ಅಶ್ವಿನಿ ಪುನೀತ್ ರಾಜ್ ಕುಮಾರ್, ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಅಶ್ವಿನಿ ಪುನೀತ್ ರಾಜ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಫೋಸ್ಟ್: ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ- ಸಿಎಂ ಸಿದ್ದರಾಮಯ್ಯ

ಕರ್ನಾಟಕ ರತ್ನ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು ತೀವ್ರ ಚರ್ಚೆಯಾಗುತ್ತಿದೆ.

ಬೆಂಗಳೂರು: ಕರ್ನಾಟಕ ರತ್ನ ದಿವಂಗತ ಪವರ್ ಸ್ಟಾರ್ ಪುನೀತ್ ರಾಜ್​ಕುಮಾರ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದ ಆಕ್ಷೇಪಾರ್ಹ ಹೇಳಿಕೆ ಕುರಿತು ತೀವ್ರ ಚರ್ಚೆಯಾಗುತ್ತಿದೆ.

ಐಪಿಎಲ್ ನಲ್ಲಿ ಆರ್ ಸಿಬಿಯ ಸತತ ಸೋಲು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರೇ ಕಾರಣ. ಅವರನ್ನು ಆರ್ ಸಿಬಿ ಈವೆಂಟ್ ಗೆ ಕರೆಸಬಾರದಿತ್ತು ಎನ್ನುವ ಕೀಳುಮಟ್ಟದ ಪೋಸ್ಟ್ ಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಗಜಪಡೆ ಎಂಬ ಅಕೌಂಟ್​ನಿಂದ ಈ ಫೋಸ್ಟ್ ಮಾಡಲಾಗಿದ್ದು, ಸಾರ್ವಜನಿಕರು ತೀವ್ರವಾಗಿ ಖಂಡಿಸುತ್ತಿದ್ದಾರೆ. ಅಶ್ವಿನಿ ಪುನೀತ್ ರಾಜ್​ಕುಮಾರ್ ಟೀಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಕಿಡಿಗೇಡಿಗಳಿಗೆ ವಾರ್ನಿಂಗ್ ಕೊಟ್ಟಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಹೆಣ್ಣಿಗೆ ಸ್ವಾತಂತ್ರ್ಯವನ್ನು ನಿರಾಕರಿಸಿ ಗುಲಾಮಳನ್ನಾಗಿ ಮಾಡಿ ಮನೆಯೊಳಗೆ ಕೂರಿಸಿದ ಮನುವಾದದ ಸಂಕೋಲೆಯನ್ನು ಮಹಿಳೆಯರೇ ಕಿತ್ತುಹಾಕಿ ಸ್ವತಂತ್ರರಾಗುತ್ತಿದ್ದಾರೆ. ಸಂವಿಧಾನದತ್ತ ಸ್ವಾತಂತ್ರ್ಯದೊಂದಿಗೆ ಪುರುಷರಿಗೆ ಸರಿಸಮಾನರಾಗಿ ಎಲ್ಲ ಕ್ಷೇತ್ರಗಳಲ್ಲಿಯೂ ಮುನ್ನಡೆಯುತ್ತಿದ್ದಾರೆ.ಪತಿಯನ್ನು ಕಳೆದುಕೊಂಡು ಹೆಣ್ಣುಮಕ್ಕಳು ಕೂಡಾ ವೈಯಕ್ತಿಕ ಬದುಕಿನ ನೋವುಗಳನ್ನು ನುಂಗಿಕೊಂಡು ಸಾಮಾಜಿಕ ಮತ್ತು ಔದ್ಯಮಿಕ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ಮಾದರಿಯಾಗುತ್ತಿದ್ದಾರೆ. ಈ ಸಾಮಾಜಿಕ ಬದಲಾವಣೆಯಲ್ಲಿ ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿಯವರಂತಹ ಮಹನೀಯರ ಸಮಾಜ ಸುಧಾರಣೆಯ ಕೊಡುಗೆಯೂ ಇದೆ ಎಂದಿದ್ದಾರೆ

ಹೀಗಿದ್ದರೂ ಇತಿಹಾಸದ ಚಕ್ರವನ್ನು ಹಿಂದಕ್ಕೆ ಎಳೆದೊಯ್ಯುವ ಪ್ರಯತ್ನವನ್ನು ಕೆಲವು ಕಿಡಿಗೇಡಿಗಳು ನಡೆಸುತ್ತಿದ್ದಾರೆ. ಇತ್ತೀಚೆಗೆ ಕೆಲವು ಗೊಡ್ಡು ಸಂಪ್ರದಾಯವಾದಿಗಳು ಪತಿಯನ್ನು ಕಳೆದುಕೊಂಡ ಹೆಣ್ಣು ಮಕ್ಕಳನ್ನು ಸಾರ್ವಜನಿಕವಾಗಿ ಅಪಮಾನಿಸಿ ತಮ್ಮ ವಿಕೃತಿಯನ್ನು ಮೆರೆಯುತ್ತಿರುವುದು ಖಂಡನೀಯ. ಇದು ಸಂವಿಧಾನವನ್ನು ತಿರಸ್ಕರಿಸಿ ಮನುವಾದವನ್ನು ಪುರಸ್ಕರಿಸಬೇಕೆಂದು ಕೆಲವು ಸಮಾಜ ವಿರೋಧಿ ಶಕ್ತಿಗಳು ಹಾಕುತ್ತಿರುವ ಕೂಗಿನ ಫಲ ಎಂದು ಬರೆದಿದ್ದಾರೆ. ಹೆಣ್ಣುಮಕ್ಕಳ ತುಚ್ಛೀಕರಣವನ್ನು ನಮ್ಮ ಸರ್ಕಾರ ಖಂಡಿತ ಸಹಿಸುವುದಿಲ್ಲ, ಇದಕ್ಕೆ ಕಾರಣಕರ್ತರಾದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್​ನಲ್ಲಿ ಬರೆಯಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT