ಸಂಗ್ರಹ ಚಿತ್ರ 
ರಾಜ್ಯ

ಗೌಪ್ಯ ಕಡತಗಳು ನಾಪತ್ತೆ: ಠಾಣೆ ಮೆಟ್ಟಿಲೇರಿದ RDPR ಇಲಾಖೆ!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿಯ ಕಡತ ನಾಪತ್ತೆಯಾಗಿದ್ದ ಪ್ರಕರಣದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೇರಿದ ಎರಡು ಕಡತಗಳೂ ಕೂಡ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದಲ್ಲಿ ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಿರಿಯ ಎಂಜಿನಿಯರ್‌ ನೇಮಕಾತಿ ಆಯ್ಕೆ ಪಟ್ಟಿಯ ಕಡತ ನಾಪತ್ತೆಯಾಗಿದ್ದ ಪ್ರಕರಣದ ಬೆನ್ನಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸೇರಿದ ಎರಡು ಕಡತಗಳೂ ಕೂಡ ನಾಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ಈ ಸಂಬಂಧ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ದಾಖಲಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಯೊಬ್ಬರು ಮಾತನಾಡಿ, ಗ್ರಾಮ ಪಂಚಾಯತ್‌ಗಳಲ್ಲಿನ ಸರ್ಕಾರಿ ನೌಕರರ ಕಾನೂನುಬದ್ಧ ವಾರಸುದಾರರಿಗೆ ವೈದ್ಯಕೀಯ ಕಾರಣಗಳಿಗಾಗಿ ಅನುಕಂಪದ ಆಧಾರದ ಮೇಲೆ ಉದ್ಯೋಗಗಳನ್ನು ಒದಗಿಸಲಾಗುತ್ತದೆ. ಇದಕ್ಕೆ ಸಂಬಂಧಿಸಿದ 2 ಕಡತಗಳು ನಾಪತ್ತೆಯಾಗಿದೆ ಎಂದು ಹೇಳಿದ್ದಾರೆ.

ಎರಡು ಕಡತಗಳು ಮೇ 31, 2018 ರಂದು ಪರ್ಸನಲ್ ಸೆಕ್ಷನ್ ನಿರ್ದೇಶಕರ (ಪಂಚಾಯತ್ ರಾಜ್-1) ಕಚೇರಿಗೆ ರವಾನೆಯಾಗಿತ್ತು ಹೀಗಾಗಿ, 2018ರಲ್ಲಿ ಆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ನಾಪತ್ತೆಯಾಗಿರುವ ಕಡತಗಳಿಗಾಗಿ ಹುಡುಕಾಟ ನಡೆಸಲಾಗದೆ. ಆದರೂ ಇದೂವರೆಗೂ ಪತ್ತೆಯಾಗಿಲ್ಲ. ವೈದ್ಯಕೀಯ ಕಾರಣಗಳಿಗಾಗಿ ಅನುಕಂಪದ ಆಧಾರದ ಮೇಲೆ ಉದ್ಯೋಗ ಕೋರುವ ಸರ್ಕಾರಿ ನೌಕರರ ಕಾನೂನು ವಾರಸುದಾರರ ಕೋರಿಕೆಯ ಮೇರೆಗೆ ಕಡತವನ್ನು ಸಿದ್ಧಪಡಿಸಲಾಗಿತ್ತು. ಇದೀಗ ತಪ್ಪಿತಸ್ಛ ಅಧಿಕಾರಿಗಳ ವಿರುದ್ಧ ಕ್ರಮಕ್ಕಾಗಿ ವಿಧಾನಸೌಧ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಹೈಕೋರ್ಟ್ ನಿರ್ದೇಶನದ ಮೇರೆಗೆ ಕಡತವನ್ನು ಸಿದ್ಧಪಡಿಸಲಾಗಿತ್ತು ಎನ್ವಲಾಗಿತ್ತು. ಕಡತ ನಾಪತ್ತೆ ಸಂಬಂಧ KPSCಯ ಸಹಾಯಕ ಕಾರ್ಯದರ್ಶಿ ವಿಧಾನಸೌಧ ಪೊಲೀಸರಿಗೆ ದೂರು ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಂಚ ಪಡೆಯುತ್ತಿದ್ದ ಸಚಿವ ಕೆ.ಜೆ. ಜಾರ್ಜ್‌ OSD ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ

ಜಿಲ್ಲೆಗೊಂದು ಮೆಡಿಕಲ್ ಕಾಲೇಜು, ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ: ಸಿಎಂ ಸಿದ್ದರಾಮಯ್ಯ

11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧ

ಎಂಎಂ ಹಿಲ್ಸ್‌ನಲ್ಲಿ ಮತ್ತೊಂದು ಹುಲಿಗೆ ವಿಷಪ್ರಾಶನ; ಇಬ್ಬರು ಶಂಕಿತರು ವಶಕ್ಕೆ

ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?

SCROLL FOR NEXT