ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ CISF ಸಿಬ್ಬಂದಿಗೆ ಹೊಡೆದ ಇಬ್ಬರು ಮಹಿಳೆಯರ ಬಂಧನ

Lingaraj Badiger

ಬೆಂಗಳೂರು: ತಾಂತ್ರಿಕ ಕಾರಣದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ಮಾಡಿದ ನಂತರ ಪ್ರಯಾಣಿಕರು ಮತ್ತು ಇಂಡಿಗೋ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಮಧ್ಯಪ್ರವೇಶಿಸಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್)ಯ ಸಿಬ್ಬಂದಿಗೆ ಹೊಡೆದ ಆರೋಪದ ಮೇಲೆ ಇಬ್ಬರು ಮಹಿಳಾ ಪ್ರಯಾಣಿಕರನ್ನು ಕೋಝಿಕ್ಕೋಡ್‌ನ ಕರಿಪುರ ವಿಮಾನ ನಿಲ್ದಾಣದಲ್ಲಿ ಬಂಧಿಸಿ ನಂತರ ಪೊಲೀಸರಿಗೆ ಒಪ್ಪಿಸಲಾಗಿದೆ.

ತಾಂತ್ರಿಕ ಕಾರಣಗಳಿಂದ ಇಂಡಿಗೋ ವಿಮಾನವನ್ನು ಸ್ಥಗಿತಗೊಳಿಸಲಾಗಿದ್ದು, ಮಧ್ಯಾಹ್ನದ ವೇಳೆಗೆ ಪ್ರಯಾಣಿಕರಿಗೆ ಮತ್ತೊಂದು ವಿಮಾನದಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದ್ದ ವಿಮಾನ ಬೆಳಗ್ಗೆ 8.10ಕ್ಕೆ ಹೊರಡಬೇಕಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ನಂತರ 10.40ಕ್ಕೆ ಮತ್ತೊಂದು ವಿಮಾನ ಬೆಂಗಳೂರಿಗೆ ಬಂದಿತ್ತು. ಆದರೆ ಅದು ಭರ್ತಿಯಾಗಿತ್ತು ಮತ್ತು ಹಿಂದಿನ ವಿಮಾನದ ಪ್ರಯಾಣಿಕರಿಗೆ ಅಲ್ಲಿ ಸ್ಥಳಾವಕಾಶ ನೀಡಲಾಗಲಿಲ್ಲ. ಇದು ವಿಮಾನಯಾನ ಸಿಬ್ಬಂದಿಯೊಂದಿಗೆ ವಾಗ್ವಾದಕ್ಕೆ ಕಾರಣವಾಯಿತು.

ವಿಮಾನ ನಿಲ್ದಾಣದಲ್ಲಿ ಭದ್ರತಾ ಕರ್ತವ್ಯದಲ್ಲಿದ್ದ ಸಿಐಎಸ್‌ಎಫ್ ಸಿಬ್ಬಂದಿ ಪ್ರಯಾಣಿಕರನ್ನು ಶಾಂತಗೊಳಿಸಲು ಮಧ್ಯಪ್ರವೇಶಿಸಿದರು ಮತ್ತು ಆ ಸಮಯದಲ್ಲಿ ಇಬ್ಬರು ಮಹಿಳೆಯರು ಅವರಿಗೆ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಐಎಸ್ಎಫ್ ದೂರಿನನ್ವಯ ಮಹಿಳೆಯರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಮಹಿಳಾ ಪ್ರಯಾಣಿಕರನ್ನು ವಶಕ್ಕೆ ತೆಗೆದುಕೊಳ್ಳಲು ನಾವು ಅಧಿಕಾರಿಗಳನ್ನು ಕಳುಹಿಸಿದ್ದೇವೆ ಎಂದು ಕರಿಪುರ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

SCROLL FOR NEXT