ರಾಜ್ಯ

ಎಂಎಸ್ ಸ್ವಾಮಿನಾಥನ್ ಸಲಹೆಗಳಿಂದ ಹೆಚ್ಚಿನ ಲಾಭ ಆಗಿತ್ತು: ವಿಜ್ಞಾನಿ ನಿಧನಕ್ಕೆ ಮಾಜಿ ಪ್ರಧಾನಿ ದೇವೇಗೌಡ ಸಂತಾಪ

Vishwanath S

ಬೆಂಗಳೂರು: ಖ್ಯಾತ ವಿಜ್ಞಾನಿ ಎಂ ಎಸ್ ಸ್ವಾಮಿನಾಥನ್ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಗುರುವಾರ ಸಂತಾಪ ವ್ಯಕ್ತಪಡಿಸಿದ್ದು, ಹಲವು ಸಂದರ್ಭಗಳಲ್ಲಿ ಅವರ ಸಲಹೆಗಳಿಂದ ಹೆಚ್ಚಿನ ಪ್ರಯೋಜನ ಪಡೆದಿದ್ದೇನೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಹಸಿರು ಕ್ರಾಂತಿಯ ಪಿತಾಮಹ ಎಂದು ಕರೆಯಲ್ಪಡುವ 98 ವರ್ಷದ ಸ್ವಾಮಿನಾಥನ್ ಅವರ ವಯೋಸಹಜ ಅನಾರೋಗ್ಯದಿಂದ ಇಂದು ನಿಧನರಾಗಿದ್ದರು.

ಎಂಎಸ್ ಸ್ವಾಮಿನಾಥನ್ ಅವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸ್ವಾಮಿನಾಥನ್ ಅವರ ಪತ್ನಿ ಮಿನಾ ಸ್ವಾಮಿನಾಥನ್ ಅವರು ಶಾಲಾಪೂರ್ವ ಶಿಕ್ಷಣ ಕ್ಷೇತ್ರದಲ್ಲಿ ಭಾರತೀಯ ಶಿಕ್ಷಣತಜ್ಞರಾಗಿದ್ದರು. ಕಳೆದ ವರ್ಷ ಮಾರ್ಚ್‌ನಲ್ಲಿ ಅವರು ಕೊನೆಯುಸಿರೆಳೆದಿದ್ದರು.

ದೇವೇಗೌಡರು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು ಡಾ. ಎಂಎಸ್‌ ಸ್ವಾಮಿನಾಥನ್ ಅವರ ನಿಧನದಿಂದ ನಾನು ದುಃಖಿತನಾಗಿದ್ದೇನೆ. ಅನೇಕ ಸಂದರ್ಭಗಳಲ್ಲಿ ಅವರ ಸಲಹೆಯಿಂದ ನಾನು ಹೆಚ್ಚು ಪ್ರಯೋಜನ ಪಡೆದಿದ್ದೇನೆ. ಇತ್ತೀಚಿನವರೆಗೂ ಅವರೊಂದಿಗೆ ಸಂಪರ್ಕದಲ್ಲಿದ್ದೇನೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಬರೆದುಕೊಂಡಿದ್ದಾರೆ.

SCROLL FOR NEXT