ಉದ್ಯೋಗ ಖಾತ್ರಿ ಕಾರ್ಡ್ ಜೊತೆಗೆ ಗದಗದ ಮಹಿಳೆಯರು. 
ರಾಜ್ಯ

ನರೇಗಾ ಯೋಜನೆ ಎಫೆಕ್ಟ್: ಜನರ ವಲಸೆ ಪ್ರಮಾಣದಲ್ಲಿ ಇಳಿಕೆ; ಸ್ವಗ್ರಾಮದಲ್ಲೇ ಬದುಕು ಕಟ್ಟಿಕೊಳ್ಳಲು ಆಸಕ್ತಿ!

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಆಧರಿತ ಕಾಮಗಾರಿಗಳು ಪರಿಣಾಮಕಾರಿ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಜನರು ಗುಳೆ ಹೋಗದೆ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಗದಗ: ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಕೂಲಿ ಆಧರಿತ ಕಾಮಗಾರಿಗಳು ಪರಿಣಾಮಕಾರಿ ರೀತಿಯಲ್ಲಿ ಕೆಲಸ ಮಾಡುತ್ತಿದ್ದು, ಜನರು ಗುಳೆ ಹೋಗದೆ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಬೇಸಿಗೆ ಆರಂಭವಾಗುತ್ತಿದ್ದಂತೆಯೇ ಜಿಲ್ಲೆಯ ಜನರು ವಲಸೆ ಹೋಗುವುದು ಇಲ್ಲಿ ಸಾಮಾನ್ಯವಾಗಿತ್ತು. ಕೆಲಸ ಅರಸಿ ಇಲ್ಲಿನ ಗ್ರಾಮಸ್ಥರು ಗೋವಾ, ಮಂಗಳೂರು, ಬೆಂಗಳೂರು ಸೇರಿದಂತೆ ಇತರೆ ನಗರಗಳಿಗೆ ಹೋಗುತ್ತಿದ್ದರು. ಹೀಗಾಗಿ ಬೇಸಿಗೆ ಸಂದರ್ಭದಲ್ಲಿ ಇಲ್ಲಿನ ಗ್ರಾಮಗಳು ವೃದ್ಧಾಶ್ರಮಗಳ ರೀತಿ ಕಾಣುತ್ತಿದ್ದವು. ಆದರೀಗ ಪ್ರಸ್ತುತ ವಾತಾವರಣ ಬದಲಾಗಿದೆ. ನರೇಗಾ ಯೋಜನೆಯಡಿ ಕೆಲಸ ದೊರೆಯುತ್ತಿರುವುದರಿಂದ ಗ್ರಾಮಸ್ಥರು ವಲಸೆ ಹೋಗುವುದನ್ನು ನಿಲ್ಲಿಸಿದ್ದಾರೆ.

ಚುನಾವಣೆ ಹತ್ತಿರ ಬರುತ್ತಿದ್ದು, ಗ್ರಾಮಸ್ಥರಿಗೆ ಕೆಲಸಗಳು ಸಿಗುತ್ತಿವೆ. ಗ್ರಾಮದಲ್ಲಿ ಹೆಚ್ಚಿನ ಮಹಿಳೆಯರು ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳುತ್ತಿದ್ದಾರೆಂದು ಜಿಲ್ಲಾ ಪಂಚಾಯತ್ ಮೂಲಗಳು ಮಾಹಿತಿ ನೀಡಿವೆ.

ಮಹಿಳೆಯರೂ ಜೀವನೋಪಾಯದತ್ತ ಮುಖ ಮಾಡಿದರೆ, ಕುಟುಂಬ ಸಮೇತ ಜಿಲ್ಲೆಯಲ್ಲಿ ನೆಲೆಸುತ್ತದೆ ಎಂಬ ಉದ್ದೇಶದಿಂದ ಅಧಿಕಾರಿಗಳು ಕೂಡ ಮಹಿಳೆಯರಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ.

ಜನರ ಮನವೊಲಿಸುವುದಷ್ಟೇ ಅಲ್ಲದೆ, ಜಿಲ್ಲಾಡಳಿತ ಮಂಡಳಿ, ಜಿಲ್ಲಾ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿಗಳು ‘ಯಾಕೆ ವಲಸೆ! ಉದ್ಯೋಗ ಖಾತ್ರಿ ಯೋಜನೆಯಡಿ ನಿಮ್ಮ ಹಳ್ಳಿಯಲ್ಲಿಯೇ ಕೆಲಸ ಪಡೆಯಿರಿ ಎಂದು ಅಭಿಯಾನ ಆರಂಭಿಸಿದ್ದಾರೆ. ಅಧಿಕಾರಿಗಳು ಪ್ರಯತ್ನದ ಫಲವಾಗಿ ಸುಮಾರು 800 ಜನರು ನಗರಗಳಿಗೆ ವಲಸೆ ಹೋಗುವುದರಿಂದ ಹಿಂದೆ ಸರಿದಿದ್ದಾರೆ. ವಾರಾಂತ್ಯದ ವೇಳೆಗೆ ಸಾವಿರಾರು ಮಂದಿ ಗ್ರಾಮಗಳಿಗೆ ಮರಳಿದ್ದಾರೆಂದು ತಿಳಿದುಬಂದಿದೆ. ಈ ಮೂಲಕ ಗ್ರಾಮಸ್ಥರ ಮನವೊಲಿಸುವಲ್ಲಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಅಧಿಕಾರಿಗಳು, ಗ್ರಾಮ ಕಾಯಕ ಮಿತ್ರ/ತಾಂಡಾ ರೋಜಗಾರ ಮಿತ್ರ ಹಾಗೂ ಕ್ರಿಯಾಶೀಲ ಕಾಯಕ ಬಂಧು ಸದಸ್ಯರು ಗ್ರಾಮಗಳ ಪ್ರತಿ ಮನೆಗೆ ಭೇಟಿ ಗ್ರಾಮದಲ್ಲಿಯೇ ಉಳಿದುಕೊಂಡು ನರೇಗಾ ಯೋಜನೆಯಡಿಯಲ್ಸಿ ಉದ್ಯೋಗ ಪಡೆಯುವಂತೆ ಮನವರಿಕೆ ಮಾಡುತ್ತಿದ್ದಾರೆ.

ಈಗಾಗಲೇ ಅಧಿಕಾರಿಗಳು ಹಲವು ಗ್ರಾಮಸ್ಥರಿಗೆ ಮನವರಿಕೆ ಮಾಡಿಕೊಟ್ಟಿದ್ದು, ವಲಸೆ ದರವನ್ನು ಶೂನ್ಯಕ್ಕೆ ತರುವ ವಿಶ್ವಾಸವನ್ನು ಹೊಂದಿದ್ದಾರೆ.

ಈ ಬಾರಿ ತಾಪಮಾನ ಪ್ರಮಾಣ ಹೆಚ್ಚಾಗಿದ್ದು, ಕಾಮಗಾರಿ ನಡೆಯುವ ಸ್ಥಳದಲ್ಲಿ ಪ್ರಥಮ ಚಿಕಿತ್ಸಾ ಕಿಟ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಗಜೇಂದ್ರಗಡ ತಾಲ್ಲೂಕು ಪಂಚಾಯಿತಿಯ ಸಿಬ್ಬಂದಿಯೊಬ್ಬರು ಮಾತನಾಡಿ, ಈ ವರ್ಷ ನರೇಗಾ ಯೋಜನೆಗೆ ಮಹಿಳೆಯರ ಹಾಜರಾತಿ ಶೇ.48.93 ಇದೆ, ಕಳೆದ ವರ್ಷ ಈ ಪ್ರಮಾಣ ಶೇ.46.67 ಇತ್ತು. ಯೋಜನೆಯಡಿ ನೀಡಲಾಗುವ ಕೆಲಸಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಹಿರಿಯ ನಾಗರಿಕರೂ ಕೆಲಸದಲ್ಲಿ ಆಸಕ್ತಿ ತೋರಿಸುತ್ತಿದ್ದಾರೆಂದು ಹೇಳಿದ್ದಾರೆ.

ಜಿಲ್ಲಾ ಪಂಚಾಯತ್ ಸಿಇಒ ಭರತ್ ಎಸ್ ಮಾತನಾಡಿ, ನರೇಗಾ ಯೋಜನೆಯು ಹಿರಿಯ ನಾಗರಿಕರು, ಮಹಿಳೆಯರು, ವಿಶೇಷಚೇತನರು ಮತ್ತು ಇತರರಿಗೆ ಉಪಯುಕ್ತವಾಗಿದೆ. ಸ್ವಗ್ರಾಮಗಳಲ್ಲಿಯೇ ಉದ್ಯೋಗ ಅವಕಾಶ ಇದ್ದು, ವಲಸೆ ಹೋಗದಂತೆ ಮನವೊಲಿಸುತ್ತಿದ್ದೇವೆ. ಸಾಕಷ್ಟು ಮಹಿಳೆಯರು ಕೂಡ ಯೋಜನೆಗೆ ಆಸಕ್ತಿ ತೋರಿಸುತ್ತಿದ್ದಾರೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಾಂತಿ ಮಾತುಕತೆ ನಡೆಯುತ್ತಿರುವಾಗಲೇ ಉಕ್ರೇನ್‌ ಮೇಲೆ ರಷ್ಯಾ ದಾಳಿ; ಕನಿಷ್ಠ ಏಳು ಜನ ಸಾವು

Punishment: 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

SCROLL FOR NEXT