ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ಮಾರ್ಗ ಮಧ್ಯೆ ಮೂಗೂರಿನಲ್ಲಿ ಪ್ರತಿಭಟನಾ ನಿರತ ರೈತ ಸಮೂಹದ ಜತೆ ಕಾವೇರಿ ನೀರಿನ ಸಮಸ್ಯೆ ಕುರಿತು ಸಿಎಂ ಸಿದ್ದರಾಮಯ್ಯ ಚರ್ಚಿಸಿದರು. 
ರಾಜ್ಯ

CWRC ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ.

ಚಾಮರಾಜನಗರ: ಚಾಮರಾಜನಗರಕ್ಕೆ ಭೇಟಿ ನೀಡಿದರೆ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೌಢ್ಯ ನಂಬಿಕೆಯನ್ನು ಸಡ್ಡು ಸಿಎಂ ಸಿದ್ದರಾಮಯ್ಯ ಇಂದು ಬುಧವಾರ ಚಾಮರಾಜನಗರದ ಮಲೆ ಮಹದೇಶ್ವರಕ್ಕೆ ಭೇಟಿ ನೀಡಿದ್ದಾರೆ. ಕಳೆದ ರಾತ್ರಿ ಮಲೆ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ ಅವರು, ಎರಡನೇ ಬಾರಿಗೆ ಅವರು ಮುಖ್ಯಮಂತ್ರಿ ಆದ ಬಳಿಕ ಇದು ಮೊದಲ ಭೇಟಿಯಾಗಿದೆ. ಸಿಎಂ ಸ್ಥಾನದಲ್ಲಿದ್ದ ವೇಳೆ 13ನೇ ಬಾರಿಗೆ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದಾರೆ.

ಮಲೆ ಮಹದೇಶ್ವರ ಪ್ರಾಧಿಕಾರದಿಂದ ಆಯೋಜಿಸಿರುವ ಸಾಮೂಹಿಕ ವಿವಾಹದಲ್ಲಿ ಇಂದು ಬೆಳಗ್ಗೆ ಸಿಎಂ ಭಾಗಿಯಾಗಿದ್ದಾರೆ. ಸಾಮೂಹಿಕ ವಿವಾಹದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿರುವ 39 ಜೋಡಿ ಆಶೀರ್ವದಿಸಲಿದ್ದಾರೆ. ಬಳಿಕ ಸಿಎಂ ಅವರು ಪ್ರಾಧಿಕಾರದ ಅಧಿಕಾರಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ನಂತರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆಯಲಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ನಡೆಯಲಿರುವ ಚಾಮರಾಜನಗರದ ಕೆಡಿಪಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ನೀಡಿದರೆ ಆರು ತಿಂಗಳ ಒಳಗೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬ ಮೂಢನಂಬಿಕೆ ರಾಜ್ಯ ರಾಜಕೀಯ ನಾಯಕರಲ್ಲಿದೆ. ವೀರೇಂದ್ರ ಪಾಟೀಲ್ 1991 ರಲ್ಲಿ ಚಾಮರಾಜನಗರಕ್ಜೆ ಬಂದು ಹೋಗಿದ್ದೆ ಕೊನೆ. ನಂತರ ಚಾಮರಾಜನಗಕ್ಕೆ ಈ ಕಳಂಕ ಅಂಟಿಕೊಂಡಿತ್ತು. ಈ ಮೌಢ್ಯಕ್ಕೆ ಬೆದರಿ ಎಸ್. ಬಂಗಾರಪ್ಪ, ವೀರಪ್ಪ ಮೊಯ್ಲಿ, ಹೆಚ್.ಡಿ. ದೇವೇಗೌಡ, ಜೆ.ಎಚ್. ಪಟೇಲ್, ಎಸ್.ಎಂ. ಕೃಷ್ಣ, ಧರಂಸಿಂಗ್ ಅವರು ಚಾಮರಾಜನಗರಕ್ಕೆ ಕಾಲಿಟ್ಟಿರಲಿಲ್ಲ.

ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ

ಈ ವೇಳೆ ಮಲೆಮಹದೇಶ್ವರ ಬೆಟ್ಟದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ತಮಿಳುನಾಡಿಗೆ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ್ದಾರೆ. CWRC ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ, ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ನೀರು ವಿಚಾರದಲ್ಲಿ ಬಿಜೆಪಿ, ಜೆಡಿಎಸ್ ರಾಜಕೀಯ ಮಾಡುತ್ತಿವೆ ಎಂದು ಆರೋಪಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT