ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ: ಖಾಸಗಿ ಬಸ್ ಪಲ್ಟಿ ಹೊಡೆದು ನಾಲ್ವರು ಸಾವು, 30ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಲಕನ ನಿಯಂತ್ರಣ ತಪ್ಪಿದ ಖಾಸದಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.

ಸಂಗ್ರಹ ಚಿತ್ರ
Manjula VN
Updated On : 7 Apr 2024, 9:16 am

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಖಾಸದಿ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟು, 30ಕ್ಕೂ ಹೆಚ್ಚು ಮಂದಿಗೆ ಗಾಯವಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕಿನಲ್ಲಿ ನಡೆದಿದೆ.

ಬೆಂಗಳೂರಿನಿಂದ ಗೋಕರ್ಣದತ್ತ ಶಿವಮೊಗ್ಗ ಮಾರ್ಗವಾಗಿ ಬಸ್​ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಬಸ್ಸಿನಲ್ಲಿ 50 ಮಂದಿ ಪ್ರಯಾಣಿಕರಿದ್ದರು ಎಂದು ವರದಿಯಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, 30ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ.

Also Read

ಬೆಂಗಳೂರು: ಪ್ರತ್ಯೇಕ ಅಪಘಾತ; 6 ವರ್ಷದ ಮಗು ಸೇರಿ ಮೂವರ ಸಾವು

ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Advertisement

Advertisement

ಈ ನಡುವೆ ಅವೈಜ್ಞಾನಿಕ ರಸ್ತೆ ನಿರ್ಮಾಣದಿಂದಾಗಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ ಎಂದು ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement