ರಾಜ್ಯ

ನಾಗಮಂಗಲ ಬಳಿ ಭೀಕರ ಅಪಘಾತ: ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ; ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ.

ಬೆಳ್ಳೂರು ಕ್ರಾಸ್(ಆದಿಚುಂಚನಗಿರಿ): ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ.

ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದವರು.

ಬೆಂಗಳೂರು-ಮಂಗಳೂರು ಹೆದ್ದಾರಿಯ ನಾಗಮಂಗಲ ಸಮೀಪ ಈ ಭೀಕರ ಅಪಘಾತ ಸಂಭವಿಸಿದೆ. ಹಾಸನ ಕಡೆಯಿಂದ ಬೆಂಗಳೂರು ಕಡೆಗೆ ಪ್ರಯಾಣಿಸುತ್ತಿದ್ದ ಕೆಎಸ್ ಆರ್ ಟಿಸಿ ಬಸ್ಸನ್ನು ಆದಿಚುಂಚನಗಿರಿ ಮೆಡಿಕಲ್ ಆಸ್ಪತ್ರೆ ಎದುರು ಜನರನ್ನು ಇಳಿಸಲು ನಿಲ್ಲಿಸಲಾಗಿತ್ತು. ಈ ಸಂದರ್ಭದಲ್ಲಿ ವೇಗವಾಗಿ ಹಿಂದಿನಿಂದ ಬಂದ ಕಾರು ನಿಂತಿದ್ದ ಬಸ್ ಗೆ ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಕಾರಿನಲ್ಲಿದ್ದ ಓರ್ವ ಮಹಿಳೆ, ಮೂವರು ಪುರುಷರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಮೃತಪಟ್ಟವರು ಬೆಂಗಳೂರು ಮೂಲದವರಾಗಿದ್ದಾರೆ. ಬೆಳ್ಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಪ್ರತಿ ಕುಟುಂಬಕ್ಕೆ ವಾರ್ಷಿಕ 60 ಸಾವಿರ ರೂ.ಗಳ ಆರ್ಥಿಕ ಬಲ- ಸಿಎಂ ಸಿದ್ದರಾಮಯ್ಯ

ಯೋಗ್ಯತಾ ಪರವಾನಗಿ ಇಲ್ಲದೆ ಎಂಟು ಬಾರಿ ವಿಮಾನ ಹಾರಾಟ: ಏರ್ ಇಂಡಿಯಾಕ್ಕೆ 1 ಕೋಟಿ ರೂ.ದಂಡ!

T-20 ವಿಶ್ವಕಪ್ 2026: ನೆದರ್ ಲ್ಯಾಂಡ್ಸ್ ವಿರುದ್ಧ 93 ರನ್ ಅಂತರದಿಂದ ಗೆದ್ದ ಅಮೆರಿಕ!

ಅಧಿಕಾರಿ ವರ್ಗಾವಣೆಗಾಗಿ ಸಿಎಂ ಸಿದ್ದರಾಮಯ್ಯರ ನಕಲಿ ಟಿಪ್ಪಣಿ: ಪೊಲೀಸ್ ಕೇಸ್ ದಾಖಲು!

ಹೊಸ PMO ಕಚೇರಿ 'ಸೇವಾ ತೀರ್ಥ' ಕಟ್ಟಡಕ್ಕೆ ಪ್ರಧಾನಿ ಮೋದಿ ಸ್ಥಳಾಂತರ: ಮೊದಲ ದಿನವೇ ಹಲವು ಪ್ರಮುಖ ನಿರ್ಧಾರ!

SCROLL FOR NEXT