ಬಿಡಬ್ಲ್ಯೂಎಸ್ ಎಸ್ ಬಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ನೇತೃತ್ವದ ಸಭೆ 
ರಾಜ್ಯ

ಬೆಂಗಳೂರು: ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್ ಲೈನ್ ಮೂಲಕ ಸಂಸ್ಕರಿಸಿದ ನೀರು ಪೂರೈಕೆಗೆ ಚಿಂತನೆ- ಜಲಮಂಡಳಿ ಅಧ್ಯಕ್ಷ

ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್‌ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಜಲಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಬೆಂಗಳೂರು: ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಉತ್ತೇಜಿಸುವ ನಿಟ್ಟಿನಲ್ಲಿ ದೇಶದಲ್ಲೇ ಮೊದಲ ಬಾರಿಗೆ ಕೈಗಾರಿಕೆಗಳಿಗೆ ಪ್ರತ್ಯೇಕ ಪೈಪ್‌ಲೈನ್‌ ಮೂಲಕ ಸಂಸ್ಕರಿಸಿದ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಜಲಮಂಡಳಿ ಚಿಂತನೆ ನಡೆಸುತ್ತಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ. ರಾಮ್‌ ಪ್ರಸಾತ್‌ ಮನೋಹರ್‌ ತಿಳಿಸಿದ್ದಾರೆ.

ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಇಂದು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ 1,480 ಎಂ.ಎಲ್‌.ಡಿ ತ್ಯಾಜ್ಯ ನೀರು ಉತ್ಪಾದನೆ ಆಗುತ್ತದೆ. ಪ್ರಸ್ತುತ 1,212 ಎಂ.ಎಲ್‌.ಡಿ ನೀರನ್ನು ಶುದ್ದೀಕರಿಸಲಾಗುತ್ತಿದೆ. ಇದರ ಬಳಕೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಜಲಮಂಡಳಿ ಈಗಾಗಲೇ ಹಲವಾರು ಕ್ರಮ ಕೈಗೊಂಡಿದೆ. ಸಂಸ್ಕರಿಸಿದ ನೀರಿನ ಬಳಕೆಯನ್ನು ಮತ್ತಷ್ಟು ಹೆಚ್ಚಿಸುವ ಮೂಲಕ ಕಾವೇರಿ ನೀರಿನ ಮೇಲಿನ ಅವಲಂಬನೆಯನ್ನು ಕಡಿಮೆಗೊಳಿಸುವುದು ನಮ್ಮ ಗುರಿಯಾಗಿದೆ. ಈ ಹಿನ್ನಲೆಯಲ್ಲಿ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಪ್ರತ್ಯೇಕ ಪೈಪ್‌ ಲೈನ್‌ ಮೂಲಕ ಕೈಗಾರಿಕೆಗಳಿಗೆ ಸಂಸ್ಕರಿಸಿದ ನೀರನ್ನು ಪೂರೈಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗುತ್ತಿದೆ. ಇದು ದೇಶದಲ್ಲೇ ಮೊದಲು ಎಂದರು.

ನಗರದಲ್ಲಿರುವ ಕೈಗಾರಿಕೆಗಳು ಹಾಗೂ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ನೀರು ಪೂರೈಸಲು ಜಲಮಂಡಳಿ ಸಿದ್ದವಿದೆ. ಅದರಲ್ಲೂ, ಜಲಮಂಡಳಿಯ ಬಳಿ ಉತ್ತಮ ಗುಣಮಟ್ಟದ ಸಂಸ್ಕರಿಸಿದ ನೀರು ಲಭ್ಯವಿದೆ. ಭಾರತೀಯ ವಿಜ್ಞಾನ ಸಂಸ್ಥೆಯಿಂದ ಪ್ರಮಾಣೀಕೃತವಾದ ಸಂಸ್ಕರಿಸಿದ ನೀರನ್ನ ಕಡಿಯಲು ಹೊರತುಪಡಿಸಿ ಸ್ವಚ್ಚತೆ ಸೇರಿದಂತೆ ಬಹಳಷ್ಟು ಕಾರ್ಯಗಳಿಗೆ ಉಪಯೋಗಿಸಬಹುದಾಗಿದೆ. ಇದರ ಬಳಕೆಯನ್ನು ನಿಮ್ಮ ಪ್ರದೇಶದಲ್ಲಿ ಹೆಚ್ಚಿಸುವ ಅಗತ್ಯವಿದ್ದು, ಕೈಗಾರಿಕಾ ಸಂಸ್ಥೆಗಳು ಇದರ ಬಗ್ಗೆ ಕೈಗಾರಿಕೆಗಳಿಗೆ ಜಾಗೃತಿ ಮೂಡಿಸಿ ಎಂದು ಕರೆ ನೀಡಿದರು.

ಅಂತರ್ಜಲ ಕುಸಿತದಿಂದ ಎದುರಾಗಿರುವ ನೀರಿನ ಕೊರತೆಯ ಸಮಯದಲ್ಲೂ ಪೀಣ್ಯ ಸೇರಿದಂತೆ ನಗರದ ಪ್ರಮುಖ ಕೈಗಾರಿಕಾ ಪ್ರದೇಶಗಳಲ್ಲಿ ಸಮರ್ಪಕವಾಗಿ ನೀರು ಪೂರೈಸುತ್ತಿರುವ ಜಲಮಂಡಳಿಯ ಶ್ರಮಕ್ಕೆ ಕೈಗಾರಿಕಾ ಸಂಸ್ಥೆಗಳ ಪದಾಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದರು. ಇರುವಂತಹ ಕೈಗಾರಿಕೆಗಳಿಗೆ ಸಮರ್ಪಕ ರೀತಿಯಲ್ಲಿ ನೀರಿನ ಲಭ್ಯತೆಯನ್ನ ಜಲಮಂಡಳಿ ಪೂರೈಸುತ್ತಿದೆ ಎಂದು ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಶಶಿಧರ ಶೆಟ್ಟಿ ತಿಳಿಸಿದರು.

ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷರಾದ ಹೆಚ್.ಎಂ. ಆರಿಫ್‌ ಮಾತನಾಡಿ, ನಮ್ಮಲ್ಲಿ ಸುಮಾರು 15 ಸಾವಿರಕ್ಕೂ ಹೆಚ್ಚು ಕೈಗಾರಿಕೆಗಳಿವೆ. ಇದಲ್ಲಿ ಹೆಚ್ಚು ಸೂಕ್ಷ್ಮ ಮತ್ತು ಸಣ್ಣ ಕೈಗಾರಿಕೆಗಳಿವೆ. ಮಾರ್ಚ್‌ ತಿಂಗಳ ಮೊದಲ ವಾರದಲ್ಲೇ ಜಲಮಂಡಳಿ ವತಿಯಿಂದ ಅಧಿಕಾರಿಗಳು ಪೀಣ್ಯ ಕೈಗಾರಿಕಾ ಸಂಘದ ಜೊತೆ ಸಭೆ ನಡೆಸಿ ಅಗತ್ಯ ಪೂರೈಕೆಗೆ ವ್ಯವಸ್ಥೆಯನ್ನು ಮಾಡಿದ್ದಾರೆ ಎಂದರು.

ಗ್ರೀನ್‌ ಸ್ಟಾರ್‌ ಚಾಲೆಂಜ್‌ ಸ್ವೀಕರಿಸಿದ ಕೈಗಾರಿಕೋದ್ಯಮಿಗಳು: ನೀರಿನ ಉಳಿತಾಯ ಮಾಡುವಂತಹ ತಂತ್ರಜ್ಞಾನಗಳನ್ನ ಅಳವಡಿಸಿಕೊಳ್ಳುವುದು, ಸಂಸ್ಕರಿಸಿದ ನೀರಿನ ಬಳಕೆಯನ್ನು ಹೆಚ್ಚಿಸಿಕೊಳ್ಳುವುದು, ಕೊಳವೆ ಬಾವಿಗಳ ಬಳಕೆಯಲ್ಲಿ ತಂತ್ರಜ್ಞಾನದ ಅಳವಡಿಕೆ ಮಾಡಿಕೊಳ್ಳುವುದು, ಮಳೆ ನೀರು ಇಂಗು ಗುಂಡಿಗಳನ್ನ ಅಳವಡಿಸಿಕೊಳ್ಳುವುದು ಹಾಗೂ ಈ ಎಲ್ಲಾ ಹೊಸ ಅನುಷ್ಠಾನಗಳ ಬಗ್ಗೆ ಬಳಕೆದಾರರಿಗೆ ಮಾಹಿತಿಯನ್ನು ಕೊಡುವ ಮೂಲಕ ನೀರಿನ ಉಳಿತಾಯದ ಮಹತ್ವವನ್ನು ಸಾರುವುದು. ಈ ಪಂಚ ಸೂತ್ರಗಳನ್ನು ಅಳವಡಿಸಿಕೊಳ್ಳುವ ಮೂಲಕ ಜನಾಂದೋಲನದಲ್ಲಿ ಭಾಗಿಯಾಗುವುದಾಗಿ ಕೈಗಾರಿಕೋದ್ಯಮಿಗಳು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT