ಸಿಎಂ ಸಿದ್ದರಾಮಯ್ಯ, ಸಾತ್ವಿಕ್ 
ರಾಜ್ಯ

ಬಾಲಕ ಸಾತ್ವಿಕ್ ರಕ್ಷಣಾ ಕಾರ್ಯಾಚರಣೆ ಯಶಸ್ವಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ

ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.

ಬೆಂಗಳೂರು: ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಆಕಸ್ಮಿಕವಾಗಿ ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಬಾಲಕ ಸಾತ್ವಿಕ್‌ನ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದೆ. ಮಗುವಿನ ರಕ್ಷಣೆಗಾಗಿ ಹಗಲಿರುಳೆನ್ನದೆ ಶ್ರಮಿಸಿದ ಸಿಬ್ಬಂದಿಗಳು ಮತ್ತು ಸಾರ್ವಜನಿಕರ ಕಾರ್ಯದಕ್ಷತೆಯನ್ನು ಮುಖ್ಯಮಂತ್ರಿ ಸಿದ್ದರಾಮ್ಯ ಪ್ರಶಂಸಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ, ಮಗುವಿನ ಕುಟುಂಬದವರ, ನಾಡಿನ ಕೋಟ್ಯಂತರ ಜನರ ಹರಕೆ - ಹಾರೈಕೆಗಳು ಫಲಿಸಿದೆ, ಸಾವನ್ನೇ ಗೆದ್ದು ಬಂದ ಪುಟ್ಟ ಕಂದಮ್ಮ ಮತ್ತೆ ಪೋಷಕರ ಮಡಿಲು ಸೇರಿದ್ದು ಕಂಡು ಖುಷಿಯಾಯಿತು ಎಂದಿದ್ದಾರೆ.

ನೀರು ಬಾರದ ಅಥವಾ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದಿದ್ದರೆ ಯಾರದೋ ಅಮಾಯಕ ಜೀವ ಬಲಿಯಾಗುತ್ತದೆ, ಇಂತಹ ಘಟನೆಗಳು ಕಾಲಕಾಲಕ್ಕೆ ಪುನರಾವರ್ತನೆಯಾಗುತ್ತಿದ್ದರೂ ಜನ ಜಾಗೃತರಾಗದೆ ನಿರ್ಲಕ್ಷ್ಯ ತೋರುವುದು ಬೇಸರದ ಸಂಗತಿ. ಸಮಾಜ ಈ ಬಗ್ಗೆ ಇನ್ನಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಅವರು ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ