ಹಲ್ಲೆಗೊಳಗಾಗಿರುವ ಬಿಜೆಪಿ ಕಾರ್ಯಕರ್ತ ನವೀನ್
ಹಲ್ಲೆಗೊಳಗಾಗಿರುವ ಬಿಜೆಪಿ ಕಾರ್ಯಕರ್ತ ನವೀನ್ 
ರಾಜ್ಯ

ಬೆಂಗಳೂರು ಗ್ರಾಮಾಂತರ ಕ್ಷೇತ್ರ ಗೆಲ್ಲಲು ಇನ್ನಿಲ್ಲದ ಕಸರತ್ತು; ಅಣ್ಣ-ತಮ್ಮನಿಂದ ಗೂಂಡಾಗಿರಿ: ಬಿಜೆಪಿ, ಜೆಡಿಎಸ್ ವಾಗ್ದಾಳಿ

Shilpa D

ರಾಮನಗರ: ಬಿಜೆಪಿ ಕಾರ್ಯಕರ್ತ‌ ನವೀನ್ ಅವರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ವಿಚಾರದಲ್ಲಿ ಕರ್ನಾಟ ಬಿಜೆಪಿ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ತರಾಟೆಗೆ ತೆಗೆದುಕೊಂಡಿದೆ.

ಈ ಸಂಬಂಧ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ್ ಬೆಂಗಳೂರು ಗ್ರಾಮಾಂತರದಲ್ಲಿ ಸೋಲು ಗ್ಯಾರೆಂಟಿ ಆಗುತ್ತಿದ್ದಂತೆ, ಶಾಶ್ವತವಾಗಿ CM-in-waiting ಆಗಿ ಉಳಿಯಬೇಕಾಗುತ್ತಲ್ಲಾ ಎನ್ನುವ ಹತಾಶೆಯಿಂದ ಕಂಗಾಲಾಗಿರುವ D K Shivakumar ಹಾಗೂ ಅವರ ಸಹೋದರ D K Suresh ಮತದಾರರ ಮೇಲಿನ ಕೋಪಕ್ಕೆ ಗೂಂಡಾಗಿರಿಗೆ ಇಳಿದಿದ್ದಾರೆ.

ಬಿಜೆಪಿ ಕಾರ್ಯಕರ್ತ‌ ಸಹೋದರ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾಗಳು ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಕಾಟಾಚಾರಕ್ಕೆ ಕೇಸ್ ಹಾಕುವ ಮೂಲಕ ಯಾರನ್ನು ರಕ್ಷಣೆ ಮಾಡುತ್ತಿದ್ದೀರಿ ಸಿಎಂ Siddaramaiah ನವರೇ? ಸ್ಟ್ರಾಂಗ್ ಸಿಎಂ ಎಂದು ಹೇಳಿಕೊಳ್ಳುವ ನೀವು ಡಿಕೆ ಸಹೋದರದ ಮುಂದೆ ಅಷ್ಟೊಂದು ವೀಕ್ ಯಾಕಾಗಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರು ನಿರ್ಭೀತಿಯಿಂದ ಮತದಾನ ಮಾಡುವ ವಾತಾವರಣ ಕೆಡಿಸಿ ಮತದಾರರಲ್ಲಿ ಭಯದ ವಾತಾವರಣ ಸೃಷ್ಟಿ ಮಾಡುವ ಈ ದುಷ್ಕೃತ್ಯಕ್ಕೆ ಚುನಾವಣಾ ಆಯೋಗ ಕಡಿವಾಣ ಹಾಕಬೇಕು. ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ, ವಿಶ್ವಾಸ ತುಂಬುವ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.

ಚುನಾವಣೆ ಸಮಯದಲ್ಲಿ ಕಾಂಗ್ರೆಸ್​ ಗೂಂಡಾಗಳು ಸಕ್ರಿಯಗೊಂಡಿದ್ದಾರೆ. ಅವರನ್ನು ಮಜಾವಾದಿ ಸಿದ್ದರಾಮಯ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ. ರೇಷ್ಮೆ ಬೆಳೆಗಾರ ಹಾಗೂ ಬಿಜೆಪಿ ಕಾರ್ಯಕರ್ತ‌ ನವೀನ್ ಮೇಲೆ ಕಾಂಗ್ರೆಸ್ಸಿನ ಗೂಂಡಾ ಮಾರಣಾಂತಿಕ ಹಲ್ಲೆ ಮಾಡಿದ್ದರೂ ಆತನನ್ನು ಬಂಧಿಸದೆ ಸಣ್ಣ ಕೇಸ್ ಹಾಕಿ ರಾಜಾರೋಷವಾಗಿ ಬೀದಿಗೆ ಬಿಟ್ಟಿದೆ.

ಚುನಾವಣೆ ಗೆಲ್ಲಲು ಗೂಂಡಾಗಿರಿ ಮಾಡುತ್ತಿರುವ ಅಣ್ಣ-ತಮ್ಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಅದರ ಮುಂದುವರಿದ ಭಾಗವೇ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ . ಅದೇ ರೀತಿ ಮತದಾರರನ್ನು ಬೆದರಿಸುವ ಕೆಲಸ ಮಾಡಲಾಗುತ್ತಿದೆ. ಕೂಡಲೇ ಚುನಾವಣಾ ಆಯೋಗ ಕಾಂಗ್ರೆಸ್ ಪಕ್ಷದ ವಿರುದ್ಧ ಕ್ರಮಕೈಗೊಂಡು ನಿಷ್ಪಕ್ಷಪಾತವಾಗಿ ರಾಜ್ಯದಲ್ಲಿ ಚುನಾವಣೆ ನಡೆಯಲು ಅವಕಾಶ ಕಲ್ಪಿಸಿ, ಮತದಾರರಲ್ಲಿ ಧೈರ್ಯ ತುಂಬಬೇಕಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಸರಕಾರ ಈ ಕೂಡಲೇ ದೌರ್ಜನ್ಯ ನಡೆಸಿರುವ ಅಪರಾಧಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಚುನಾವಣಾ ಆಯೋಗ ನಿರ್ಭೀತಿಯಿಂದ ಚುನಾವಣೆ ನಡೆಸಲು ಸೂಕ್ತ ಕ್ರಮ ಜರುಗಿಸಬೇಕು ಎಂದು ಜೆಡಿಎಸ್ ಆಗ್ರಹಿಸಿದೆ.

SCROLL FOR NEXT