ಸಂಗ್ರಹ ಚಿತ್ರ
ಸಂಗ್ರಹ ಚಿತ್ರ PTI
ರಾಜ್ಯ

ಏರುತ್ತಿರುವ ಬಿಸಿಲ ಧಗೆ: ಏಪ್ರಿಲ್ 5 ರವರೆಗೆ ರಾಜ್ಯದಲ್ಲಿ Heatwave alert; IMD ಘೋಷಣೆ!

Srinivas Rao BV

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಏ.05 ವರೆಗೆ ಬಿಸಿಗಾಳಿ (Heatwave) ಅಲರ್ಟ್ ಘೋಷಿಸಿದೆ. ಏ.1 ರಂದು ಹವಾಮಾನ ಇಲಾಖೆ ಈ ಅಲರ್ಟ್ ಘೋಷಿಸಿದ್ದು, ಶುಕ್ರವಾರದವರೆಗೂ ಇದೇ ರೀತಿಯ ವಾತಾವರಣ ಇರಲಿದೆ ಎಂದು ಐಎಂಡಿ ಹೇಳಿದೆ.

ಈ ಪ್ರವೃತ್ತಿ ರಾಜ್ಯದ ಹೆಚ್ಚಿನ ಪ್ರದೇಶಗಳಲ್ಲಿ ಮುಂದುವರಿಯುವ ಮತ್ತು ವಿಸ್ತರಿಸುವ ನಿರೀಕ್ಷೆಯಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳಭಾಗದ ಪ್ರತ್ಯೇಕ ಭಾಗಗಳಲ್ಲಿ ಶಾಖದ ಸೂಚ್ಯಂಕ 40 ರಿಂದ 50 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರಬಹುದು ಎಂದು ಮುನ್ಸೂಚನೆ ನೀಡಲಾಗಿದೆ.

ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ನಷ್ಟು ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಹಾಸನದ ಕೆಲವು ಭಾಗಗಳಲ್ಲಿ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಕೋಲಾರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಏಪ್ರಿಲ್ 5 ರವರೆಗೆ. ಬಾಗಲಕೋಟೆಯಲ್ಲಿ 41.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ, ಮುಂದಿನ 24 ಗಂಟೆಗಳಲ್ಲಿ ಗರಿಷ್ಠ ತಾಪಮಾನ 35 ರಿಂದ 36 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿರಲಿದೆ ಎಂದು IMD ಮುನ್ಸೂಚನೆ ನೀಡಿದೆ.

ಆದರೆ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ವಿಜಯನಗರ ಸೇರಿದಂತೆ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೀದರ್, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಮತ್ತು ಮೈಸೂರು ಸೇರಿದಂತೆ ಜಿಲ್ಲೆಗಳಲ್ಲಿ ಏಪ್ರಿಲ್ 6 ಮತ್ತು ಏಪ್ರಿಲ್ 7 ರಂದು ಲಘು ಮಳೆಯಾಗುವ ಮುನ್ಸೂಚನೆಯೊಂದಿಗೆ ಬಿಸಿಲಿನ ಧಗೆ ಸ್ವಲ್ಪ ಕಡಿಮೆಯಾಗುವ ನಿರೀಕ್ಷೆ ಇದೆ.

SCROLL FOR NEXT