ಸುಳ್ಳು ಸುದ್ದಿಯ ಪತ್ರಿಕಾ ತುಣುಕು
ಸುಳ್ಳು ಸುದ್ದಿಯ ಪತ್ರಿಕಾ ತುಣುಕು 
ರಾಜ್ಯ

ಹಿಂದೂಗಳ ವೋಟ್ ಬೇಡ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ: 7 ಜನರ ವಿರುದ್ಧ ಎಫ್‌ಐಆರ್‌

Lingaraj Badiger

ಬೆಂಗಳೂರು: ನಮಗೆ ಹಿಂದೂಗಳ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ ಎಂದು ಸುಳ್ಳು ಸುದ್ದಿಯ ಪತ್ರಿಕಾ ತುಣುಕು ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಜನರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಹಿಂದೂಗಳ ಅಗತ್ಯ ನಮಗೆ ಇಲ್ಲ. ಮುಸ್ಲಿಮರ ವೋಟ್ ಸಾಕು ಎಂದು ಮುಖ್ಯಮಂತ್ರಿಗಳು ಹೇಳಿರುವುದು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿತ್ತು. ಈ ಸಂಬಂಧ ಕಾಂಗ್ರೆಸ್ ಕಾನೂನು ಘಟನೆ ಸೈಬರ್ ಕ್ರೈಂ ಠಾಣೆಗೆ ಕ ದೂರು ನೀಡಿತ್ತು.

ಕಾಂಗ್ರೆಸ್ ದೂರಿನ ಆಧಾರದ ಮೇಲೆ ಸದ್ಯ ಪ್ರಭಾಕರ್, ವಸಂತ ಗಿಳಿಯಾರ್ ಸೇರಿದಂತೆ ಒಟ್ಟು 7 ಜನರು ವಿರುದ್ದ ಎಫ್​ಐಆರ್ ದಾಖಲಾಗಿದೆ.

ಇನ್ನು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ವಾರ್ತಾಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.

ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ.

ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ಎಂದು ಸಿಎಂ ಹೇಳಿದ್ದಾರೆ.

SCROLL FOR NEXT