ಟಿ.ಎ. ಶರವಣ 
ರಾಜ್ಯ

ಟಿಎ ಶರವಣಗೆ ಲಘು ಹೃದಯಾಘಾತ: ಆತಂಕ ಪಡುವ ಅವಶ್ಯಕತೆ ಇಲ್ಲ ಎಂದ ಶಾಸಕ

ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.

ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಶರವಣ ಅವರು ಚಿಕಿತ್ಸೆ ಪಡೆಯುತ್ತಿದ್ದು, ಅಭಿಮಾನಿಗಳೂ ಹಾಗೂ ಆತ್ಮೀಯರು ಆತಂಕ ಪಡುವ ಅಗತ್ಯವಿಲ್ಲವೆಂದು ಟ್ವೀಟ್‌ ಮೂಲಕ ಟಿ.ಎ.ಶರವಣ ಅವರು ಹೇಳಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಶರವಣ ಅವರು ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಲಘು ಹೃದಯಾಘಾತದಿಂದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಇದೀಗ ಗುಣಮುಖನಾಗಿದ್ದೇನೆ. ಹೃದಯದಲ್ಲಿ ಸ್ಟೆಂಟ್ ಅಳವಡಿಸಲಾಗಿದೆ. ಅಭಿಮಾನಿಗಳು ಹಾಗು ಆತ್ಮೀಯರು ಯಾರು ಆತಂಕ ಪಡುವ ಅವಶ್ಯಕತೆ ಇಲ್ಲ, ನಿಮ್ಮೆಲ್ಲರ ಪ್ರೀತಿ, ಹಾರೈಕೆ, ಪ್ರಾರ್ಥನೆಯಿಂದ ಮತ್ತು ಭಗವಂತನ ಕೃಪೆಯಿಂದ ಚೇತರಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇರಳದಲ್ಲಿ ಖಾತೆ ಹಂಚಿಕೆ ಗೊಂದಲ: ಕಾಂಗ್ರೆಸ್ ಹೈಕಮಾಂಡ್ ಸಲಹೆ ತಿರಸ್ಕರಿಸಿದ CM ಸತೀಶನ್; ಭಿನ್ನಮತ ಸ್ಫೋಟ..!

ದೇಶದ ಪ್ರತಿಷ್ಠೆ ಹೆಚ್ಚಿಸಲು ಮೋದಿ ಶ್ರಮಿಸ್ತಿದ್ದಾರೆ; PM ವಿದೇಶ ಪ್ರವಾಸಕ್ಕೆ ಪವಾರ್ ಮೆಚ್ಚುಗೆ; ಟೀಕಿಸಿದ್ದ ಕಾಂಗ್ರೆಸ್ ಗೆ ತೀವ್ರ ಮುಖಭಂಗ!

WTCಯಲ್ಲಿ ಭಾರತಕ್ಕೆ ದೊಡ್ಡ ಹಿನ್ನಡೆ: ಪಾಕಿಸ್ತಾನವನ್ನು 2-0 ಅಂತರದಿಂದ ಸೋಲಿಸಿ Team Indiaನ ಹಿಂದಿಕ್ಕಿದ ಬಾಂಗ್ಲಾ!

ಹಿಂದೂ ಮಹಾಸಾಗರದಲ್ಲಿ ಇರಾನ್ 'ತೈಲ ಟ್ಯಾಂಕರ್' ವಶಕ್ಕೆ ಪಡೆದ ಅಮೆರಿಕ!

NISM ಆಕಾಂಕ್ಷಿ ನಿಗೂಢ ಸಾವು: ಬೆಂಗಳೂರಿನ ಮಣಿಪಾಲ್ ಅಕಾಡೆಮಿಯಲ್ಲಿ ಸಾವಿರಾರು ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

SCROLL FOR NEXT