ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ 
ರಾಜ್ಯ

ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವೇ ಇಲ್ಲ: ಬಸವರಾಜ ಬೊಮ್ಮಾಯಿ

Shilpa D

ಹುಬ್ಬಳ್ಳಿ: ಕೇಂದ್ರದಲ್ಲಿ ಅಧಿಕಾರಕ್ಕೆ ಬರದಿರುವ ಕಾಂಗ್ರೆಸ್ ಸುಳ್ಳು ಗ್ಯಾರೆಂಟಿಗಳ ಮೂಲಕ ಜನರಿಗೆ ಮೋಸ ಮಾಡುತ್ತಿದೆ, ಸ್ವಂತ ಬಲದಿಂದ ಅಧಿಕಾರಕ್ಕೆ ಬರಲು ಸಾಕಷ್ಟು ಸ್ಥಾನಗಳಲ್ಲಿ ಸ್ಪರ್ಧಿಸದ ಕಾಂಗ್ರೆಸ್, ಮತದಾರರನ್ನು ಮೂರ್ಖರನ್ನಾಗಿಸಿ ಅಲ್ಲೊಂದು ಇಲ್ಲೊಂದು ಸ್ಥಾನ ಗೆಲ್ಲಲು ದೊಡ್ಡ ಆಶ್ವಾಸನೆ ನೀಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 200 ಸ್ಥಾನಕ್ಕೆ ಸ್ಪರ್ಧಿಸಿ ಸರ್ಕಾರ ಮಾಡುತ್ತೇವೆ ಎನ್ನುತ್ತಾರೆ. ಲೋಕಸಭೆಯ ಎಲ್ಲಾ ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಹಾಕಿ ಸ್ಪರ್ಧಿಸುತ್ತಿಲ್ಲ. ಹೆಚ್ಚಿನ ಸ್ಥಾನಗಳಲ್ಲಿ ಸ್ಪರ್ಧೆ ಮಾಡದೇ ಅವರು ಅಧಿಕಾರಕ್ಕೆ ಹೇಗೆ ಬರುತ್ತಾರೆ? ಎಂದು ಪ್ರಶ್ನಿಸಿದರು.

ರಾಜ್ಯ ಈಗ ಕೊಡುತ್ತಿರುವ ಗ್ಯಾರೆಂಟಿ ಗಳಗಂಟಿಯಾಗಿದ್ದಾವೆ. ಗೃಹಲಕ್ಷ್ಮಿ ಯೋಜನೆ ಎಷ್ಟು ಜರಿಗೆ ತಲುಪಿದೆ. ಬೆಂಗಳೂರು ಬಿಟ್ಟಿದೆ. ಊರುಗಳಿಗೆ ಬಂದಿಲ್ಲ. ಕೇವಲ ಪ್ರಗತಿಯಲ್ಲಿದೆ ಅಂತ ಹೇಳುತ್ತಾರೆ. ಬಹುತೇಕರಿಗೆ ಗ್ಯಾರೆಂಟಿ ತಲುಪುತ್ತಿಲ್ಲ ಎಂದು ಹೇಳಿದರು.

ಕಾಂಗ್ರೆಸ್ ನವರು ಮತ್ತೆ ಗ್ಯಾರೆಂಟಿ ಕಾರ್ಡ್ ಹಂಚಲು ಶುರು ಮಾಡಿದ್ದಾರೆ. ಹೆಣ್ಣು ಮಕ್ಕಳಿಗೆ ಒಂದು ಲಕ್ಷ ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಯುವಕರಿಗೆ ಒಂದು ಲಕ್ಷ ಕೊಡುತ್ತೇವೆ ಅಂತ ಹೇಳಿದ್ದಾರೆ. 543 ಕ್ಚೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸಿರುವುದೇ 200 ಕ್ಷೆತ್ರಗಳಲ್ಲಿ ಲೋಕಸಭೆಯಲ್ಲಿ ಬಹುಮತಕ್ಕೆ 272 ಸ್ಥಾನ ಬೇಕು. 200 ಸ್ಥಾನದಲ್ಲಿ ಸ್ಪರ್ಧಿಸಿರುವ ಇವರು ಅಧಿಕಾರಕ್ಕೆ ಬರಲು ಸಾದ್ಯವೇ ಇಲ್ಲ ಎಂದರು.

ರಾಜ್ಯದ ಬರ ಪರಿಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರ್ಕಾರವೇ ಕಾರಣವಾಗಿದ್ದು, ಕೇಂದ್ರಕ್ಕೆ ಮನವಿಯನ್ನು ಕಳುಹಿಸುವಾಗ ಕರ್ನಾಟಕದ ವಾಸ್ತವ ಸ್ಥಿತಿಯನ್ನು ಕಳಿಸಿರಲಿಲ್ಲ. ಸದ್ಯಕ್ಕೆ ಸಿಎಂ ಸಿದ್ದರಾಮಯ್ಯ ತಮ್ಮ ಸರ್ಕಾರದ ಬೊಕ್ಕಸದಿಂದ ರಾಜ್ಯದ ರೈತರಿಗೆ ಹಣವನ್ನು ಬಿಡುಗಡೆ ಮಾಡಲಿ ಎಂದರು.

ರಾಜಕೀಯ ಪ್ರೇರಿತ ದೃಷ್ಟಿಯಿಂದ ಸಿದ್ದರಾಮಯ್ಯ ಬರಪರಿಹಾರಕ್ಕಾಗಿ ಸುಪ್ರಿಂಕೋರ್ಟಿಗೆ ಹೋಗಿದ್ದಾರೆ. 15 ನೇ ಹಣಕಾಸು ಆಯೋಗದಲ್ಲಿ ಅನುದಾನ ಕಡಿಮೆ ಆಗಲು ಸಿದ್ದರಾಮಯ್ಯನವರು ಕಾರಣ. ಕೇಂದ್ರಕ್ಕೆ ಅವರು ರಾಜ್ಯದ ನೈಜ್ಯಸ್ಥಿತಿಯನ್ನ ಆಗಿನ ಸರ್ಕಾರ ಹೇಳಿಕೊಳ್ಳಲಿಲ್ಲಾ ಅದಕ್ಕೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಹಿಂದಿನ ಯುಪಿಎ ಸರ್ಕಾರ ಇದ್ದಾಗ 8-10 ತಿಂಗಳ ನಂತರ ಪರಿಹಾರ ನೀಡಿದ ಉದಾಹರಣೆಯಿದೆ. ಇವರಿಗೆ ರೈತರ ಬಗ್ಗೆ ಕಳಕಳಿ ಇಲ್ಲ . ರೈತ ವಿರೋಧಿ ಸರ್ಕಾರ ಇದಾಗಿದೆ ಎಂದರು.

SCROLL FOR NEXT