ಪ್ರಾತಿನಿಧಿಕ ಚಿತ್ರ 
ರಾಜ್ಯ

ರಾಜ್ಯದ ಹಲವೆಡೆ ತಾಪಮಾನ ಏರಿಕೆ; ಕಲಬುರಗಿಯಲ್ಲಿ 43.1 ಡಿಗ್ರಿ ಸೆಲ್ಸಿಯಸ್; ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ಅತಿ ಹೆಚ್ಚು 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ನಗರದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಅತ್ಯಧಿಕ ತಾಪಮಾನವಾಗಿದೆ.

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ತಾಪಮಾನ ಏರಿಕೆಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಭಾನುವಾರ ಅತಿ ಹೆಚ್ಚು 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ನಗರದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಅತ್ಯಧಿಕ ತಾಪಮಾನವಾಗಿದೆ.

ರಾಯಚೂರು (41.8 ಡಿಗ್ರಿ ಸೆಲ್ಸಿಯಸ್), ಬಾಗಲಕೋಟೆ (41.5 ಡಿಗ್ರಿ ಸೆಲ್ಸಿಯಸ್), ಕೊಪ್ಪಳ (41.3 ಡಿಗ್ರಿ ಸೆಲ್ಸಿಯಸ್) ಮತ್ತು ವಿಜಯಪುರ (41 ಡಿಗ್ರಿ ಸೆಲ್ಸಿಯಸ್) ಜಿಲ್ಲೆಗಳು ತೀವ್ರ ಬಿಸಿಸಿನಿ ತಾಪಕ್ಕೆ ಸಿಲುಕಿದ್ದು, ಜನರು ಪರದಾಡುವಂತಾಗಿದೆ. ಹವಾಮಾನ ಇಲಾಖೆ ಕೂಡ ರಾಜ್ಯದಲ್ಲಿ ಶುಷ್ಕ ವಾತಾವರಣದ ಮುನ್ಸೂಚನೆ ನೀಡಿದೆ.

ಆದಾಗ್ಯೂ, ಇಂದು ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಂಗಳವಾರ ಲಘು ಮಳೆಯಾಗುವ ಮುನ್ಸೂಚನೆ ಇದೆ.

ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಪಶ್ಚಿಮ ಭಾಗಗಳಲ್ಲಿ ಬಿಸಿ ಮತ್ತು ಆರ್ದ್ರ ವಾತಾವರಣವು ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳು, ರಾಮನಗರ, ಶಿವಮೊಗ್ಗ, ದಾವಣಗೆರೆ, ಮೈಸೂರು, ಮಂಡ್ಯ, ಹಾಸನ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2 ಡಿಗ್ರಿ ಸೆಲ್ಸಿಯಸ್‌ನಿಂದ 4 ಡಿಗ್ರಿ ಸೆಲ್ಸಿಯಸ್‌ವರೆಗೆ ಏರುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಮುಂದಿನ ಎರಡು ದಿನಗಳಲ್ಲಿ ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ರಾಯಚೂರು ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ಬೆಚ್ಚಗಿರುತ್ತದೆ ಎಂದು ಅದು ಹೇಳಿದೆ.

ಮುಂದಿನ 24 ಗಂಟೆಗಳಲ್ಲಿ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಮುನ್ಸೂಚನೆ ಇದೆ.

ಬೆಂಗಳೂರಿನ ಬಿಸಿಲಿನ ವಾತಾವರಣದ ಹಿನ್ನೆಲೆಯಲ್ಲಿ ಕೆಸಿ ಜನರಲ್ ವಾರ್ಡ್ ಸೇರಿದಂತೆ ಬಹುತೇಕ ಆಸ್ಪತ್ರೆಗಳಲ್ಲಿ ಸನ್‌ಸ್ಟ್ರೋಕ್ ವಾರ್ಡ್‌ಗಳನ್ನು ತೆರೆಯಲಾಗಿದೆ. ಜನರು ನೇರವಾಗಿ ಹೊರಗೆ ಹೋಗಬೇಡಿ ಮತ್ತು ಶಾಖದ ಹೊಡೆತಗಳನ್ನು ತಪ್ಪಿಸಲು ಸರಿಯಾಗಿ ದೇಹವನ್ನು ಹೈಡ್ರೇಟ್ ಮಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT