ಪ್ರದೀಪ್ ಈಶ್ವರ್-ರಕ್ಷಾ ರಾಮಯ್ಯ 
ರಾಜ್ಯ

Loksabha Polls 2024: ಚಿಕ್ಕಬಳ್ಳಾಪುರ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಎಡವಟ್ಟು, ನಾಮಪತ್ರ ಸಲ್ಲಿಸದೆ ವಾಪಸ್!

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಎಡವಟ್ಟು ಮಾಡಿಕೊಂಡಿದ್ದು ಇಂದು ನಾಮಪತ್ರ ಸಲ್ಲಿಸದೆ ವಾಪಸ್ ಆಗಿದ್ದಾರೆ.

ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಎಡವಟ್ಟು ಮಾಡಿಕೊಂಡಿದ್ದು ಇಂದು ನಾಮಪತ್ರ ಸಲ್ಲಿಸದೆ ವಾಪಸ್ ಆಗಿದ್ದಾರೆ.

ರಕ್ಷಾ ರಾಮಯ್ಯ ಅವರ ಪಿಎ ಅಸಲಿ ನಾಮಪತ್ರವನ್ನು ತೆಗೆದುಕೊಂಡು ಬರದ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿಗಳ ಮುಂದೆ ಪೇಚಿಗೆ ಸಿಲುಕಿದ ರಕ್ಷಾ ರಾಮಯ್ಯ ಅವರು ಇಂದು ನಾಮಪತ್ರ ಸಲ್ಲಿದೆ ವಾಪಸ್ಸಾಗಿದ್ದಾರೆ ಎಂದು ತಿಳಿದುಬಂದಿದೆ.

ಇಂದು ನಾಮಪತ್ರ ಸಲ್ಲಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಬೇಸರಗೊಂಡ ರಕ್ಷಾ ರಾಮಯ್ಯ ಅವರು ಚುನಾವಣಾಧಿಕಾರಿ ಕಚೇರಿ ಬಳಿ ಫೋಟೋ ತೆಗೆಸಿಕೊಂಡು ವಾಪಸ್ ಆಗಿದ್ದಾರೆ.

ನಾಮಪತ್ರ ಸಲ್ಲಿಸಲು ಏಪ್ರಿಲ್ 4ಕ್ಕೂ ಕೊನೆಯ ದಿನವಾಗಿದ್ದು, ಏಪ್ರಿಲ್ 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಏಪ್ರಿಲ್ 8 ಉಮೇದುವಾರಿಕೆ ಹಿಂಪಡೆಯಲು ಕೊನೆಯ ದಿನವಾಗಿದೆ.

ರಕ್ಷಾ ರಾಮಯ್ಯ ಅವರು ಎರಡು ತಂಡಗಳಲ್ಲಿ ತೆರಳಿ ನಾಮಪತ್ರ ಸಲ್ಲಿಸಲು ನಿರ್ಧರಿಸಿದ್ದರು. ಅದರಂತೆ ರಕ್ಷಾ ರಾಮಯ್ಯ ಮೊದಲ ತಂಡದ ಜೊತೆ ನಾಮಪತ್ರ ಹಾಕಿದ್ದರು. ಈ ವೇಳೆ ಅವರು ಎರಡನೇ ತಂಡದವರ ಜೊತೆ ಆಗಮಿಸಿದ್ದು, ಎರಡನೇ ತಂಡದವರ ಜೊತೆ ಸಲ್ಲಿಸಲು ಅಸಲಿ ನಾಮಪತ್ರವೇ ಇರಲಿಲ್ಲ ಎನ್ನಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!