ಸಾಂದರ್ಭಿಕ ಚಿತ್ರ 
ರಾಜ್ಯ

100 ಬಾರಿ ಟ್ರಾಫಿಕ್ ನಿಯಮ ಉಲ್ಲಂಘನೆ: ಕೊರಿಯೋಗ್ರಾಫರ್‌ ಗೆ 56,000 ರೂ. ದಂಡ!

99 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಕೊರಿಯೋಗ್ರಾಫರ್‌ ಒಬ್ಬರು100ನೇ ಉಲ್ಲಂಘನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆದ ಬಳಿಕ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ರೂ. 56,000 ದಂಡವನ್ನು ಹಾಕಿದ್ದಾರೆ.

ಬೆಂಗಳೂರು: 99 ಬಾರಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದ್ದ ಕೊರಿಯೋಗ್ರಾಫರ್‌ ಒಬ್ಬರು100ನೇ ಉಲ್ಲಂಘನೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವೈರಲ್ ಆದ ಬಳಿಕ ಪೊಲೀಸರ ಕೈಗೆ ಸಿಕ್ಕಿ ಬಿದ್ದಿದ್ದು, ರೂ. 56,000 ದಂಡವನ್ನು ಹಾಕಿದ್ದಾರೆ. ಸ್ಕೂಟರ್ ವಶಕ್ಕೆ ಪಡೆದಿರುವ ಪೊಲೀಸರು, ದಂಡ ಪಾವತಿಸಲು ಎರಡು ತಿಂಗಳ ಕಾಲಾವಕಾಶ ನೀಡಿದ್ದಾರೆ. ಇಲ್ಲದಿದ್ದರೆ (ಪ್ರಸ್ತುತ ಮೌಲ್ಯ ರೂ. 15,000ಕ್ಕೆ) ಹರಾಜು ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

ವೈರಲ್ ಆಗಿರುವ ವೀಡಿಯೊದಲ್ಲಿ, ನೃತ್ಯ ನಿರ್ದೇಶಕರು ಬನ್ನೇರುಘಟ್ಟ ರಸ್ತೆಯ ವೇಗಾ ಸಿಟಿ ಜಂಕ್ಷನ್ ಬಳಿ ವಿರುದ್ಧ ದಿಕ್ಕಿನಲ್ಲಿ ಅಪಾಯಕಾರಿಯಾಗಿ ಸವಾರಿ ಮಾಡುತ್ತಿರುವುದು, ಇತರ ಪ್ರಯಾಣಿಕರಿಗೆ ಬೆದರಿಕೆಯನ್ನುಂಟು ಮಾಡುತ್ತಿರುವುದು ಕಾಣುತ್ತಿದೆ. ಇದು ಕಾರಿನ ಡ್ಯಾಶ್‌ಕ್ಯಾಮ್‌ನಿಂದ ಸ್ಪಷ್ಟವಾಗಿ ಸೆರೆಹಿಡಿಯಲ್ಪಟ್ಟಿದೆ.

ನಿಯಮ ಉಲ್ಲಂಘಿಸಿದ ಕೊರಿಯೋಗ್ರಾಫರ್ ನನ್ನು ಬಿಳೇಕಹಳ್ಳಿ ನಿವಾಸಿ ಹಸನ್ ರೆಹಮಾನ್ (25) ಎಂದು ಗುರುತಿಸಲಾಗಿದೆ. ರೆಹಮಾನ್ ಬಿಟಿಎಂ ಎರಡನೇ ಹಂತದಲ್ಲಿ ಡ್ಯಾನ್ಸ್ ಸ್ಟುಡಿಯೋ ನಡೆಸುತ್ತಿದ್ದಾರೆ. ಸಂಚಾರ ಉಲ್ಲಂಘನೆಗಳಲ್ಲಿ ಹೆಲ್ಮೆಟ್ ಇಲ್ಲದೆ ವಾಹನ ಚಲಾಯಿಸಿದ 54 ಪ್ರಕರಣಗಳು, 34 ದೋಷಪೂರಿತ ನಂಬರ್ ಪ್ಲೇಟ್ ಪ್ರಕರಣಗಳು, ವಾಹನ ಚಲಾಯಿಸುವಾಗ ಮೊಬೈಲ್ ಬಳಸಿದ ಐದು ಪ್ರಕರಣಗಳು, ನೋ ಎಂಟ್ರಿ ಮೂರು ಮತ್ತು ನೋ ಪಾರ್ಕಿಂಗ್, ಜೀಬ್ರಾ ಕ್ರಾಸಿಂಗ್‌ನಲ್ಲಿ ಪಾರ್ಕಿಂಗ್ ಮತ್ತು ಟ್ರಿಪಲ್ ರೈಡಿಂಗ್ ಸೇರಿದಂತೆ ತಲಾ ಒಂದು ಪ್ರಕರಣಗಳು ಸೇರಿವೆ ಎಂದು ಪೊಲೀಸರು ಹೇಳಿದ್ದಾರೆ. 

ನಿಯಮ ಉಲ್ಲಂಘಿಸಿದ್ದಕ್ಕಾಗಿ ವಾಹನವನ್ನು ವಶಪಡಿಸಿಕೊಂಡಿದ್ದೇವೆ. ಅವರ ಚಾಲನಾ ಪರವಾನಗಿಯನ್ನು ಅಮಾನತುಗೊಳಿಸಲು ಶಿಫಾರಸು ಮಾಡಲಾಗಿದೆ ಎಂದು ಸಂಚಾರ (ದಕ್ಷಿಣ) ಉಪ ಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ತಿಳಿಸಿದ್ದಾರೆ. 56,000 ರೂ. ಪಾವತಿಸಲು ರೆಹಮಾನ್‌ಗೆ ಎರಡು ತಿಂಗಳ ಕಾಲಾವಕಾಶ ನೀಡಲಾಗಿದೆ. ಎರಡು ತಿಂಗಳಲ್ಲಿ ದಂಡ ಪಾವತಿಸುವಲ್ಲಿ ವಿಫಲವಾದರೆ, ಅವರ ವಾಹನವನ್ನು ಹರಾಜು ಮಾಡಲಾಗುವುದು ಎಂದು ಮೈಕೋ ಲೇಔಟ್ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಐಪಿಸಿ ಮತ್ತು ಭಾರತೀಯ ಮೋಟಾರ್ ವಾಹನ (ಐಎಂವಿ) ಕಾಯ್ದೆಯಡಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT