ಚುನಾವಣಾ ಆಯೋಗ 
ರಾಜ್ಯ

ಮಾದರಿ ನೀತಿ ಸಂಹಿತೆ ಉಲ್ಲಂಘನೆ: 26.68 ಕೋಟಿ ರೂ. ನಗದು, 33 ಕೋಟಿ ರೂ. ಮೌಲ್ಯದ ಮದ್ಯ ವಶ

ಕರ್ನಾಟಕದಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ 1,205 ಪ್ರಕರಣಗಳನ್ನು ದಾಖಲಿಸಲಾಗಿದ್ದು, 26.68 ಕೋಟಿ ರೂಪಾಯಿ ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮಾರ್ಚ್ 16 ರಿಂದ ಮಾದರಿ ನೀತಿ ಸಂಹಿತೆ ಜಾರಿಗೆ ಬಂದ ನಂತರ 1,205 ಪ್ರಕರಣಗಳನ್ನು ದಾಖಲಿಸಲಾಗಿದ್ದು, 26.68 ಕೋಟಿ ರೂಪಾಯಿ ನಗದು, 33 ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ತಿಳಿಸಿದೆ.

ಕರ್ನಾಟಕದ 28 ಕ್ಷೇತ್ರಗಳಿಗೆ ಏಪ್ರಿಲ್ 26 ಮತ್ತು ಮೇ 7 ರಂದು ಎರಡು ಹಂತಗಳಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಇಲ್ಲಿಯವರೆಗೆ ಒಟ್ಟು 85.43 ಕೋಟಿ ರೂ. ಮೌಲ್ಯದ ವಸ್ತು ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಹೊರಡಿಸಿದ ಹೇಳಿಕೆ ಪ್ರಕಾರ, ಮಾದರಿ ನೀತಿ ಸಂಹಿತೆ ಜಾರಿಯಾದಾಗಿನಿಂದ, ಫ್ಲೈಯಿಂಗ್ ಸ್ಕ್ವಾಡ್, ಸ್ಥಾಯೀ ಕಣ್ಗಾವಲು ತಂಡಗಳು ಮತ್ತು ಪೊಲೀಸ್ ಅಧಿಕಾರಿಗಳು 26.68 ಕೋಟಿ ರೂಪಾಯಿ ನಗದು, 1.75 ಲಕ್ಷ ರೂ. ಮೌಲ್ಯದ ವಸ್ತುಗಳು, 33 ಕೋಟಿಗೂ ಅಧಿಕ ಮೌಲ್ಯದ 10.73 ಲಕ್ಷ ಲೀಟರ್ ಮದ್ಯ, 3.13 ಕೋಟಿ ರೂ. ಮೌಲ್ಯದ 286.91 ಕೆಜಿ ಮಾದಕ ವಸ್ತುಗಳು, 9.43 ಕೋಟಿ ರೂ. ಮೌಲ್ಯದ 16 ಕೆಜಿ ಚಿನ್ನ, 27 ಲಕ್ಷಕ್ಕೂ ಹೆಚ್ಚು ಮೌಲ್ಯದ 59.04 ಕೆಜಿ ಬೆಳ್ಳಿ ಮತ್ತು 9 ಲಕ್ಷ ರೂ. ಮೌಲ್ಯದ 21.17 ಕ್ಯಾರೆಟ್ ವಜ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಅಬಕಾರಿ ಇಲಾಖೆಯು 1,248 ಅಪರಾಧ ಪ್ರಕರಣಗಳು, ಪರವಾನಗಿ ಷರತ್ತುಗಳ ಉಲ್ಲಂಘನೆಗಾಗಿ 1,203 ಪ್ರಕರಣಗಳು, 79 'ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ ಮತ್ತು ಕರ್ನಾಟಕ ಅಬಕಾರಿ ಕಾಯ್ದೆ 1965 ರ ಸೆಕ್ಷನ್ 15 (ಎ) ಅಡಿಯಲ್ಲಿ 5,327 ಪ್ರಕರಣಗಳನ್ನು ದಾಖಲಿಸಲಾಗಿದೆ. ಇದರೊಂದಿಗೆ 732 ವಿವಿಧ ರೀತಿಯ ವಾಹನಗಳನ್ನು ಸಹ ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT