ಆರ್ ಅಶೋಕ್ 
ರಾಜ್ಯ

ಸಾಲದ ದುಡ್ಡೆಲ್ಲಾ ಎಲ್ಲಿ ಹೋಗುತ್ತಿದೆ? ಹೆಚ್ಚಾದ ಬಜೆಟ್ ಗಾತ್ರವೆಲ್ಲಾ ಎಲ್ಲಿ ಹೋಯ್ತು? ಸಿದ್ದರಾಮಯ್ಯಗೆ ಆರ್. ಅಶೋಕ್ ಪ್ರಶ್ನೆ

ಮಾನ್ಯ ಸಿಎಂ ಸಿದ್ದರಾಮಯ್ಯ ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ.

ಬೆಂಗಳೂರು: ಮಾನ್ಯ ಸಿಎಂ ಸಿದ್ದರಾಮಯ್ಯ ನಾನು ತಮ್ಮಂತೆ ಸ್ವಯಂ ಘೋಷಿತ ಆರ್ಥಿಕ ತಜ್ಞನಲ್ಲ. ಆದರೆ ತಮ್ಮಂತೆ ನನಗೊಬ್ಬನಿಗೇ ಎಲ್ಲವೂ ಗೊತ್ತು ಎಂಬ ಅಹಂಕಾರವೂ ಇಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್ ,ಅಶೋಕ್ ಕಿಡಿಕಾರಿದ್ದಾರೆ.

ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅಶೋಕ್, ಕೇಂದ್ರ ಸರ್ಕಾರ ಮಾಡಿರುವ ಸಾಲಕ್ಕೂ, ತಾವು ಮಾಡಿರುವ ಸಾಲಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ನಿಮಗೆ ಅರ್ಥವಾಗುವುದಿದ್ದರೆ ಓದಿಕೊಳ್ಳಿ. ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು, 2024ರ ಮಧ್ಯಂತರ ಬಜೆಟ್ನಲ್ಲಿ ಬಂಡವಾಳ ವೆಚ್ಚವನ್ನು ಸತತ ನಾಲ್ಕನೇ ವರ್ಷವೂ ಶೇ.11.1ರಷ್ಟು ಹೆಚ್ಚಿಸಿದೆ. ಇದರಿಂದ ಬಂಡವಾಳ ವೆಚ್ಚ 11.11 ಲಕ್ಷ ಕೋಟಿ ರೂ.ಗೆ ಏರಿಕೆಯಾಗಲಿದೆ. ಇದು ದೇಶದ ಜಿಡಿಪಿಯ ಶೇ. 3.4ರಷ್ಟು ಆಗಿದೆ.

ಅದೇ ನಿಮ್ಮ ಕಾರ್ಯವೈಖರಿ ನೋಡಿ. 2023-24 ರಲ್ಲಿ ತಾವು ಮಂಡಿಸಿದ ಬಜೆಟ್ ಗಾತ್ರ 3.27 ಲಕ್ಷ ಕೋಟಿ. ಅದರಲ್ಲಿ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು 54,000 ಕೋಟಿ. ಅದೇ 2024-2025ರ ಆರ್ಥಿಕ ಸಾಲಿಗೆ ತಾವು ಮಂಡಿಸಿರುವ ಕರ್ನಾಟಕದ ಬಜೆಟ್ ಗಾತ್ರ 3,71,383 ಕೋಟಿ. ಅಂದರೆ 2023-24 ರಲ್ಲಿ ತಾವು ಮಂಡಿಸಿದ 3.27 ಲಕ್ಷ ಕೋಟಿಗಿಂತ ದೊಡ್ಡದು. ಜೊತೆಗೆ ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರ ಕೋಟಿ‌ ರೂ. ಹೆಚ್ಚಿನ ಸಾಲ ಕೂಡ ಮಾಡಿದ್ದೀರಿ. ಆದರೆ ಬಂಡವಾಳ ವೆಚ್ಚಕ್ಕೆ ತಾವು ಮೀಸಲಿಟ್ಟಿದ್ದು ಕೇವಲ 55,000 ಕೋಟಿ, ಅಂದರೆ ಕಳೆದ ವರ್ಷಕ್ಕಿಂತ ಹೆಚ್ಚಾದ ಮೊತ್ತ ಎಷ್ಟು? ಕೇವಲ 1,000 ಕೋಟಿ. ಅಂದರೆ ಬಂಡವಾಳ ವೆಚ್ಚ ಹೆಚ್ಚಳವಾಗಿದ್ದು ಕೇವಲ 1.85%. ಎಂದು ಬರೆದುಕೊಂಡಿದ್ದಾರೆ.

ಬಜೆಟ್ ಗಾತ್ರ ಹೆಚ್ಚಾದರೂ, ಸಾಲ ಹೆಚ್ಚಾದರೂ, ಬಂಡವಾಳ ವೆಚ್ಚ ಮಾತ್ರ ಯಾಕೆ ಅದೇ ಪ್ರಮಾಣದಲ್ಲಿ ಹೆಚ್ಚಾಗುತ್ತಿಲ್ಲ ಸಿಎಂ ಸಿದ್ದರಾಮಯ್ಯನವರೇ? ಸಾಲದ ದುಡ್ಡೆಲ್ಲಾ ಎಲ್ಲಿ ಹೋಗುತ್ತಿದೆ? ಹೆಚ್ಚಾದ ಬಜೆಟ್ ಗಾತ್ರವೆಲ್ಲಾ ಎಲ್ಲಿ ಹೋಯ್ತು? ನಿಮ್ಮ ಬಳಿ ಇದಕ್ಕೆಲ್ಲಾ ಉತ್ತರ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೂ ಮುನ್ನ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ' ಅಶೋಕ ಅವರೇ, ನಿಮಗೆ ಈ ಆರ್ಥಿಕ ವ್ಯವಹಾರಗಳು ಅರ್ಥವಾಗುವುದಿದ್ದರೆ ಸ್ವಲ್ಪ ಕೇಳಿಸಿಕೊಳ್ಳಿ. ನಮ್ಮ ರಾಜ್ಯ ಸರ್ಕಾರದ ಸಾಲ ‘ಹಣಕಾಸು ಜವಾಬ್ದಾರಿ ಮತ್ತು ಬಜೆಟ್ ನಿರ್ವಹಣಾ ಕಾಯ್ದೆ (ಎಫ್‌ಆರ್‌ಬಿ)ಯ ವ್ಯಾಪ್ತಿಯಲ್ಲಿಯೇ ಇದೆ. ನಮ್ಮ ಸಾಲ ಒಟ್ಟು ಸಾಲ ಒಂದು ಲಕ್ಷ ಕೋಟಿಯನ್ನು ಮೀರಿದ್ದರೂ ಅದು ನಮ್ಮ ಜಿಎಸ್‌ಡಿಪಿಯ ಶೇ 25ರ ಮಿತಿಯೊಳಗೆಯೇ ಇದೆ. ನಮ್ಮ ಹಣಕಾಸು ಕೊರತೆ ಕೂಡಾ ಜಿಎಸ್‌ಡಿಪಿಯ ಶೇಕಡಾ ಮೂರನ್ನು ಮೀರಿಲ್ಲ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಜೆಪಿ ಪ್ರತಿಭಟನೆ: ಮೆಟ್ರೋ, ಇಂಟರ್ನೆಟ್ ಸೇವೆ ಸ್ಥಗಿತ, ಅಕ್ರಮ ಬಂಧನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕೇಂದ್ರಕ್ಕೆ ಸೂಚನೆ

'ಸತ್ತ ಮೇಲೂ ಕಾಡ್ತಿದ್ದಾನೆ'; ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನಲ್ಲೂ ನಾನಾ ಪಾಟೇಕರ್ ಹೆಸರು ಎಳೆತಂದ ತನುಶ್ರೀ ದತ್ತಾ; ನೆಟ್ಟಿಗರ ಆಕ್ರೋಶ!

ನನ್ನ ಕನಸು ನೀವೇ ಸರ್‌; ನಿಮ್ಮ ಕಣ್ಣಲ್ಲಿ ನೀರು ತರಿಸಿದೆ: ಕಿಚ್ಚ ಸುದೀಪ್ ಮುಂದೆ ಕಣ್ಣೀರಿಟ್ಟ ಮಾಡರ್ನ್ ಮಹಾಕವಿ ಮಂಜು

'ಮೈಸೂರು ರಾಜಮನೆತನ ಹೊರಗಿಟ್ಟು ಕರ್ನಾಟಕ ಇತಿಹಾಸ ಊಹಿಸುವುದು ಕಷ್ಟ': ಗವಿಸಿದ್ಧೇಶ್ವರ ಶ್ರೀಗಳು; Video

'ಮೊದಲು ನಿಮ್ಮ ಅಮೆರಿಕದಲ್ಲಿ ಕೈಗೆಟುಕುವ ದರದಲ್ಲಿ ಸೇವೆ ಒದಗಿಸಿ': ಒತ್ತಡಕ್ಕೆ ಭಾರತ ಮಣಿಯಲ್ಲ; ಎಲಾನ್ ಮಸ್ಕ್ ವಿರುದ್ಧ ನಿಶಿಕಾಂತ್ ದುಬೆ