ಸಿಎಂ ಸಿದ್ದರಾಮಯ್ಯ 
ರಾಜ್ಯ

ಶಕ್ತಿ ಯೋಜನೆಯಿಂದ ದೇವಸ್ಥಾನಗಳ ಆದಾಯ ಹೆಚ್ಚಳ: ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ದೇವಸ್ಥಾನಗಳ ಆದಾಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರ ಉಚಿತ ಪ್ರಯಾಣಕ್ಕಾಗಿ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ದೇವಸ್ಥಾನಗಳ ಆದಾಯ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ.

ಪ್ರವಾಸೋದ್ಯಮ ಮತ್ತು ಪುರಾತತ್ವ ವಸ್ತುಸಂಗ್ರಹಾಲಯ ಇಲಾಖೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ‘ನಮ್ಮ ಸ್ಮಾರಕ: ನಮ್ಮ ಪರಂಪರೆ, ನಮ್ಮ ಗುರುತು, ನಮ್ಮ ಹೆಮ್ಮೆ’ ಅಭಿಯಾನದ ಸಂವಾದ ಮತ್ತು ಡಿಜಿಟಲ್ ವೇದಿಕೆಯನ್ನು ಉದ್ಘಾಟಿಸಿ ಸಿಎಂ ಮಾತನಾಡಿದರು.

“ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಸಾಕಷ್ಟು ಅವಕಾಶಗಳಿವೆ. ಶಕ್ತಿ ಯೋಜನೆಯ ಹಿಂದಿನ ಕಾಳಜಿ ಏನೆಂದರೆ, ಬಡವರೂ ಆಧ್ಯಾತ್ಮಿಕ ಮತ್ತು ಪರಿಸರ ಪ್ರವಾಸೋದ್ಯಮ ಕೇಂದ್ರಗಳು ಹಾಗೂ ದೇವಾಲಯಗಳಿಗೆ ಹೋಗಲು ಅವಕಾಶ ನೀಡಬೇಕು. 60 ಲಕ್ಷ ಮಹಿಳೆಯರು ಇದರ ಲಾಭ ಪಡೆದಿದ್ದಾರೆ ಮತ್ತು ದೇವಾಲಯಗಳ ಆದಾಯ ಹೆಚ್ಚಳವಾಗಿದೆ ಎಂದರು.

"ಆರ್ಥಿಕತೆಯು ವೇಗ ಪಡೆಯುತ್ತಿದೆ ಮತ್ತು ವ್ಯಾಪಾರ ಹಾಗೂ ವಹಿವಾಟುಗಳು ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸುತ್ತಿವೆ. ಈ ಎಲ್ಲಾ ಕಾಳಜಿ ಶಕ್ತಿ ಯೋಜನೆಯ ಹಿಂದೆ ಕೆಲಸ ಮಾಡಿದೆ" ಎಂದು ಸಿಎಂ ಹೇಳಿದರು.

ರಾಜ್ಯದಲ್ಲಿ ಪ್ರವಾಸೋದ್ಯಮ ಬೆಳೆದರೆ ದೇಶದ ಸಾಂಸ್ಕೃತಿಕ ಹೆಮ್ಮೆ ಹೆಚ್ಚುತ್ತದೆ ಮತ್ತು ಆರ್ಥಿಕತೆಗೆ ಉತ್ತೇಜನ ಸಿಗುತ್ತದೆ ಎಂದರು.

‘‘ಇತಿಹಾಸದ ಅರಿವಿಲ್ಲದವರು ಭವಿಷ್ಯ ರೂಪಿಸಿಕೊಳ್ಳಲಾರರು ಎಂಬ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಾತನ್ನು ಯಾರೂ ಮರೆಯಬಾರದು... ಇಂದಿನ ಪೀಳಿಗೆಗೆ ನಮ್ಮ ಇತಿಹಾಸ ಅರ್ಥವಾಗುವಂತೆ ಹಾಗೂ ನಮ್ಮ ಪರಂಪರೆಯ ಮಹತ್ವವನ್ನು ಮುಂದಿನ ಪೀಳಿಗೆಗೆ ತಿಳಿಸಲು ಸ್ಮಾರಕಗಳ ರಕ್ಷಣೆ ಅತ್ಯಗತ್ಯ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT