ರಾಜ್ಯ

ಬೆಳಗಾವಿಯಲ್ಲಿ ಮೋಡ ಬಿತ್ತನೆ ಕಾರ್ಯ ಆರಂಭ: ಪ್ರಯೋಗ ಯಶಸ್ವಿಯಾದರೆ ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಯತ್ನ!

Sumana Upadhyaya

ಬೆಳಗಾವಿ: ಈ ವರ್ಷ ಮುಂಗಾರು ಮಳೆ ಕೈಕೊಟ್ಟು ಬರಗಾಲದಿಂದ ತತ್ತರಿಸಿ ಹೋಗಿರುವ ರೈತರ ನೆರವಿಗೆ ಬೆಳಗಾವಿ ಜಿಲ್ಲೆಯಲ್ಲಿ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್ ನಿನ್ನೆ ಶುಕ್ರವಾರ ಮೋಡ ಬಿತ್ತನೆ ಕಾರ್ಯ(Cloud seeding) ನಡೆಸಿತು. 

ಸಕ್ಕರೆ ಕಾರ್ಖಾನೆಯನ್ನು ನಡೆಸುತ್ತಿರುವ ಲೋಕೋಪಯೋಗಿ ಸಚಿವ ಸಚಿವ ಸತೀಶ್ ಜಾರಕಿಹೊಳಿ ಅವರ ಮೇಲ್ವಿಚಾರಣೆಯಲ್ಲಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ 3 ದಿನಗಳ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಮೋಡ ಬಿತ್ತನೆಗೆ ಮುಂದಾಗಲು ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆಯಲು 20 ದಿನಗಳನ್ನು ತೆಗೆದುಕೊಂಡಿದ್ದೇನೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಗೋಕಾಕ ಮತ್ತು ಖಾನಾಪುರ ವಲಯದ ಆಕಾಶದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ವಾರಾಂತ್ಯದಲ್ಲಿ ಜಿಲ್ಲೆಯ ಇತರ ಭಾಗಗಳಲ್ಲಿ ನಡೆಯಲಿದೆ. ಮೋಡ ಬಿತ್ತನೆ ಪ್ರತಿದಿನ ಮೂರು ಗಂಟೆಗಳ ಕಾಲ ನಡೆಯಲಿದೆ. ಮೋಡ ಬಿತ್ತನೆ ನಂತರ ಬೆಳಗಾವಿ ಜಿಲ್ಲೆಯ ಒಣ ಪ್ರದೇಶಗಳಲ್ಲಿ ಮಳೆಯಾದರೆ ಉತ್ತಮ ಎಂದು ಸಚಿವರು ಹೇಳಿದರು. 

ಮೋಡ ಬಿತ್ತನೆ ಕಾರ್ಯ ಯಶಸ್ವಿಯಾದರೆ, ಸರ್ಕಾರದಿಂದ ಅನುಮೋದನೆ ದೊರೆತರೆ ಬೆಳಗಾವಿ ಶುಗರ್ಸ್ ಪ್ರೈವೇಟ್ ಲಿಮಿಟೆಡ್‌ನಿಂದ ಕಾವೇರಿ ಜಲಾನಯನ ಪ್ರದೇಶದ ಮಡಕೇರಿ ಮತ್ತು ಹಾಸನದಂತಹ ಪ್ರದೇಶಗಳಲ್ಲಿ ಮೋಡ ಬಿತ್ತನೆ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಶಾಸಕ ಪ್ರಕಾಶ ಕೋಳಿವಾಡ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ ಇತ್ತೀಚೆಗೆ ಮೋಡ ಬಿತ್ತನೆ ಮಾಡಿದ ಪರಿಣಾಮ 5 ರಿಂದ 30 ಮಿ.ಮೀ ಮಳೆಯಾಗಿದೆ.

ಈ ವಿಮಾನವನ್ನು ಕ್ಯಾಪ್ಟನ್ ವೀರೇಂದ್ರ ಸಿಂಗ್ ಮತ್ತು ಕ್ಯಾಪ್ಟನ್ ಆದರ್ಶ್ ಪಾಂಡೆ ಪೈಲಟ್ ಮಾಡಿದ್ದಾರೆ. ಕಡಿಮೆ ಎತ್ತರದಲ್ಲಿರುವ ಮೋಡಗಳನ್ನು ಹಿಡಿಯಲು CACL-2 ಅಯೋಡೈಡ್ ನ್ನು ಸಿಂಪಡಿಸಲಾಗುತ್ತದೆ. 20,000 ಅಡಿ ಮತ್ತು ಅದಕ್ಕಿಂತ ಹೆಚ್ಚಿನ ಎತ್ತರದಲ್ಲಿರುವ ಮೋಡಗಳಿಗೆ ಸಿಲ್ವರ್ ಅಯೋಡೈಡ್ ನ್ನು ಸಿಂಪಡಿಸಲಾಗುತ್ತದೆ.

SCROLL FOR NEXT