ಪಿಸಿ ಮೋಹನ್ ನಾಮಪತ್ರ ಸಲ್ಲಿಕೆ 
ರಾಜ್ಯ

ಕರ್ನಾಟಕ ಲೋಕಸಭೆ ಚುನಾವಣೆ: ಅಭ್ಯರ್ಥಿಗಳ ಉಮೇದುವಾರಿಕೆ; ಯದುವೀರ್, ಸೋಮಣ್ಣ, ಮೋಹನ್ ನಾಮಪತ್ರ ಸಲ್ಲಿಕೆ

ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಬೆಂಗಳೂರು: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರಿಗೆ ನಾಮಪತ್ರ ಸಲ್ಲಿಸಿದರು.

ಶುಭ ಗಳಿಗೆ ಸಿಕ್ಕಿದ್ದರಿಂದ ಇಂದು ಒಂದು ಸೆಟ್ ನಾಮಪತ್ರ ಸಲ್ಲಿಸಲಾಯಿತು. ಏ.3ರಂದು ಮೆರವಣಿಗೆ ನಡೆಸಿ ಶಕ್ತಿ ಪ್ರದರ್ಶನದ ಮೂಲಕ ಮತ್ತೊಂದು ಸೆಟ್ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ರಾಜ್ಯ ಮಟ್ಟದ ನಾಯಕರು ಬರಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಯದುವೀರ್ ನಾಮಪತ್ರ ಸಲ್ಲಿಕೆ

ಇನ್ನೂ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ.ಮೋಹನ್‌ ಅವರು ನಾಮಪತ್ರ ಸಲ್ಲಿಸಿದರು. ಮಾಜಿ ಸಿಎಂ ಯಡಿಯೂರಪ್ಪ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಚಿವ ಅರವಿಂದ್ ಲಿಂಬಾವಳಿ, ಶಾಸಕ ಸುರೇಶ್ ಕುಮಾರ್ ಅವರು ಪಿಸಿ ಮೋಹನ್ ಗೆ ಸಾಥ್‌ ನೀಡಿದರು.

ತುಮಕೂರಿನಲ್ಲಿ ವಿ.ಸೋಮಣ್ಣ ಅವರು ಕೂಡ ಉಮೇದುವಾರಿಕೆ ಸಲ್ಲಿಸಿದರು. ಶಾಸಕರಾದ ಜ್ಯೋತಿ ಗಣೇಶ್, ಸುರೇಶ್ ಗೌಡ, ಸುರೇಶ್ ಬಾಬು, ಮಾಜಿ ಶಾಸಕ ಸುಧಾಕರ್ ಲಾಲ್, ಬಿಜೆಪಿ ಮುಖಂಡ ಅನಿಲ್ ಕುಮಾರ್ ಅವರೊಂದಿಗೆ ತುಮಕೂರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದ ಅವರು ನಾಮಪತ್ರ ಸಲ್ಲಿಸಿದರು.

ವಿ.ಸೋಮಣ್ಣ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಹಿರಿಯೂರು ಬಳಿ ಸಮರ್ಥ್ ಶಾಮನೂರು ಕಾರು ಅಪಘಾತ: ಕಾಂಗ್ರೆಸ್ ಶಾಸಕ ಅಪಾಯದಿಂದ ಪಾರು!

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

ಶ್ರೀಶೈಲ: ಹೋಟೆಲ್‌ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢ