ಸುಧಾಮೂರ್ತಿ 
ರಾಜ್ಯ

ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿ ಹೆಸರು ಬಳಸಿ ವಂಚನೆ: ಇಬ್ಬರು ಯುವತಿಯರ ವಿರುದ್ಧ ಕೇಸ್ ದಾಖಲು

ಇನ್ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಬೆಂಗಳೂರು: ಇನ್ಫೋಸಿಸ್  ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ  ಅವರ ಹೆಸರು ಬಳಸಿಕೊಂಡು ವಂಚನೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

ಈ ಸಂಬಂಧ ಸುಧಾಮೂರ್ತಿ ಅವರ ಪರ್ಸನಲ್ ಅಸಿಸ್ಟೆಂಟ್ ಮಮತಾ ಸಂಜಯ್ ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶೃತಿ ಹಾಗೂ ಲಾವಣ್ಯ ಎಂಬವರ ವಿರುದ್ಧ ದೂರು ದಾಖಲಾಗಿದೆ.

ಕೆಕೆಎನ್‌ಸಿ ಯಿಂದ  50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿಯವರಿಗೆ ಆಹ್ವಾನಿಸಲಾಗಿತ್ತು. ಆದರೆ ಅವರು ಇಮೇಲ್ ಮೂಲಕ ಅಮೆರಿಕದಲ್ಲಿ ನಡೆಯುತ್ತಿರುವ ಕಾರ್ಯಕ್ರಮಕ್ಕೆ ಬರಲು ಆಗುವುದಿಲ್ಲ ಎಂದು ಸಂದೇಶ ಕಳುಹಿಸಿದ್ದರು. ಈ ನಡುವೆ ಸುಧಾಮೂರ್ತಿಯವರ ಫೋಟೋಗಳನ್ನು ಬಳಸಿಕೊಂಡು ಜಾಹೀರಾತುಗಳನ್ನು ನೀಡಲಾಗಿತ್ತು. ಇದನ್ನು ಪ್ರಶ್ನಿಸಿದಾಗ ವಂಚನೆ ಬೆಳಕಿಗೆ ಬಂದಿದೆ.

ಮೂರ್ತಿ ಟ್ರಸ್ಟ್ ನ ಕಚೇರಿ ಎಂದು ಹೆಸರು ಸೃಷ್ಠಿಸಿ ಸುಧಾಮೂರ್ತಿಯವರ ಅಸಿಸ್ಟೆಂಟ್ ಎಂದು ವಂಚಿಸಿರುವ ಆರೋಪ ಕೇಳಿ ಬಂದಿದೆ. ಆರೋಪಿ ಲಾವಣ್ಯ, ಕಾರ್ಯಕ್ರಮಕ್ಕೆ ಸುಧಾಮೂರ್ತಿ ಮೇಡಂ ಬರುತ್ತಾರೆ ಎಂದು ಹೇಳಿ ವಂಚನೆ ಎಸಗಿದ್ದಾರೆ.

ಹೀಗೆ ಅಮೆರಿಕದಲ್ಲಿ ಮೀಟ್ ಅಂಡ್ ಗ್ರೀಟ್ ವಿತ್ ಡಾ. ಸುಧಾಮೂರ್ತಿ ಕಾರ್ಯಕ್ರಮ ಆಯೋಜಿಸಿರುವುದಾಗಿ ಟಿಕೆಟ್ ಮಾರಾಟ ಮಾಡಿದ್ದಾರೆ. ಪ್ರತಿ ಟಿಕೆಟ್‌ಗೆ 40 ಡಾಲರ್ ಪಡೆದಿರುವುದಾಗಿ ಆರೋಪಿಸಲಾಗಿದೆ. ಘಟನೆ ಸಂಬಂಧ ಸದ್ಯ ಜಯನಗರ ಠಾಣೆಯಲ್ಲಿ ಐಟಿ ಆಕ್ಟ್ 66ಸಿ, 66ಡಿ ಹಾಗೂ ಐಪಿಸಿ 419, 420 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ