ಪ್ರಯಾಣಿಕರಿಲ್ಲದೆ ಬಣಗುಡುತ್ತಿರುವ ಕೆಂಪೇಗೌಡ ಬಸ್ ನಿಲ್ದಾಣ 
ರಾಜ್ಯ

ಕಾವೇರಿ ನೀರಿಗಾಗಿ ಬೆಂಗಳೂರು ಬಂದ್: ಬಣಗುಡುತ್ತಿರುವ ರಸ್ತೆಗಳು, ವ್ಯಾಪಾರ- ವಹಿವಾಟು ಸ್ತಬ್ಧ!

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ವಿವಿಧ ಸಂಘಟನೆಗಳು ಇಂದು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಳಗ್ಗೆ ಆರು ಗಂಟೆಯಿಂದಲೂ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದೆ.

ಶಾಪಿಂಗ್ ಮಾಲ್ ಗಳು ಕ್ಲೋಸ್ ಆಗಿದ್ದು, ಅವುಗಳ ಮುಂದೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.ವಾಹನಗಳ ದಟ್ಟಣೆಯಿಂದ ತುಂಬಿರುತ್ತಿದ್ದ ರಸ್ತೆಗಳು ಬಣಗುಡುತ್ತಿವೆ, ಸದಾ ಗಿಜಿಗುಡುತ್ತಿದ್ದ ಏರಿಯಾಗಳು ಖಾಲಿ, ಖಾಲಿ ಹೊಡೆಯುತ್ತಿವೆ. 

ಬಿಎಂಟಿಸಿ ಹಾಗೂ ಕೆಎಸ್ ಆರ್ ಟಿಸಿ ಬಸ್ ಗಳ ಸಂಚಾರವಿದ್ದರೂ ಪ್ರಯಾಣಿಕರಿಲ್ಲದೆ ಜನದಟ್ಟಣೆ ಪ್ರದೇಶಗಳಾದ ಮೆಜೆಸ್ಟಿಕ್, ಕೆ ಆರ್ ಮಾರ್ಕೆಟ್ ಮತ್ತಿತರ ಕಡೆಗಳಲ್ಲಿ ಪ್ರಯಾಣಿಕರ ಸಂಖ್ಯೆಯಲ್ಲಿ ತೀರಾ ವಿರಳವಾಗಿದೆ. ಬಂದ್ ನಿಂದಾಗಿ ರಾಜ್ಯದಲ್ಲಿ ಜನದಟ್ಟಣೆಯ ಬಸ್ ನಿಲ್ದಾಣಗಳಲ್ಲಿ ಒಂದಾದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕಾಣುತ್ತಿಲ್ಲ ಎಂದು ಕಂಡಕ್ಟರೊಬ್ಬರು ಹೇಳಿದರು. 

 ಆಟೋ ಚಾಲಕ ನಾಸೀರ್ ಖಾನ್ ಮಾತನಾಡಿ,ಬಂದ್ ಗೆ ನಮ್ಮ ಬೆಂಬಲವಿದೆ. ಕಾವೇರಿ ವಿಚಾರ ಬಂದಾಗ ನಮ್ಮ ನಿಲುವು ಸ್ಪಷ್ಪವಾಗಿದೆ. ಕರ್ನಾಟಕ ಯಾರಿಗೂ ನೀರು ಒದಗಿಸುವುದಿಲ್ಲ, ಆಟೋಗಳು ಇಂದು ಕಾರ್ಯ ನಿರ್ವಹಿಸಲ್ಲ, ನಾವು ಬಂದ್ ಗೆ ಬೆಂಬಲ ನೀಡುತ್ತಿದ್ದೇವೆ ಎಂದರು. 

ಖಾಸಗಿ ಸಾರಿಗೆ ಒಕ್ಕೂಟ ಬೆಂಗಳೂರು ಬಂದ್ ಗೆ ಬೆಂಬಲ ಸೂಚಿಸಿದ್ದು, ಮಕ್ಕಳ ಸುರಕ್ಷತೆ ದೃಷ್ಟಿಯಂದ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿ ನಿಯೋಜಿಸುವ ಮೂಲಕ ಬಿಗಿ ಭದ್ರತೆ ಒದಗಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT