ಸಂಗ್ರಹ ಚಿತ್ರ online desk
ರಾಜ್ಯ

ದೆಹಲಿಗೆ ಬರಲು ಈಶ್ವರಪ್ಪಗೆ ಬುಲಾವ್; ಮತ ಕೇಳಲು ಅಮಿತ್ ಶಾಗೆ ಯಾವ ನೈತಿಕತೆ ಇದೆ-ಸಿಎಂ ಏ.05 ವರೆಗೆ: ಈ ದಿನದ ಸುದ್ದಿ ಮುಖ್ಯಾಂಶಗಳು-02-04-2024

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಇಂದು ರಾಜ್ಯದಲ್ಲಿ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಇಂದು ರಾಜ್ಯದಲ್ಲಿ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು.

ಬಿಜೆಪಿ ಬಂಡಾಯ ಅಭ್ಯರ್ಥಿ ಈಶ್ವರಪ್ಪ ಮನವೊಲಿಕೆ ಯತ್ನ: ದೆಹಲಿಗೆ ಅಮಿತ್ ಶಾ ಬುಲಾವ್

ಬೆಂಗಳೂರಿನಲ್ಲಿ ಅಮಿತ್ ಶಾ ಪ್ರಚಾರ

ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಇಂದು ರಾಜ್ಯದಲ್ಲಿ ಪಕ್ಷದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಜೊತೆ ಇಂಡಿಯಾ ಬ್ಲಾಕ್ ನ್ನು ಹೋಲಿಸಲು ಸಾಧ್ಯವೇ ಇಲ್ಲ. ಇಂಡಿಯಾ ಬ್ಲಾಕ್ 'ಪರಿವಾರವಾದಿಗಳು' 'ಭ್ರಷ್ಟಾಚಾರಿಗಳ' ಮೈತ್ರಿ ಎಂದು ಆರೋಪಿಸಿದ್ದಾರೆ. ಭ್ರಷ್ಟಾಚಾರದ ವಿಷಯದ ಬಗ್ಗೆ ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಸಹ ಈ ಸಂದರ್ಭದಲ್ಲಿ ಅಮಿತ್ ಶಾ ವಾಗ್ದಾಳಿ ನಡೆಸಿ ಕರ್ನಾಟಕದ ಜನರು ಭ್ರಷ್ಟಾಚಾರವನ್ನು ಇಷ್ಟಪಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ. ಇದೇ ವೇಳೆ ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆಎಸ್ ಈಶ್ವರಪ್ಪ ಮನವೊಲಿಕೆಗೆ ಮುಂದಾಗಿರುವ ಅಮಿತ್ ಶಾ, ಈಶ್ವರಪ್ಪ ಗೆ ನಾಳೆ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ.

ಅಮಿತ್ ಶಾ ಗೆ ರಾಜ್ಯದಲ್ಲಿ ಮತ ಕೇಳಲು ಯಾವ ನೈತಿಕತೆ ಇದೆ?: ಸಿದ್ದರಾಮಯ್ಯ

ಅಮಿತ್ ಶಾ- ಸಿದ್ದರಾಮಯ್ಯ

ಚುನಾವಣೆ ಪ್ರಚಾರದಲ್ಲಿ ಭಾಗಿಯಾಗಲು ಅಮಿತ್ ಶಾ ರಾಜ್ಯಕ್ಕೆ ಭೇಟಿ ನೀಡಿರುವುದನ್ನು ಟೀಕಿಸಿರುವ ಸಿದ್ದರಾಮಯ್ಯ ಕರ್ನಾಟಕಕ್ಕೆ ಬಂದು ಮತ ಕೇಳಲು ಅಮಿತ್ ಶಾಗೆ ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಬಿಜೆಪಿ ಹೈಕಮಾಂಡ್ ಬಳಿ ಕರ್ನಾಟಕಕ್ಕೆ ಬರ ಪರಿಹಾರ ಕೊಡಿ ಎಂದು ಕೇಳಬೇಕಲ್ಲವೇ? ಎಂದು ಪ್ರಶ್ನಿಸಿದ್ದಾರೆ. ಮೇಕೆದಾಟುಗೆ ಅನುಮತಿ ಕೊಟ್ಟಿದ್ದಾರೆಯೇ, ಮಹದಾಯಿಗೆ ಪರಿಸರ ಇಲಾಖೆಯಿಂದ ಅನುಮತಿ ನೀಡಿದ್ದಾರೆಯೇ, ಭದ್ರಾ ಮೇಲ್ದಂಡೆ ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾರೆಯೇ 15ನೇ ಹಣಕಾಸು ಆಯೋಗ ಶಿಫಾರಸು ಮಾಡಿರುವ ಪರಿಹಾರ ಕೊಟ್ಟಿದ್ದಾರೆಯೇ ಎಂದು ಸರಣಿ ಪ್ರಶ್ನೆಗಳನ್ನು ಕೇಳಿದ್ದಾರೆ. ನಾವು ಕೇಂದ್ರ ಸರ್ಕಾರಕ್ಕೆ ಮೂರು ಮನವಿ ಪತ್ರಗಳನ್ನು ಕೊಟ್ಟೆವು. ಕೇಂದ್ರ ತಂಡ ಬಂದು ಬರ ಅಧ್ಯಯನ ನಡೆಸಿತು. 5 ತಿಂಗಳಾದರೂ ಕರ್ನಾಟಕಕ್ಕೆ ಬರ ಪರಿಹಾರವಾಗಿ ಒಂದು ರೂಪಾಯಿನೂ ನೀಡಿಲ್ಲ ಎಂದು ಸಿಎಂ ಆರೋಪಿಸಿದರು.

ಬೆಳಗಾವಿ: ಬರ ಪರಿಹಾರ, ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ

ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆ

ಸಾಲ ಮನ್ನಾಗೆ ಆಗ್ರಹಿಸಿ ರೈತರ ಪ್ರತಿಭಟನೆಈಮಧ್ಯೆ, ಬರ ಪರಿಹಾರ, ಸಾಲ ಮನ್ನಾಗೆ ಆಗ್ರಹಿಸಿ, ಬೆಳಗಾವಿಯಲ್ಲಿ ರೈತರು ಇಂದು ಬೀದಿಗಿಳಿದಿದ್ದರು. ಜಾನುವಾರುಗಳಿಗೆ ಮೇವಿಲ್ಲ ನೀರಿಲ್ಲದೇ ಪರಿತಪ್ಪಿಸುತ್ತಿವೆ. ಬರ ಪರಿಹಾರವೂ ಇಲ್ಲ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟಪ್ರಭಾ ನದಿಯಿಂದ ಎಡ ಹಾಗೂ ಬಲದಂಡೆ ಕಾಲುವೆಗೆ ನೀರು ಹರಿಸಬೇಕು ಮುಖ್ಯವಾಗಿ ಜಾನುವಾರುಗಳಿಗೆ ನೀರು ಹಾಗೂ ಮೇವಿನ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ಬೆಳಗಾವಿಯ ಚನ್ನಮ್ಮ ವೃತ್ತದಿಂದ ಹೋರಾಟ ಆರಂಭಿಸಿದ ರೈತರು ಡಿಸಿ ಕಚೇರಿವರೆಗೂ ಪ್ರತಿಭಟನಾ ರ್‍ಯಾಲಿ ನಡೆಸಿದರು.

ಜಿಎಸ್ ಟಿ ಸಂಗ್ರಹದಲ್ಲಿ 2 ನೇ ಸ್ಥಾನದಲ್ಲಿ ಕರ್ನಾಟಕ

ಜಿಎಸ್ ಟಿ

ಕರ್ನಾಟಕದ ಜಿಎಸ್ ಟಿ ಸಂಗ್ರಹ 13,000 ಕೋಟಿ ದಾಟಿದೆ. ಮಾರ್ಚ್ 31ಕ್ಕೆ ಕೊನೆಗೊಂಡ ವರ್ಷಕ್ಕೆ ಶೇ. 26 ರಷ್ಟು ಬೆಳವಣಿಗೆಯೊಂದಿಗೆ ಅತ್ಯಧಿಕ ತೆರಿಗೆ ಸಂಗ್ರಹವಾಗಿದೆ. ಕಳೆದ ವರ್ಷ ರೂ. 10, 360 ಕೋಟಿ ಮಾತ್ರ ತೆರಿಗೆ ಸಂಗ್ರಹವಾಗಿತ್ತು. ಜಿಎಸ್‌ಟಿ ಸಂಗ್ರಹದಲ್ಲಿ ಮಹಾರಾಷ್ಟ್ರ 27,688 ಕೋಟಿ ರೂ. ಸಂಗ್ರಹದೊಂದಿಗೆ ಮೊದಲ ಸ್ಥಾನದಲ್ಲಿದೆ. 2ನೇ ಸ್ಥಾನದಲ್ಲಿ ಕರ್ನಾಟಕ ಇದೆ.

ಏ.05 ವರೆಗೂ #heatwavealert

ತಾಪಮಾನ (ಸಂಗ್ರಹ ಚಿತ್ರ)

ಹವಾಮಾನ ಇಲಾಖೆ ರಾಜ್ಯಾದ್ಯಂತ ಹಲವು ಭಾಗಗಳಲ್ಲಿ ಏ.05 ರವರೆಗೆ ಬಿಸಿಗಾಳಿ ಎಚ್ಚರಿಕೆಯನ್ನು ನೀಡಿದೆ. ಬೆಳಗಾವಿ, ಬೀದರ್, ಗದಗ, ಧಾರವಾಡ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಗರಿಷ್ಠ ತಾಪಮಾನ ಎರಡರಿಂದ ನಾಲ್ಕು ಡಿಗ್ರಿ ಸೆಲ್ಸಿಯಸ್‌ನಷ್ಟು ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಹಾಸನದ ಕೆಲವು ಭಾಗಗಳಲ್ಲಿ ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್‌ನಷ್ಟು ಹೆಚ್ಚಳವಾಗಲಿದೆ ಎಂದು ಐಎಂಡಿ ತಿಳಿಸಿದೆ. ಉತ್ತರ ಕನ್ನಡ, ಬಾಗಲಕೋಟೆ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ತುಮಕೂರು ವಿಜಯನಗರ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆಯಲ್ಲಿ ತಿಳಿಸಿದೆ.

ಡಿಕೆ ಶಿವಕುಮಾರ್ ವಿರುದ್ಧ FIR

ಡಿಸಿಎಂ ಡಿಕೆ ಶಿವಕುಮಾರ್

ಬಿಜೆಪಿ ನಾಯಕರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಹಿನ್ನಲೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಕಾಂಗ್ರೆಸ್ ನಾಯಕ ಬಿ.ಆರ್.ನಾಯ್ಡು ವಿರುದ್ಧ ಹೈಗ್ರೌಂಡ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಬಿಜೆಪಿ ಕಾನೂನು ಪ್ರಕೋಷ್ಟ ಮಾಜಿ ಸಂಚಾಲಕ ಯೋಗೇಂದ್ರ ಹೊಡಘಟ್ಟ ಡಿಕೆ ಶಿವಕುಮಾರ್ ಹಾಗೂ ಬಿಆರ್ ನಾಯ್ಡು ವಿರುದ್ಧ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT