ಪ್ರಾತಿನಿಧಿಕ ಚಿತ್ರ 
ರಾಜ್ಯ

ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಗಾಳಿ ಅಬ್ಬರ; 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲು

ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ಕಂಡು ಬರುತ್ತಿದೆ.

ಬಳ್ಳಾರಿ: ತೀವ್ರ ಬಿಸಿಲಿನ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ 40 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ಕಂಡು ಬರುತ್ತಿದೆ.

ಈ ವರ್ಷ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಸಿಯಸ್‌ಗೆ ತಲುಪಬಹುದು ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ. ಹವಾಮಾನ ಇಲಾಖೆಯು ಕಳೆದ ವಾರ, ಬರದಿಂದಾಗಿ ತೀವ್ರ ಬಿಸಿಲ ಧಗೆ ಕಂಡುಬರುತ್ತಿರುವ ಬಳ್ಳಾರಿ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದಾದ್ಯಂತ ಬಿಸಿಗಾಳಿಯ ಎಚ್ಚರಿಕೆ ನೀಡಿತ್ತು.

ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು ನಿರ್ಜಲೀಕರಣ, ಜ್ವರ ಮತ್ತು ವಾಂತಿಯಿಂದ ಬಳಲುತ್ತಿದ್ದಾರೆ.

ಬಳ್ಳಾರಿ ಜಿಲ್ಲಾಡಳಿತವು ಮಾರ್ಗಸೂಚಿಗಳನ್ನು ಹೊರಡಿಸಿದ್ದು, ನಾಗರಿಕರು, ವಿಶೇಷವಾಗಿ ಮಕ್ಕಳು ಮತ್ತು ವೃದ್ಧರು ಮಧ್ಯಾಹ್ನ 1 ರಿಂದ ಸಂಜೆ 4 ರವರೆಗೆ ಯಾವುದೇ ರಕ್ಷಣೆಯಿಲ್ಲದೆ ನೇರ ಸೂರ್ಯನ ಬೆಳಕಿನಲ್ಲಿ ಹೊರಬರದಂತೆ ವಿನಂತಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿ

ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ, ಮಾತನಾಡಲು ನಿರ್ಬಂಧ!

ಭಾರತದ ಉತ್ಪಾದನಾ ವಲಯದ ಬೆಳವಣಿಗೆ ಭಾರೀ ಕುಸಿತ; 4 ವರ್ಷಗಳಲ್ಲೇ ಕನಿಷ್ಠ: ಇಲ್ಲಿದೆ ಅಸಲಿ ಕಾರಣ

ಗಡಿಯಲ್ಲಿ ಹದ್ದು ಮೀರಿದ್ರೆ ಹುಷಾರ್: ಇರಾನ್ ವಾರ್ ನಡುವೆ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ವಾರ್ನಿಂಗ್!

ಅಮೆರಿಕಕ್ಕೆ 'ಅವಮಾನ'ವಾಗುವವರೆಗೂ ಯುದ್ಧ ಮುಂದುವರಿಯುತ್ತದೆ: ಟ್ರಂಪ್ ಹೇಳಿಕೆ ತಳ್ಳಿಹಾಕಿದ ಇರಾನ್ ಸೇನೆ!

SCROLL FOR NEXT