ಬೆಂಕಿ ನಂದಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿ.
ರಾಜ್ಯ

ಟಿ.ಆರ್.ಮಿಲ್ ಗೋದಾಮಿನಲ್ಲಿ ಅಗ್ನಿ ಅವಘಡ: ಭಾರೀ ಪ್ರಮಾಣದ ಟಯರ್ ಬೆಂಕಿಗಾಹುತಿ

ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಬೆಂಗಳೂರು: ನಗರದ ಚಾಮರಾಜಪೇಟೆಯ ಗೋದಾಮಿನಲ್ಲಿ ಭಾನುವಾರ ಅಗ್ನಿಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ಟೈಯರ್ ಗಳು ಬೆಂಕಿಗಾಹುತಿಯಾಗಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.

ಚಾಮರಾಜಪೇಟೆಯ ಗವಿಪುರದ ಟಿಆರ್.ಮಿಲ್ ಆವರಣದ ಟೈಯರ್ ಗೋದಾಮಿನಲ್ಲಿ ನಿನ್ನೆ ಬೆಳಗಿನ ಜಾವ 4.40ರ ಸುಮಾರಿಗೆ ದಟ್ಟ ಹೊಣೆ ಕಾಣಿಸಿಕೊಂಡು, ಕೆಲವೇ ಕ್ಷಣಗಳಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲವಾದರೂ, ಶಾರ್ಟ್ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ.

ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಗಳು ಸಾಕಷ್ಟು ಹರಸಾಹಸ ಪಟ್ಟರು. ಮೈಸೂರು ರಸ್ತೆ, ಹೈಗ್ರೌಂಡ್ಸ್, ಬನಶಂಕರಿ, ರಾಜಾಜಿನಗರ, ಸರ್ಜಾಪುರ, ನಾಗರಭಾವಿಯಿಂದ ತಲಾ ಒಂದರಂತೆ ಮತ್ತು ಬಾಣಸವಾಡಿಯಿಂದ ಎರಡು ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸುಮಾರು 10 ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದರು.

ಟಿಆರ್ ಮಿಲ್ ಬಳಿಯ ಬಹುಮಹಡಿ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭದ್ರತಾ ಸಿಬ್ಬಂದಿ ಘಟನೆಯ ಬಗ್ಗೆ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರು. . ಬೆಂಕಿ ಭಾಗಶಃ ನಂದಿಸುವವರೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಮನೆಗಳಲ್ಲಿದ್ದವರನ್ನು ಸ್ಥಳಾಂತರಿಸಲಾಗಿತ್ತು ಅಗ್ನಿಶಾಮಕ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!