ಸಿಎಂ ಸಿದ್ದರಾಮಯ್ಯ 
ರಾಜ್ಯ

ಚಿನ್ನಸ್ವಾಮಿ ಸ್ಟೇಡಿಯಂ ಸ್ಟಾಂಡ್​ಗಳಿಗೆ ಮೂವರು ಕ್ರಿಕೆಟ್ ದಿಗ್ಗಜರ ಹೆಸರು ಇಡುವಂತೆ ಸಿಎಂ ಮನವಿ

ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟಾಂಡ್​ಗಳಿಗೆ ರಾಜ್ಯದ ದಿಗ್ಗಜ ಕ್ರಿಕೆಟಿಗರಾದ ಇಎಎಸ್ ಪ್ರಸನ್ನ, ಜಿ.ಆರ್.ವಿಶ್ವನಾಥ್ ಮತ್ತು ಬಿ.ಎಸ್.ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಸ್ಟಾಂಡ್​ಗಳಿಗೆ ರಾಜ್ಯದ ದಿಗ್ಗಜ ಕ್ರಿಕೆಟಿಗರಾದ ಇಎಎಸ್ ಪ್ರಸನ್ನ, ಜಿ.ಆರ್.ವಿಶ್ವನಾಥ್ ಮತ್ತು ಬಿ.ಎಸ್.ಚಂದ್ರಶೇಖರ್ ಅವರ ಹೆಸರನ್ನು ನಾಮಕರಣ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಕೆಎಸ್‌ಸಿಎ ಅಧ್ಯಕ್ಷ ರಘುರಾಮ್ ಭಟ್ ಅವರಿಗೆ ಸೋಮವಾರ ಪತ್ರ ಬರೆದಿರುವ ಅವರು, ಈ ವಿಷಯದ ಕುರಿತು ಲೇಖಕ ಮತ್ತು ಇತಿಹಾಸಕಾರ ರಾಮಚಂದ್ರ ಗುಹಾ ಅವರು ಮಾರ್ಚ್ 29ರಂದು ತಮಗೆ ಬರೆದಿದ್ದ ಪತ್ರದ ಕುರಿತು ಉಲ್ಲೇಖಿಸಿದ್ದಾರೆ.

ರಾಮಚಂದ್ರ ಗುಹಾ ಅವರು ಮಾಡಿರುವ ಮನವಿಯಲ್ಲಿ ಶ್ರೇಷ್ಠ ಅಂಶಗಳಿವೆ. ಜಿ.ಆರ್. ವಿಶ್ವನಾಥ್, ಇ.ಎ.ಎಸ್. ಪ್ರಸನ್ನ ಹಾಗೂ ಬಿ.ಎಸ್‌. ಚಂದ್ರಶೇಖರ್ ಅವರ ಹೆಸರುಗಳನ್ನು ಸ್ಟ್ಯಾಂಡ್‌ಗಳಿಗೆ ನಾಮಕರಣ ಮಾಡಬೇಕೆಂದು ಮನವಿ ಮಾಡುತ್ತೇನೆ. ಇದರಿಂದ ಮುಂದಿನ ಪೀಳಿಗೆಯ ಆಟಗಾರರಿಗೆ ಪ್ರೇರಣೆ ಲಭಿಸುತ್ತದೆ’ ಎಂದು ಸಿದ್ಧರಾಮಯ್ಯ ಉಲ್ಲೇಖಿಸಿದ್ದಾರೆ.

1974ರಲ್ಲಿ ಕರ್ನಾಟಕ ತಂಡವು ಮೊದಲ ಬಾರಿಗೆ ರಣಜಿ ಟ್ರೋಫಿ ಜಯಿಸಿತ್ತು. ಸತತ 15 ಬಾರಿ ರಣಜಿ ಚಾಂಪಿಯನ್ ಆಗಿದ್ದ ಮುಂಬೈ ತಂಡದ ಪಾರಮ್ಯಕ್ಕೆ ಕರ್ನಾಟಕ ತಡೆಯೊಡ್ಡಿದ್ದು ಐತಿಹಾಸಿಕ ಸಾಧನೆ. ಆ ವಿಜಯಕ್ಕೆ ಈಗ 50 ವರ್ಷಗಳು ತುಂಬಿರುವ ಸಂಭ್ರಮ. ಶ್ರೇಷ್ಠ ಬ್ಯಾಟರ್ ವಿಶ್ವನಾಥ್, ಸ್ಪಿನ್ ಅವಳಿಗಳಾದ ಪ್ರಸನ್ನ ಮತ್ತು ಚಂದ್ರಶೇಖರ್ ರಾಜ್ಯ ಮತ್ತು ದೇಶದ ಕ್ರಿಕೆಟ್‌ಗೆ ನೀಡಿರುವ ಕೊಡುಗೆ ಅಮೋಘವಾದದ್ದು. ಅವರ ಹೆಸರುಗಳನ್ನು ಸ್ಟ್ಯಾಂಡ್‌ಗಳಿಗೆ ಇಡಲು ಕ್ರಮ ಕೈಗೊಳ್ಳಬೇಕು’ ಎಂದು ಗುಹಾ ಅವರು ಮುಖ್ಯಮಂತ್ರಿಗಳಿಗೆ ಬರೆದ ಪತ್ರದಲ್ಲಿ ವಿವರಿಸಿದ್ದರು.

ಈಚೆಗೆ ಕೆಎಸ್‌ಎಲ್‌ಟಿಎನಲ್ಲಿ ನಡೆದಿದ್ದ 1974ರ ರಣಜಿ ಟ್ರೋಫಿ ವಿಜೇತ ತಂಡದ ಆಟಗಾರರನ್ನು ಸನ್ಮಾನಿಸುವ ಸಮಾರಂಭದಲ್ಲಿ ಭಾರತ ತಂಡದ ಮಾಜಿ ನಾಯಕ ಸುನಿಲ್ ಗಾವಸ್ಕರ್ ಅವರೂ ತಮ್ಮ ವಿಡಿಯೊ ಸಂದೇಶದಲ್ಲಿ ಇದೇ ಮಾತನ್ನು ಹೇಳಿದ್ದರು.

ನನ್ನ ಪ್ರಕಾರ ಗುಹಾ ಬರೆದ ಪತ್ರದಲ್ಲಿ ಬಹಳಷ್ಟು ಸತ್ಯಾಂಶ ಇದೆ. ಹೀಗಾಗಿ ಚಿನ್ನಸ್ವಾಮಿ ಸ್ಟೇಡಿಯಂನ ಸ್ಟಾಂಡ್​ಗಳಿಗೆ ಕರ್ನಾಟಕದ ಕ್ರಿಕೆಟ್ ಲೆಂಜೆಂಡ್​ಗಳಾದ ಇಎಎಸ್ ಪ್ರಸನ್ನ, ಜಿ.ಆರ್.ವಿಶ್ವನಾಥ್ ಮತ್ತು ಬಿ.ಎಸ್.ಚಂದ್ರಶೇಖರ್ ಹೆಸರನ್ನು ನಾಮಕರಣ ಮಾಡುವಂತೆ ನಾನು ನಿಮ್ಮಲ್ಲಿ ಮನವಿ ಮಾಡುತ್ತೇನೆ. ಇದು ಮುಂಬರುವ ಕ್ರಿಕೆಟಿಗರಿಗೆ ಉತ್ತೇಜನ ನೀಡಲಿದೆ ಎಂದು ಸಿಎಂ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT