ಪ್ರಧಾನಿ ನರೇಂದ್ರ ಮೋದಿ 
ರಾಜ್ಯ

ನರೇಂದ್ರ ಮೋದಿ 3ನೇ ಅವಧಿಗೆ ಪ್ರಧಾನಿ; ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲ್ಲ: ಭವಿಷ್ಯ ನುಡಿದಿದ್ದೇನು?

ಮಂಗಳವಾರ ಯುಗಾದಿ ಹಬ್ಬದ ಶುಭದಿನದಂದು ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಜನರು ನಂಬುವ ಭವಿಷ್ಯ ಹೇಳುವ ಮಂದಿ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬೆಂಗಳೂರು: ಮಂಗಳವಾರ ಯುಗಾದಿ ಹಬ್ಬದ ಶುಭದಿನದಂದು ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಯ ಹೆಚ್ಚಿನ ಸಂಖ್ಯೆಯ ಜನರು ನಂಬುವ ಭವಿಷ್ಯ ಹೇಳುವ ಮಂದಿ ಸತತ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ಅಧಿಕಾರಕ್ಕೆ ಬರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ಪಟ್ಟಣದ ಮಾರ್ವಾಡಿ ಬಗೀಚದಲ್ಲಿ ಭವಿಷ್ಯ ಹೇಳುವ ಇಲಾಲ ಪರಂಪರೆಯ ಮಲ್ಲಿಕಾರ್ಜುನ ಗೋಬಿ ಮಾತನಾಡಿ, ಲೋಕಸಭೆ ಚುನಾವಣೆಯಲ್ಲಿ ಮೂರನೇ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಪ್ರಧಾನಿಯಾಗುವ ಮುನ್ಸೂಚನೆ ನೀಡಿದ್ದಾರೆ.

ಹಲವಾರು ವರ್ಷಗಳಿಂದ ಭವಿಷ್ಯ ನುಡಿಯುತ್ತಿರುವ ಅವರು, ಈ ವರ್ಷದ ಆರಂಭಕ್ಕೂ ಮುನ್ನ ಮಳೆ ಮತ್ತು ಬೆಳೆಗಳ ಕುರಿತು ಭವಿಷ್ಯ ನುಡಿದಿದ್ದರು ಮತ್ತು ಈ ಪ್ರದೇಶದಲ್ಲಿ ತೊಗರಿ ಮತ್ತು ರಾಗಿ ಬೆಳೆಗಳು ಕೀಟಗಳಿಂದ ಹಾನಿಗೊಳಗಾಗುತ್ತವೆ ಎಂದಿದ್ದರು. ಈ ಭವಿಷ್ಯವಾಣಿಗಳ ಪ್ರಕಾರ ಇಲ್ಲಿನ ಸಾವಿರಾರು ರೈತರು ಮತ್ತು ಸಾಂಪ್ರದಾಯಿಕ ಉಡುಗೆ ತಯಾರಕರು ತಮ್ಮ ಜೀವನದಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳುತ್ತಾರೆ.

ಇದೇ ವೇಳೆ ಧಾರವಾಡ ಜಿಲ್ಲೆಯ ಬೆಟಗೇರಿ ಪಟ್ಟಣ ಸಮೀಪದ ಹನುಮನಕೊಪ್ಪ ಗ್ರಾಮದಲ್ಲಿ ಖ್ಯಾತ ಬೊಂಬೆ ಭವಿಷ್ಯ ನುಡಿದಿದ್ದು, ರಾಜ್ಯ ಹಾಗೂ ಕೇಂದ್ರ ರಾಜಕಾರಣದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ, ಪ್ರಧಾನಿ ಮೋದಿ ಅವರು ಕೇಂದ್ರದಲ್ಲಿ ಮೂರನೇ ಅವಧಿಗೆ ಅಧಿಕಾರಕ್ಕೆ ಬರುತ್ತಾರೆ ಎಂಬುದನ್ನು ಸೂಚಿಸುತ್ತಿದೆ.

ಸಾಂಪ್ರದಾಯಿಕ ಬೊಂಬೆ ಭವಿಷ್ಯವನ್ನು 1936 ರಿಂದ ಈ ಪ್ರದೇಶದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಅನುಸರಿಸುತ್ತಿದ್ದಾರೆ.

ಈ ಹಿಂದೆ, ಕರ್ನಾಟಕದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದ್ದು, ಮುಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಬೊಂಬೆ ಭವಿಷ್ಯ ನುಡಿದಿತ್ತು.

ಯುಗಾದಿ ಹಬ್ಬದ ಮುನ್ನ ಹುಣ್ಣಿಮೆ ದಿನದಂದು ಬೊಂಬೆಗಳನ್ನು ಸ್ಥಳೀಯ ಹೊಳೆಯ ದಡದಲ್ಲಿ ನಾಲ್ಕು ದಿಕ್ಕುಗಳಲ್ಲಿ ಸ್ಥಾಪಿಸಲಾಗುತ್ತದೆ. ಮರುದಿನ, ಭವಿಷ್ಯಕಾರರು ನಿರ್ದಿಷ್ಟ ದಿಕ್ಕುಗಳಲ್ಲಿನ ಬೊಂಬೆಗಳನ್ನು ವಿಶ್ಲೇಷಿಸುತ್ತಾರೆ ಮತ್ತು ಮಳೆ ಮತ್ತು ಬೆಳೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಭವಿಷ್ಯ ನುಡಿಯುತ್ತಾರೆ.

ಈ ಬೊಂಬೆಗಳಿಗೆ ಹಾನಿಯಾದರೆ ಅಧಿಕಾರವೇ ಬದಲಾಗುತ್ತದೆ ಎಂದು ವಿಶ್ಲೇಷಿಸಲಾಗಿದೆ. ಈ ಬಾರಿ ಬೊಂಬೆಗಳು ಸುರಕ್ಷಿತವಾಗಿದ್ದು, ಯಾವುದೇ ಭಾಗಕ್ಕೆ ಹಾನಿಯಾಗಿಲ್ಲ. ಈ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಮಟ್ಟದಲ್ಲಿ ಅಧಿಕಾರಕ್ಕೆ ತೊಂದರೆಯಾಗುವುದಿಲ್ಲ ಎಂದು ಭವಿಷ್ಯ ನುಡಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT