ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ 
ರಾಜ್ಯ

ಸಚಿವರು, ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ; ಚುನಾವಣಾಧಿಕಾರಿಗೆ ಬಿಜೆಪಿ ದೂರು

Ramyashree GN

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವರು ಮತ್ತು ಶಾಸಕರ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆಗಳು ಮುಂದುವರಿದಿರುವ ಬಗ್ಗೆ ಬಿಜೆಪಿ ಭಾನುವಾರ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದೆ.

ಪಕ್ಷದ ಶಾಸಕ ಹಾಗೂ ಮಾಜಿ ಸಚಿವ ಎಸ್ ಸುರೇಶ್ ಕುಮಾರ್ ನೇತೃತ್ವದ ಬಿಜೆಪಿ ಮುಖಂಡರ ನಿಯೋಗವು ಕಾಂಗ್ರೆಸ್ ಸಚಿವರು ಮತ್ತು ಶಾಸಕರು ಸರ್ಕಾರಿ ಕಟ್ಟಡಗಳಲ್ಲಿ ಯಾವುದೇ ರಾಜಕೀಯ ಚಟುವಟಿಕೆ ನಡೆಸದಂತೆ ನಿರ್ಬಂಧಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

'ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ವಿಧಾನಸೌಧವನ್ನೇ ಕಾಂಗ್ರೆಸ್ ಕಚೇರಿ ಎಂದು ಭಾವಿಸಿರುವಂತಿದೆ. ಮಾರ್ಚ್ 30ರಂದು ಶಿವಕುಮಾರ್ ಅವರು ನಜ್ಮಾ ನಜೀರ್ ಚಿಕ್ಕನೇರಳೆ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ' ಎಂದು ಬಿಜೆಪಿ ಹೇಳಿದೆ.

ಡಿಕೆ ಶಿವಕುಮಾರ್ ಸರ್ಕಾರಿ ಕಚೇರಿಯಲ್ಲಿ ರಾಜಕೀಯ ಕಾರ್ಯಕ್ರಮ ಆಯೋಜಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ. ಇದು ರಾಜ್ಯದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಅವರ ಮೂಗಿನ ಕೆಳಗೆ ನಡೆಯುತ್ತಿದ್ದರೂ, ಅವರ ಸ್ಪಷ್ಟ ನಿಷ್ಕ್ರಿಯತೆ ಆತಂಕಕಾರಿಯಾಗಿದೆ ಎಂದು ಆರೋಪಿಸಿದರು.

ಲೋಕಸಭೆ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ, ಸರ್ಕಾರಿ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಜಾರಿ ಮಾಡದಿರುವುದು ಸ್ಪಷ್ಟವಾಗಿ ಕಾಣಿಸುತ್ತಿದೆ. ಹಲವಾರು ಆಡಳಿತ ಪಕ್ಷದ ಶಾಸಕರ ಕಚೇರಿಗಳೊಳಗೆ ಪಕ್ಷದ ಚಟುವಟಿಕೆಗಳು ಇನ್ನೂ ನಡೆಯುತ್ತಿವೆ ಎಂದು ಚುನಾವಣಾಧಿಕಾರಿಗಳಿಗೆ ಮಾಹಿತಿ ನೀಡಿದೆ.

ವಿಧಾನಸೌಧ ಮತ್ತು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗಳಿಂದಲೇ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. 'ಮಾರ್ಚ್ 25 ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸ ಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದು ಕೂಡ ಉದಾಹರಣೆಯಾಗಿದೆ. ಚುನಾವಣಾ ಆಯೋಗವು ತಕ್ಷಣವೇ ಸಚಿವರ ಕಚೇರಿಗಳನ್ನು ಮುಚ್ಚಬೇಕು ಎಂದು ಅದು ಸೇರಿಸಿದೆ.

ಸಚಿವರು ಮತ್ತು ಶಾಸಕರು ಸರ್ಕಾರಿ ಕಟ್ಟಡಗಳಲ್ಲಿ ಯಾವುದೇ ರಾಜಕೀಯ ಚಟುವಟಿಕೆ ನಡೆಸದಂತೆ ನಿರ್ಬಂಧಿಸಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ನಿಯಮ ಉಲ್ಲಂಘಿಸಿ ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡುತ್ತಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ.

SCROLL FOR NEXT