ಸಂಗ್ರಹ ಚಿತ್ರ
ಸಂಗ್ರಹ ಚಿತ್ರ 
ರಾಜ್ಯ

ಲೋಕಸಭಾ ಚುನಾವಣೆ 2024: ರಾಜ್ಯದ 19 ಕ್ಷೇತ್ರಗಳಲ್ಲಿ SUCI ಸ್ಪರ್ಧೆ

Manjula VN

ಬೆಳಗಾವಿ: ಲೋಕಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಬೆಳಗಾವಿ ಸೇರಿದಂತೆ ರಾಜ್ಯದ್ಯಂತ ಒಟ್ಟು 19 ಕ್ಷೇತ್ರಗಳಲ್ಲಿ ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ (ಎಸ್‌ಯುಸಿಐ-ಸಿ) ಪಕ್ಷದಿಂದ ಅಭ್ಯರ್ಥಿಗಳು ಸ್ಪರ್ಧೆ ನಡೆಸಲಿದ್ದಾರೆಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಲಕ್ಷ್ಮಣ ಜಡಗನ್ನವರ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರದಲ್ಲಿರುವಾಗ ಜನರ ಕೆಂಗಣ್ಣಿಗೆ ಗುರಿಯಾಗುವ ಬಂಡವಾಳಶಾಙಿ ಪಕ್ಷಗಳು ಹೊಸ ಮುಖಗಳೊಂದಿಗೆ, ಹೊಸ ಗ್ಯಾರಂಟಿಗಳೊಂದಿಗೆ ಮತ್ತೆ ಜನರ ಬಳಗೆ ಬರುತ್ತಿವೆ. ದುಡಿಯುವ ಜನರ, ರೈತ, ಕಾರ್ಮಿಕರ ಸಮಸ್ಯೆಗಳ ಪರಿಹಾರಕ್ಕೆ ದಿನನಿತ್ಯ ಹೋರಾಟ ಕಟ್ಟುತ್ತಿರುವ ಎಸ್‌ಯುಸಿಐ ಪಕ್ಷ ಕೂಡ ಈ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸಲಿದವೆ. ದೇಶದ 19 ರಾಜ್ಯ 3 ಕೇಂದ್ರಾಡಳಿತ ಪ್ರದೇಶಗಳಲ್ಲಿ ನಮ್ಮ ಪಕ್ಷ 151 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಕಣಕ್ಕಿಳಿಸಲು ನಿರ್ಧರಿಸಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ ಈ ಬಾರಿ ಬೆಳಗಾವಿ ಸೇರಿ ಒಟ್ಟು 19 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿದೆ. ಈ ಚುನಾವಣೆ ಬಂಡವಾಳಶಾಹಿ ಮತ್ತು ಕಾರ್ಮಿಕರ ನಡುವಿನ, ಶೋಷಕರು ಮತ್ತು ಶೋಷಿತರ ನಡುವಿನ ಸಮರವಾಗಿದೆ ಎಂದು ತಿಳಿಸಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಜನರ ಜೀವನವನ್ನು ಮಾರಾಟ ಮಾಡಿದೆ. 2014ರ ಚುನಾವಣೆಯಲ್ಲಿ ಅಗತ್ಯ ವಸ್ತುಗಳ ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರದ ಬಗ್ಗೆ ಧ್ವನಿ ಎತ್ತಿದ್ದ ಬಿಜೆಪಿ, ಇದೀಗ ಮೌನ ತಾಳಿದೆ. 2014ರಲ್ಲಿ ಭಾರೀ ಹೈಪ್ ಕ್ರಿಯೇಟ್ ಮಾಡಿದ್ದ ‘ಗುಜರಾತ್ ಮಾಡೆಲ್’ ಕಣ್ಮರೆಯಾಗಿದೆ. ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪುಹಣ ವಾಪಸ್ ತರುವುದನ್ನು ಬಿಟ್ಟು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿರುವ ಚುನಾವಣಾ ಬಾಂಡ್ ಗಳ ಮಾಹಿತಿಯನ್ನು ಬಹಿರಂಗಪಡಿಸದಿರಲು ಸರ್ಕಾರ ಯತ್ನಿಸುತ್ತಿದೆ. ಸರ್ಕಾರದ ಈ ಯತ್ನಗಳ ಫಲವಾಗಿ ಜಾಗತಿಕ ಹಸಿವು ಸೂಚ್ಯಂಕ ಮತ್ತು ಒಟ್ಟು ಅಭಿವೃದ್ಧಿ ಉತ್ಪನ್ನದಲ್ಲಿ (ಜಿಡಿಪಿ) ಭಾರತವು ಕೆಳಭಾಗದಲ್ಲಿ ಉಳಿದಿದೆ. ಹಲವು ದಶಕಗಳಿಂದ ದೇಶವನ್ನು ನಾಶಪಡಿಸಿದ ಕಾಂಗ್ರೆಸ್, ಇದೀಗ ಮತ್ತೊಂದು ಅವಕಾಶಕ್ಕಾಗಿ ಹಾತೊರೆಯುತ್ತಿದೆ. ಮೋದಿ ಆಡಳಿತದಲ್ಲಿ ಅಂಬಾನಿ, ಅದಾನಿಗಳಂತಹ ಶ್ರೀಮಂತರು ಮತ್ತಷ್ಟು ಶ್ರೀಮಂತರಾಗಿದ್ದಾರೆ ಎಂದು ಕಿಡಿಕಾರಿದರು.

SCROLL FOR NEXT