ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತ್ನಿಗೆ ಕತ್ತರಿ, ಚಾಕುವಿನಿಂದ ಹಲ್ಲೆ ನಡೆಸಿದ ಪತಿ!

ತನ್ನ ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತಿಯೊಬ್ಬ ಪತ್ನಿ ಮೇಲೆ ಚಾಕು ಮತ್ತು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ.

ಬೆಂಗಳೂರು: ತನ್ನ ಸಹೋದ್ಯೋಗಿ ಜೊತೆ ಮಾತನಾಡಿದ್ದಕ್ಕೆ ಪತಿಯೊಬ್ಬ ಪತ್ನಿ ಮೇಲೆ ಚಾಕು ಮತ್ತು ಕತ್ತರಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಜೆಪಿ ನಗರದಲ್ಲಿ ನಡೆದಿದೆ. ಜೆ.ಪಿ.ನಗರ 5ನೇ ಹಂತದ ವಿನಾಯಕ ನಗರದ ಕಾವೇರಿ ರಸ್ತೆಯ ನಿವಾಸಿ ಬಿಂದು ನವೀನ್ ಹಲ್ಲೆಗೊಳಗಾಗಿದ್ದು, ಸದ್ಯ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭಾನುವಾರ ಸಂಜೆ 6 ರಿಂದ 8 ಗಂಟೆಯ ನಡುವೆ ಈ ಘಟನೆ ನಡೆದಿದೆ. ಸಂತ್ರಸ್ತೆಯ 42 ವರ್ಷದ ಪತಿ ನವೀನ್ ಆಕೆಯ ಮೇಲೆ ಹರಿತವಾದ ಆಯುಧಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಿಸಿದ ನಂತರ, ಮೆಡಿಕೋ ಲೀಗಲ್ ಕೇಸ್ ದಾಖಲಿಸಲಾಗಿದೆ ಮತ್ತು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಲಾಯಿತು.

ಬಿಂದು ಹೆಚ್ ಎಸ್ ಆರ್ ಲೇಔಟ್ ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಇಬ್ಬರು ಮಕ್ಕಳ ತಾಯಿ. ಆಕೆ 2012ರಲ್ಲಿ ನವೀನ್ ಎಂಬಾತನನ್ನು ಮದುವೆಯಾಗಿದ್ದಳು. ಆಕೆ ಯಾರ ಜೊತೆಗಾದರೂ ಫೋನ್ ನಲ್ಲಿ ಮಾತನಾಡಿದರೂ ಆಕೆಯ ಬಗ್ಗೆ ಅನುಮಾನ ವ್ಯಕ್ತ ಪಡಿಸುತ್ತಿದ್ದ. 2023ರಲ್ಲಿ ಬನ್ನೇರುಘಟ್ಟ ಅರಣ್ಯದಲ್ಲಿ ಆಕೆಯ ಮೇಲೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಲು ಯತ್ನಿಸಿದ್ದ ಎಂದು ಹೇಳಲಾಗಿದೆ.

ಭಾನುವಾರ, ಕೆಲಸದ ಬಗ್ಗೆ ಚರ್ಚಿಸಲು ಸಂತ್ರಸ್ತೆಯ ಮನೆಗೆ ಸಹೋದ್ಯೋಗಿ ಬಂದಿದ್ದರು. ತನ್ನ ಪತ್ನಿ ಪುರುಷ ಸಹೋದ್ಯೋಗಿಯೊಂದಿಗೆ ಮಾತನಾಡುತ್ತಿರುವುದನ್ನು ಕಂಡು ಆಕ್ರೋಶಗೊಂಡ ನವೀನ್ ಆಕೆಯನ್ನು ನಿಂದಿಸಲು ಆರಂಭಿಸಿದ. ಪತ್ನಿ ತನ್ನ ಸಹೋದ್ಯೋಗಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿದ ಪತಿ ಕತ್ತರಿ ಮತ್ತು ಚಾಕು ತೆಗೆದುಕೊಂಡು ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ.

ಆರೋಪಿ ಆಕೆಗೆ ಹಲವು ಬಾರಿ ಚಾಕುವಿನಿಂದ ಇರಿದಿದ್ದಾನೆ. ಕೂಡಲೇ ಆಕೆಯ ಮಗಳು ಅಳುತ್ತಾ ನೆರೆಹೊರೆಯ ಮನೆಗೆ ಧಾವಿಸಿ ಸಹಾಯಕ್ಕಾಗಿ ಯಾಚಿಸಿದ್ದಾಳೆ, ತಕ್ಷಣವೇ ಅಲ್ಲಿಗೆ ಬಂದ ನೆರೆ ಹೊರೆಯವರು ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಪುಟ್ಟೇನಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT