ಮೃತ ದಂಪತಿ 
ರಾಜ್ಯ

ಉಡುಪಿ: ವಿದ್ಯುತ್ ಸ್ಪರ್ಶಿಸಿ ದಂಪತಿ ದುರ್ಮರಣ!

ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ-ಪತ್ನಿ ಮೃತಪಟ್ಟಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ(55), ಪತ್ನಿ ಲಕ್ಷ್ಮಿ ದೇವಾಡಿಗ(49) ಮೃತರು.

ಉಡುಪಿ: ಮುರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಪತಿ-ಪತ್ನಿ ಮೃತಪಟ್ಟಿರುವ ಘಟನೆ ಕುಂದಾಪುರ ಹೆಮ್ಮಾಡಿ ಸಮೀಪದ ಸುಳ್ಸೆ ಕರಣಿಕರ ಮನೆ ಬಳಿ ನಡೆದಿದೆ. ಮಹಾಬಲ ದೇವಾಡಿಗ(55), ಪತ್ನಿ ಲಕ್ಷ್ಮಿ ದೇವಾಡಿಗ(49) ಮೃತರು.

ಮೃತರನ್ನು ಮಹಾಬಲ ದೇವಾಡಿಗ (55) ಮತ್ತು ಅವರ ಪತ್ನಿ ಲಕ್ಷ್ಮಿ (48) ಎಂದು ಗುರುತಿಸಲಾಗಿದೆ. ಅವರು ಸುಳ್ಸೆಯ ಯಕ್ಷಿ ಬ್ರಹ್ಮ ನಂದಿಕೇಶ್ವರ ದೇವಸ್ಥಾನದ ಬಳಿ ವಾಸಿಸುತ್ತಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.

ಮಹಾಬಲ ದೇವಾಡಿಗ ದಿನಗೂಲಿ ಕೆಲಸ ಮಾಡುತ್ತಿದ್ದರು. ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಪತಿ ಮನೆಗೆ ಬಾರದಿರುವುದನ್ನು ಗಮನಿಸಿದ ಲಕ್ಷ್ಮಿ ತನ್ನ ಪತಿಯನ್ನು ಹುಡುಕಿಕೊಂಡು ಹೋದಾಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದನ್ನು ನೋಡಿದ್ದಾಳೆ. ಪತಿಯನ್ನು ರಕ್ಷಿಸಲು ಹೋಗಿ ಆಕೆಯು ಸಾವನ್ನಪ್ಪಿದ್ದಾಳೆ.

ತುಂಡಾಗಿದ್ದ ತಂತಿಯನ್ನು ಕೆಳಗೇ ಬಿಟ್ಟು ನಿರ್ಲಕ್ಷ್ಯ ತೋರಿದ ಮೆಸ್ಕಾಂ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಈಗಿರುವ ತಂತಿ 30 ರಿಂದ 35 ವರ್ಷಗಳಷ್ಟು ಹಳೆಯದಾಗಿದ್ದು, ಈ ಬಗ್ಗೆ ಮೆಸ್ಕಾಂನಲ್ಲಿ ಸಂಬಂಧಪಟ್ಟವರ ಗಮನಕ್ಕೆ ತಂದರೂ ಬದಲಾಯಿಸಿಲ್ಲ ಎಂದು ಆರೋಪಿಸಿದ್ದಾರೆ.

ಗ್ರಾಮೀಣ ಪ್ರದೇಶದ ಮಕ್ಕಳು ತಮ್ಮ ಶಾಲೆಗೆ ಬೇಗ ತಲುಪಲು ದೂರ ಕಡಿಮೆ ಮಾಡಲು ಇದೇ ಮಾರ್ಗ ಬಳಸುತ್ತಾರೆ . ಕೂಡಲೇ ಮೆಸ್ಕಾಂ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಶಾಸಕ ಗೋಪಾಲ ಪೂಜಾರಿ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಮತ್ತಿತರರು ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನವರಾತ್ರಿ ವೇಳೆ ಸಂಸತ್ತಿನ ವಿಶೇಷ ಅಧಿವೇಶನ ?: ಮಹಿಳಾ ಮೀಸಲಾತಿ- ಕ್ಷೇತ್ರ ಪುನರ್‌ವಿಂಗಡಣೆ ಚರ್ಚೆ ಸಾಧ್ಯತೆ

'ಒಪ್ಪಂದಕ್ಕೆ ಬನ್ನಿ, ಇಲ್ಲವೇ ನರಕಕ್ಕೆ ಹೋಗಿ': ವಿಶ್ವಸಂಸ್ಥೆಯಲ್ಲಿ Iran ವಿರುದ್ಧ Trump ಗುಡುಗು; India-Pak ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಚಾರ..!

ಮುಳುವಾಯ್ತಾ ಓಲೈಕೆ ರಾಜಕಾರಣ?; ಯಾದವರು 7%, ಮುಸ್ಲಿಮರು 22%, ನಮ್ಮಲ್ಲೇ CM ಅಭರ್ಥಿ ಮಾಡಿ, ಅಖಿಲೇಶ್ ಯಾದವ್`ಗೆ ಮೌಲಾನಾ ಗಡುವು!

ಹಬ್ಬದ ಸಂಭ್ರಮದ ನಡುವೆ ದುರಂತ; ಕೊಯೆಲ್ ನದಿಯಲ್ಲಿ ಮೂವರು ಅಪ್ರಾಪ್ತರು ಸೇರಿ 5 ಮಂದಿ ಜಲಸಮಾಧಿ!

ಆರ್ಥಿಕ ಸಂಕಷ್ಟದಲ್ಲಿ ರಾಜ್ಯ ಸರ್ಕಾರ: ಯಾವ ಯೋಜನೆ ಕೈಬಿಡಬೇಕು, ಯಾವುದು ಜಾರಿಗೆ ತರಬೇಕೆಂಬುದು ನನಗೆ ಗೊತ್ತು; ಹಣಕಾಸು ಇಲಾಖೆ ಸಲಹೆ ಬೆನ್ನಲ್ಲೇ ಡಿಕೆಶಿ ಸ್ಪಷ್ಟನೆ