲ ಘೋಷಿಸಿದ್ದು, ರಜೆ ಘೋಷಿಸುವ ವಿಚಾರವನ್ನು ಆಯಾ ಶಾಲೆಗಳ ಆಡಳಿತ ಮಂಡಳಿಗೆ ಬಿಟ್ಟಿದೆ.

ಬಂದ್​ಗೆ ಖಾಸಗಿ ಸಾರಿಗೆ ಸಂಘಟನೆಗಳು ಕೂಡ ಬೆಂಬಲ ವ್ಯಕ್ತಪಡಿಸಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

SCROLL FOR NEXT