ಸಾಂದರ್ಭಿಕ ಚಿತ್ರ  
ರಾಜ್ಯ

ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಪೊಲೀಸರಿಗೆ ಕರೆ ಮಾಡಿದ ತಾಯಿ: ಬೆಂಗಳೂರಿನ ಜಾಲಹಳ್ಳಿಯಲ್ಲಿ ಹೃದಯ ವಿದ್ರಾವಕ ಘಟನೆ!

ತನಗೆ ಕೆಲಸವಿಲ್ಲದೆ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರು: ಬಡತನ, ಹಸಿವು, ಆರ್ಥಿಕ ಕಷ್ಟ ಮನುಷ್ಯನನ್ನು ಯಾವ ಹೀನ ಕೃತ್ಯವೆಸಗುವ ಮನಸ್ಥಿತಿಗೆ ತಳ್ಳಬಹುದು ಎಂಬುದಕ್ಕೆ ಬೆಂಗಳೂರಿನ ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈ ಘಟನೆಯೇ ಉದಾಹರಣೆ.

ತನಗೆ ಕೆಲಸವಿಲ್ಲದೆ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿದೆ ಎಂದು ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ಜಾಲಹಳ್ಳಿಯಲ್ಲಿ ನಡೆದಿದೆ.

ಗಂಗಾದೇವಿ ಮಕ್ಕಳನ್ನು ಕೊಲೆ ಮಾಡಿದ ತಾಯಿ. ಈಕೆ ತಾನು ಹೆತ್ತ ಮಕ್ಕಳಾದ 9 ವರ್ಷದ ಲಕ್ಷ್ಮಿ ಮತ್ತು 7 ವರ್ಷದ ಗೌತಮ್ ನನ್ನು ಉಸಿರುಗಟ್ಟಿಸಿ ಕೊಂದು ಹಾಕಿದ್ದಾಳೆ. ಸದ್ಯ ಆರೋಪಿ ಗಂಗಾದೇವಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆಂಧ್ರ ಮೂಲದವರಾದ ಆರೋಪಿ ಗಂಗಾದೇವಿ ಕುಟುಂಬ ಬೆಂಗಳೂರಿನ ಜಾಲಹಳ್ಳಿಯಲ್ಲಿ ವಾಸವಾಗಿದ್ದರು. ಕಳೆದ ಮಾರ್ಚ್ ತಿಂಗಳಲ್ಲಿ ತನ್ನ ಪತಿ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಗಂಗಾದೇವಿ ಖುದ್ದು ಪೊಲೀಸ್​ ಠಾಣೆಗೆ ದೂರು ನೀಡಿ, ಗಂಡನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲು ಮಾಡಿದ್ದಳು.

ಗಂಗಾದೇವಿ ಕೊಟ್ಟ ದೂರಿನ ಆಧಾರದ ಮೇಲೆ ಜಾಲಹಳ್ಳಿ ಪೊಲೀಸರು ಗಂಡನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಅದಾದ ಬಳಿಕ ಈಗ ಇಬ್ಬರು ಮಕ್ಕಳನ್ನು ಕೊಲೆ ಮಾಡಿದ್ದಾಳೆ. ಕೆಲಸ ಇಲ್ಲದೇ ಮಕ್ಕಳಿಬ್ಬರನ್ನು ಸಾಕುವುದಕ್ಕೆ ಕಷ್ಟವಾಗುತ್ತಿತ್ತು. ಈ ಕಾರಣಕ್ಕೆ ಇಬ್ಬರು ಮಕ್ಕಳನ್ನು ನಿನ್ನೆ ಯುಗಾದಿ ಹಬ್ಬದ ದಿನ ರಾತ್ರಿ 9.30ರ ಸುಮಾರಿಗೆ ಕೊಲೆ ಮಾಡಿದ್ದಾಳೆ ಎಂದು ತಿಳಿದುಬಂದಿದೆ.

ಗಂಗಾದೇವಿ ಖಾಸಗಿ ಕಂಪನಿಯಲ್ಲಿ ಮಾರ್ಕೆಟಿಂಗ್ ಕೆಲಸ ಮಾಡುತ್ತಿದ್ದಾಳೆ.ನಿನ್ನೆ ರಾತ್ರಿ 9:30ಕ್ಕೆ ಇಬ್ಬರು ಮಕ್ಕಳನ್ನು ಕೊಲೆ ಮಾಡಿ ಪೊಲೀಸ್ ಕಂಟ್ರೋಲ್ ರೂಂಗೆ ಕರೆ ಮಾಡಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದೇನೆ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿದ್ದಾಳೆ. ಕೂಡಲೇ ಘಟನಾ ಸ್ಥಳಕ್ಕೆ ಜಾಲಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಂಗಾದೇವಿಯನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್