ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಂಗಳೂರು: ಮಸೀದಿ ಆವರಣದಲ್ಲಿ 'ಜೈ ಶ್ರೀರಾಮ್' ಘೋಷಣೆ; ಇಬ್ಬರ ಬಂಧನ

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ಸಾಂದರ್ಭಿಕ ಚಿತ್ರ
Vishwanath S
Updated On : 26 Sept 2023, 5:08 pm

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀ ರಾಮ್ ಘೋಷಣೆ ಕೂಗಿದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ.

ಆರೋಪಿಗಳನ್ನು ಪುತ್ತೂರಿನ ಬಿಳಿನೆಲೆ ಗ್ರಾಮದ ಕೀರ್ತನ್ ಮತ್ತು ಮಂಗಳೂರಿನ ಕೈಕಂಬದ ಸಚಿನ್ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಬೀದರ್: ಮಸೀದಿ ಮೇಲೆ ಭಗವಾಧ್ವಜ ಹಾರಿಸಿದ ನಾಲ್ವರ ಬಂಧನ

Advertisement

Advertisement

ಬೈಕ್‌ನಲ್ಲಿ ಬಂದ ಆರೋಪಿಗಳು ಭಾನುವಾರ ರಾತ್ರಿ ಮಸೀದಿಯ ಆವರಣಕ್ಕೆ ನುಗ್ಗಿ ಘೋಷಣೆಗಳನ್ನು ಕೂಗಿದ್ದಾರೆ. ಘೋಷಣೆ ಶಬ್ದ ಕೇಳಿ ಹೊರಬಂದ ಮಸೀದಿಯ ಮೌಲಾನನ್ನು ನೋಡಿದ ಆರೋಪಿಗಳು ಅಲ್ಲಿಂದ ಪರಾರಿಯಾಗಿದ್ದರು.

ಈ ಘಟನೆ ಮಸೀದಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments