ಮೀನುಗಾರರು 
ರಾಜ್ಯ

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ರಕ್ಷಿಸಿದ ಭಾರತೀಯ ಕೋಸ್ಟ್ ಗಾರ್ಡ್ 

ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. 

ಮಂಗಳೂರು: ಮಂಗಳೂರಿನ ಕಡಲ ಪ್ರದೇಶದಲ್ಲಿ ಸಿಲುಕಿದ್ದ 10 ಮೀನುಗಾರರನ್ನು ಭಾರತೀಯ ಕೋಸ್ಟ್ ಗಾರ್ಡ್ ರಕ್ಷಣೆ ಮಾಡಿದೆ. 

ಮೀನುಗಾರಿಕಾ ಇಲಾಖೆಯ ಸಹಯೋಗದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು,  ದೋಣಿಯಲ್ಲಿದ್ದು ಆಳ ನೀರು ಪ್ರದೇಶದಲ್ಲಿ ಸಿಲುಕಿಕೊಂಡಿದ್ದ 10 ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ತಿರ್ಚೆಂದೂರ್ ಮುರುಗನ್ ಬೋಟ್ ನಲ್ಲಿದ್ದ 10 ಮೀನುಗಾರರು ಸೆ.20 ರಂದು ಕಡಲ ಪ್ರದೇಶದಲ್ಲಿ ಪ್ರಯಾಣ ಆರಂಭಿಸಿದ್ದರು. ಆದರೆ ಸೆ.24 ರಂದು ಇಂಜಿನ್ ಶಾಫ್ಟ್ ಸಮಸ್ಯೆಯ ಪರಿಣಾಮ  39 ನಾಟಿಕಲ್ ಮೈಲಿಗಳಷ್ಟು ದೂರದಲ್ಲಿ ಮೀನುಗಾರರು ಸಿಲುಕಿದ್ದರು. 

ಅಧಿಕಾರಿಗಳ ಪ್ರಕಾರ, ಮುಂಬೈನ ಕಡಲ ರಕ್ಷಣಾ ಸಮನ್ವಯ ಕೇಂದ್ರ ಸಿಲುಕಿದ್ದ ಮೀನುಗಾರಿಕಾ ದೋಣಿಯಿಂದ ದುರಂತದ ಸಂಕೇತವನ್ನು ಸ್ವೀಕರಿಸಿ ಗುರುವಾರ ಅದನ್ನು ಕರಾವಳಿ ರಕ್ಷಣಾ ಪಡೆ ಜಿಲ್ಲಾ ಕೇಂದ್ರಕ್ಕೆ (ಕರ್ನಾಟಕ) ರವಾನಿಸಿತ್ತು.

ಭಾರತೀಯ ಕೋಸ್ಟ್ ಗಾರ್ಡ್ ಪರಿಸ್ಥಿತಿಯ ತುರ್ತುಸ್ಥಿತಿಯನ್ನು ಗುರುತಿಸಿ, ತಕ್ಷಣವೇ ಕಾರ್ಯಪ್ರವೃತ್ತವಾಗಿದೆ ಮತ್ತು ಸಿಲುಕಿದ್ದ ಮೀನುಗಾರಿಕಾ ದೋಣಿಗೆ ಸಹಾಯ ಮಾಡಲು ಕೋಸ್ಟ್ ಗಾರ್ಡ್ ಹಡಗುಗಳಾದ C-448 ಮತ್ತು C-446 ಅನ್ನು ನಿಯೋಜಿಸಿತ್ತು.

ಸುಧಾರಿತ ನ್ಯಾವಿಗೇಷನ್ ಮತ್ತು ಟೋಯಿಂಗ್ ಸಾಮರ್ಥ್ಯಗಳನ್ನು ಹೊಂದಿರುವ ಈ ಹಡಗುಗಳು ಪ್ರಯಾಣದ ಉದ್ದಕ್ಕೂ "ತಿರುಚೆಂದೂರ್ ಮುರುಗನ್" ನ ಎಳೆಯುವ ಪ್ರಕ್ರಿಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT