ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ 
ರಾಜ್ಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆ: ಕಲಬುರಗಿ ಬಿಜೆಪಿ ನಾಯಕರ ವಿರುದ್ಧ ಎಫ್ ಐ ಆರ್!

Shilpa D

ಕಲಬುರಗಿ: ಲೋಕಸಭೆ ಚುನಾವಣೆಯ ಮಾದರಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಬಿಜೆಪಿ ಎಂಎಲ್ಸಿ ಬಿ ಜಿ ಪಾಟೀಲ್, ಬಿಜೆಪಿ ನಗರ ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದು ಪಾಟೀಲ್ (ಎಂಎಲ್ಸಿ ಬಿ ಜಿ ಪಾಟೀಲ್ ಅವರ ಪುತ್ರ) ಮತ್ತು ಒಬ್ಬ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಅಧಿಕಾರಿ ಭೀಮರಾಯ ಗುರುಪಾದಪ್ಪ ಸಲ್ಲಿಸಿದ್ಗ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ನ್ಯಾಯಾಲಯದಿಂದ ಅನುಮತಿ ಪಡೆದು ಕಲಬುರಗಿಯ ಕಲ್ಯಾಣಿ ಪೆಟ್ರೋಲ್‌ ಪಂಪ್‌ ಬಳಿ ಶಾಮಿಯಾನ ಹಾಕಲಾಗಿದ್ದು, ಅದರಲ್ಲಿ ಬ್ಯಾನರ್‌ ಹಾಕಲಾಗಿತ್ತು.

ಕಲಬುರಗಿಯ ಶ್ರೀಶರಣಬಸವೇಶ್ವರ ಜಾತ್ರೆಯ ಅಂಗವಾಗಿ ಅನ್ನದಾಸೋಹ ಕಾರ್ಯಾಕ್ರಮವನ್ನು ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಬ್ರಹ್ಮಪೂರದ ಕಲ್ಯಾಣಿ ಪೆಟ್ರೋಲ್ ಪಂಪ್ ಹತ್ತಿರ ಆಯೋಜಿಸಲಾಗಿತ್ತು.

ಅನ್ನದಾಸೋಹದ ಬ್ಯಾನರ್‍ನಲ್ಲಿ ಬಿ.ಜೆ.ಪಿ ಮುಖಂಡ ವಿಧಾನ ಪರಿಷತ್ ಸದಸ್ಯ ಬಿ.ಜಿ ಪಾಟೀಲ್ ಹಾಗೂ ಬಿ.ಜೆ.ಪಿ ನಗರ ಅಧ್ಯಕ್ಷ ಚಂದು ಪಾಟೀಲ್ ಹಾಗೂ ಇನ್ನಿತರ ನಾಯಕರ ಭಾವ ಚಿತ್ರಗಳನ್ನು ಹಾಕಿ ಅನ್ನ ದಾಸೋಹ ಏರ್ಪಡಿಸಲಾಗಿತ್ತು. ಇದು ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಎಂದು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ.30ರಂದು ನಡೆದ ಶರಣಬಸವೇಶ್ವರ ಜಾತ್ರೆ ನಿಮಿತ್ತ ಬಿಜೆಪಿ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ ಹಾಗೂ ಅಪರಿಚಿತ ವ್ಯಕ್ತಿಯೊಬ್ಬರು ಅನ್ನಸಂತರ್ಪಣೆ ಮಾಡಿದರು. ನ್ಯಾಯಾಲಯದಿಂದ ಅನುಮತಿ ಪಡೆದು ಕಲಬುರಗಿಯ ಕಲ್ಯಾಣಿ ಪೆಟ್ರೋಲ್‌ ಪಂಪ್‌ ಬಳಿ ಶಾಮಿಯಾನ ಹಾಕಲಾಗಿತ್ತು, ಆದರೆ ಬ್ಯಾನರ್‌ ನಲ್ಲಿ ಬಿಜೆಪಿ ರಾಜಕೀಯ ವ್ಯಕ್ತಿಗಳ ಬ್ಯಾನರ್ ಹಾಕಿ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿತ್ತು. ಹೀಗಾಗಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

SCROLL FOR NEXT