ವಿಮಾನ, ಬಸ್ ಸೇವೆ ರದ್ದು 
ರಾಜ್ಯ

ಕರ್ನಾಟಕ ಬಂದ್: 44 ವಿಮಾನಗಳನ್ನು ರದ್ದು; ಬಸ್ ಸೇವೆ ವ್ಯತ್ಯಯ; ಪ್ರಯಾಣಿಕರಿಗೆ ಸಂಕಷ್ಟ!

ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಂದ್‌ನಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಹೊರಡುವ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕ ಬಂದ್‌ನಿಂದಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಮತ್ತು ಹೊರಡುವ 44 ವಿಮಾನಗಳನ್ನು ರದ್ದುಗೊಳಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಅದೇ ರೀತಿ, ರಾಜ್ಯ ಸಾರಿಗೆ ನಿಗಮ ಕೂಡಾ ಹಲವು ಬಸ್ ಸೇವೆಗಳನ್ನು ರದ್ದುಗೊಳಿಸಿದೆ. ವಿಶೇಷವಾಗಿ ಕಾವೇರಿ ಜಲಾನಯನ ಜಿಲ್ಲೆಗಳಾದ ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಬಂದ್ ಹೆಚ್ಚು ಪರಿಣಾಮ ಬೀರಿತು. ಕೆಲವು ಪ್ರಯಾಣಿಕರು ತಾವು ತೆರಳಬೇಕಿದ್ದ  ವಿಮಾನಗಳು, ಬಸ್‌ಗಳು ಮತ್ತು ರೈಲುಗಳನ್ನು ಕಳೆದುಕೊಂಡಿದ್ದರಿಂದ ಸಂಕಷ್ಟದ ಪರಿಸ್ಥಿತಿ ಎದುರಿಸಿದರು. 

'ಇಂದು 44 ವಿಮಾನಗಳನ್ನು ರದ್ದುಗೊಳಿಸಿದ್ದೇವೆ. ಬಂದ್ ನಿಂದಾಗಿ ಬೆಂಗಳೂರಿಗೆ ತೆರಳಬೇಕಿದ್ದ 22 ವಿಮಾನಗಳು ಮತ್ತು ಹೊರಡಬೇಕಿದ್ದ ವಿಮಾನಗಳು ಇದರಲ್ಲಿ ಸೇರಿವೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
59 ಬಸ್ ಗಳು ಮಾತ್ರ ಇದೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ತಿಳಿಸಿದೆ.ಕರ್ನಾಟಕದ ದಕ್ಷಿಣ ಭಾಗಗಳಲ್ಲಿ  88 ರಷ್ಟು ಬಸ್‌ಗಳು ಕಾರ್ಯನಿರ್ವಹಿಸುತ್ತಿವೆ.

ಮೈಸೂರು ಹಾಗೂ ಚಾಮರಾಜನಗರ ವಿಭಾಗದಲ್ಲಿ ಸಾರಿಗೆ ಸಂಸ್ಥೆಗೆ ಹೆಚ್ಚಿನ ನಷ್ಟ ಉಂಟಾಗಿದೆ. ಮೈಸೂರಿನಲ್ಲಿ 447 ಬಸ್ ಗಳ ಪೈಕಿ ಕೇವಲ 7 ಬಸ್ ಗಳು ಓಡಾಡುತ್ತಿದ್ದರೆ ಚಾಮರಾಜನಗರದಲ್ಲಿ 247 ಬಸ್‌ಗಳ ಪೈಕಿ 8 ಬಸ್ ಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ.

ದಕ್ಷಿಣ ಕರ್ನಾಟಕದ ಬಸ್ ನಿಲ್ದಾಣಗಳು ಮತ್ತು ರೈಲು ನಿಲ್ದಾಣಗಳು ಮತ್ತು ಬೆಂಗಳೂರಿನ ವಿಮಾನ ನಿಲ್ದಾಣಗಳಲ್ಲಿ ವಿರಳ ಸಂಖ್ಯೆಯಲ್ಲಿ ಪ್ರಯಾಣಿಕರು ಕಂಡುಬಂದರು.  ರೈತರು ಮತ್ತು ಕನ್ನಡ ಪರ ಸಂಘಟನೆಗಳು ವಿಮಾನ ನಿಲ್ದಾಣದ ಹೊರಗೆ ಪ್ರತಿಭಟನೆ ನಡೆಸಿದರು. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಗಮನ  ಗೇಟ್ ಬಳಿ ಜಮಾಯಿಸಿದ ಕನ್ನಡ ಪರ ಸಂಘಟನೆಗಳ ಗುಂಪು  ಘೋಷಣೆಗಳನ್ನು ಕೂಗಲು ಪ್ರಾರಂಭಿಸುತ್ತಿದ್ದಂತೆಯೇ ಅವರನ್ನು ಪೊಲೀಸರು ತಡೆದರು. 

ಮುನ್ನೆಚ್ಚರಿಕೆ ಕ್ರಮವಾಗಿ 12 ಜನರನ್ನು ವಶಕ್ಕೆ ಪಡೆದಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅದೇ ರೀತಿ ಬಸ್ ನಿಲ್ದಾಣಗಳಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಬ್ಯಾನರ್, ಭಿತ್ತಿಪತ್ರ, ಭಿತ್ತಿಪತ್ರಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದರು. ಬೆಂಗಳೂರು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರದಲ್ಲಿ ಹಲವು ರಸ್ತೆಗಳನ್ನು ಪ್ರತಿಭಟನಾಕಾರರು ತಡೆದಿದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT