ಹೈಕೋರ್ಟ್ 
ರಾಜ್ಯ

ಪಂಚನಾಮೆ ಆಧಾರದಲ್ಲಿ ಎಫ್ಐಆರ್ ದಾಖಲು ಸರಿಯಲ್ಲ: ಹೈಕೋರ್ಟ್

ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಆರೋಪಿಗಳಿಂದ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು ಪಂಚನಾಮೆ ನಡೆಸಿದ್ದ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿದೆ.

ಬೆಂಗಳೂರು: ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಆರೋಪಿಗಳಿಂದ ಮದ್ಯದ ಬಾಟಲ್‌ಗಳನ್ನು ವಶಪಡಿಸಿಕೊಂಡು ಪಂಚನಾಮೆ ನಡೆಸಿದ್ದ ಆಧಾರದಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಇಬ್ಬರು ಆರೋಪಿಗಳಿಗೆ ವಿಚಾರಣಾಧೀನ ನ್ಯಾಯಾಲಯ ವಿಧಿಸಿದ್ದ ಶಿಕ್ಷೆ ರದ್ದುಗೊಳಿಸಿದೆ.

ಕಾನೂನುಬಾಹಿರವಾಗಿ ಮದ್ಯಸಾಗಾಟ ಆರೋಪದಲ್ಲಿ ಶಿಕ್ಷೆಗೆ ಗುರಿಯಾಗಿದ್ದ ದಯಾನಂದ ಮತ್ತು ರವಿ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಸ್ ರಾಚಯ್ಯ ಅವರ ಏಕಸದಸ್ಯ ಪೀಠ ಪುರಸ್ಕರಿಸಿದೆ.

ಯಾವುದೇ ಆರೋಪ ಎದುರಾದಲ್ಲಿ ಮಾಹಿತಿದಾರರು ಸಹಿ ಹಾಕಿ ನೀಡಿದ ದೂರಿನಿಂದ ಎಫ್‌ಐಆರ್ ದಾಖಲಿಸಬಹುದಾಗಿದೆ. ಇಲ್ಲವೇ, ನಿಖರ ಮಾಹಿತಿಯ ಆಧಾರದಲ್ಲಿ ಪೊಲೀಸ್ ಅಧಿಕಾರಿ ದೂರು ದಾಖಲಿಸಿಕೊಂಡು ಎಫ್‌ಐಆರ್‌ ದಾಖಲಿಸುತ್ತಾರೆ. ಈ ಎರಡರಲ್ಲಿಯೂ ಮಾಹಿತಿಯನ್ನು ಮೊದಲು ಲಿಖಿತವಾಗಿ ದಾಖಲಿಸಿಕೊಂಡು ನಂತರ ತನಿಖೆ ನಡೆಸುತ್ತಾರೆ.

ಆದರೆ, ಪ್ರಸ್ತುತ ಪ್ರಕರಣದಲ್ಲಿ ಈ ಪ್ರಕ್ರಿಯೆ ನಡೆದಿಲ್ಲ. ಬದಲಿಗೆ ಮದ್ಯವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದವರಿಂದ ಮದ್ಯ ವಶಪಡಿಸಿಕೊಂಡು ಪಂಚನಾಮೆ ನಡೆಸಿದ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಇದು ಕಾನೂನುಬಾಹಿರ ಕ್ರಮ. ಈ ಅಂಶ ಪರಿಗಣಿಸದೆ ಶಿಕ್ಷೆ ವಿಧಿಸಿರುವುದು ದೋಷದಿಂದ ಕೂಡಿದೆ ಎಂದು ನ್ಯಾಯಾಲಯ ಹೇಳಿದೆ.

ಹುಣಸೂರಿನ ಅಬಕಾರಿ ವಿಭಾಗದ ಸಬ್ ಇನ್‌ಸ್ಪೆಕ್ಟರ್‌ 2008 ನವೆಂಬರ್ 24ರಂದು ಬೆಳಿಗ್ಗೆ 10.15ರ ಸಮಯದಲ್ಲಿ ಚಲ್ಲಹಳ್ಳಿ ಗ್ರಾಮದ ಬಳಿ ಸಿಬ್ಬಂದಿಯೊಂದಿಗೆ ಗಸ್ತು ತಿರುಗುವ ವೇಳೆ ಮೂಲಗಳಿಂದ ದ್ವಿಚಕ್ರ ವಾಹನದಲ್ಲಿ ವ್ಯಕ್ತಿಯೊಬ್ಬರು ಮದ್ಯ ಸಾಗಾಟ ಮಾಡುತ್ತಿರುವ ವಿಚಾರ ಗೊತ್ತಾಗಿತ್ತು.

ಈ ಸಂಬಂಧ ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಆರೋಪಿಯ ವಾಹನದಲ್ಲಿ ಮದ್ಯ ಮಾರಾಟಕ್ಕೆ ಸಂಬಂಧಿಸಿದಂತೆ ಪಡೆದುಕೊಂಡಿದ್ದ ದಾಖಲೆ ಪರಿಶೀಲಿಸಿದರು. ಈ ಕುರಿತು ಸೂಕ್ತ ಪ್ರತಿಕ್ರಿಯೆ ಸಿಗದ ಹಿನ್ನೆಲೆಯಲ್ಲಿ ವಾಹನ ಜಪ್ತಿ ಮಾಡಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರೆಸಿದ್ದರು.

180 ಎಂಎಲ್‌ನ 48 ಒರಿಜಿನಲ್ ಚಾಯ್ಸ್‌ನ ವಿಸ್ಕಿ ಬಾಟಲ್ ವಶಪಡಿಸಿಕೊಂಡಿದ್ದರು. ಇದಾದ ಬಳಿಕ ವಶಕ್ಕೆ ಪಡೆದಿದ್ದ ಮದ್ಯವನ್ನು ಪರೀಕ್ಷೆಗಾಗಿ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಬಳಿಕ ಆರೋಪಿಗಳ ವಿರುದ್ದ ತನಿಖೆ ನಡೆಸಿ ಹುಣಸೂರಿನ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ್ದ ಜೆಎಂಎಫ್‌ಸಿ ನ್ಯಾಯಾಲಯವು ಆರೋಪಿಗಳಿಗೆ 5 ವರ್ಷ ಶಿಕ್ಷೆ ಮತ್ತು ಒಂದು ಲಕ್ಷ ದಂಡ ವಿಧಿಸಿತ್ತು. ಈ ಆದೇಶವನ್ನು ಮೈಸೂರಿನ ಸತ್ರ ನ್ಯಾಯಾಲಯ ಎತ್ತಿಹಿಡಿದಿತ್ತು. ಇದನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್‌ನಲ್ಲಿ ಪುನರ್ ಪರಿಶೀಲನಾ ಅರ್ಜಿ ದಾಖಲಿಸಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT