ಸಾಂದರ್ಭಿಕ ಚಿತ್ರ 
ರಾಜ್ಯ

ರಸ್ತೆಯಲ್ಲಿ ಅಡ್ಡಾ-ದಿಡ್ಡಿ ಪಾರ್ಕಿಂಗ್: ಬಿಬಿಎಂಪಿ ಕಸದ ಲಾರಿಗೆ ನವವಿವಾಹಿತ ಬಲಿ

ರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿ ಅಡ್ಡಾ-ದಿಡ್ಡಿ ಪಾರ್ಕಿಂಗ್ ಮಾಡಿದ್ದ ಕಾರಣ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಬೆಂಗಳೂರು: ರಸ್ತೆಯಲ್ಲಿ ಬಿಬಿಎಂಪಿ ಕಸದ ಲಾರಿ ಅಡ್ಡಾ-ದಿಡ್ಡಿ ಪಾರ್ಕಿಂಗ್ ಮಾಡಿದ್ದ ಕಾರಣ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ನಿಂತಿದ್ದ ಬಿಬಿಎಂಪಿ ಕಸದ ಲಾರಿಗೆ ಬೈಕ್ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ತಡರಾತ್ರಿ 12 ಗಂಟೆ ಸುಮಾರಿಗೆ ಜಯನಗರ ಮೆಟ್ರೋ ನಿಲ್ದಾಣದ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಯಶವಂತ್ (26) ಮೃತ ದುರ್ದೈವಿ. ಮೆಟ್ರೋ ನಿಲ್ದಾಣದ ಕೆಳಭಾಗದಲ್ಲಿ ಲಾರಿ ಪಾರ್ಕಿಂಗ್ ಮಾಡಲಾಗಿತ್ತು.  

ಈ ವೇಳೆ ಬನಶಂಕರಿ ಮಾರ್ಗದಿಂದ ಸೌತ್ ಎಂಡ್ ಸರ್ಕಲ್ ಕಡೆ ಹೊರಟಿದ್ದ ಮೃತ ಯುವಕ, ಜಯನಗರ ಮೆಟ್ರೋ ನಿಲ್ದಾಣದ ಸ್ಥಳದಲ್ಲಿ ವೇಗವಾಗಿ ಬಂದಿದ್ದು ನಿಯಂತ್ರಣ ಸಿಗದೆ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿಯ ರಭಸಕ್ಕೆ ಬೈಕ್ ಸಮೇತ ಯುವಕ ಲಾರಿ ಹಿಂಬದಿಯಡಿ ಸಿಲುಕಿಕೊಂಡಿದ್ದಾನೆ. 

ಮಾಹಿತಿ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಜಯನಗರ ಸಂಚಾರಿ ಪೊಲೀಸರು ದೌಡಾಯಿಸಿದ್ದು, ಸುಮಾರು 3-4 ಗಂಟೆಗಳ ಕಾಲ ಶವ ಹೊರತೆಗೆಯಲು ಪೊಲೀಸರಿಂದ ಹರಸಾಹಸಪಟ್ಟಿದ್ದಾರೆ.

ಮೃತ ಯುವಕ ಯಲಚೇನಹಳ್ಳಿ ನಿವಾಸಿಯಾಗಿದ್ದು ಇತ್ತೀಚೆಗಷ್ಟೇ ಮದುವೆಯಾಗಿದ್ದ. ಸತತ ಪ್ರಯತ್ನದ ಬಳಿಕ ಬೆಳಗ್ಗಿನ ಜಾವ ಮೂರು ಗಂಟೆಗೆ ಪೊಲೀಸರು ಮೃತದೇಹ ಹೊರತೆಗೆದರು. ಮೃತದೇಹ ಹೊರತೆಗೆಯುತ್ತಲೇ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

SCROLL FOR NEXT