ಶನಿವಾರ ಬೆಂಗಳೂರಿನಲ್ಲಿ ಹಿರಿಯ ನಾಗರಿಕರೊಬ್ಬರು ತಮ್ಮ ಮನೆಯಿಂದಲೇ ಮತದಾನ ಮಾಡಿದರು. ಚುನಾವಣಾ ಅಧಿಕಾರಿಗಳು ಮತ್ತು ಕುಟುಂಬ ಸದಸ್ಯರು ಇದ್ದಾರೆ. 
ರಾಜ್ಯ

ಲೋಕಸಭಾ ಚುನಾವಣೆ 2024: ಬೆಂಗಳೂರಿನಲ್ಲಿ ಮೊದಲ ದಿನವೇ ಮನೆಯಿಂದ 4,459 ಮಂದಿ ಮತದಾನ

ಮನೆಯಿಂದ ಮತದಾನ (ವಿಎಫ್‌ಹೆಚ್) ಹಂತ-2ರ ಅಡಿಯಲ್ಲಿ ಶನಿವಾರದಿಂದ ಮತದಾನ ಪ್ರಾರಂಭವಾಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 85 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಅಂಗವಿಕಲರಲ್ಲಿ 4,459 ಮಂದಿ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಂಗಳೂರು: ಮನೆಯಿಂದ ಮತದಾನ (ವಿಎಫ್‌ಹೆಚ್) ಹಂತ-2ರ ಅಡಿಯಲ್ಲಿ ಶನಿವಾರದಿಂದ ಮತದಾನ ಪ್ರಾರಂಭವಾಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 85 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಅಂಗವಿಕಲರಲ್ಲಿ 4,459 ಮಂದಿ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ ಪ್ರಕಾರ, ಬೆಂಗಳೂರು ಜಿಲ್ಲೆಯ ಮೂರು ಲೋಕಸಭಾ ಕ್ಷೇತ್ರಗಳಾದ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಸೆಂಟ್ರಲ್‌ನಲ್ಲಿ 4,459 ಮಂದಿ ಮತ ಚಲಾಯಿಸಿದ್ದಾರೆ. ಬೆಂಗಳೂರು ಸೆಂಟ್ರಲ್‌ನಲ್ಲಿ 1,337 (ಶೇ 74.82), ಬೆಂಗಳೂರು ಉತ್ತರದಲ್ಲಿ 985 (ಶೇ 54.83) ಮತ್ತು ಬೆಂಗಳೂರು ದಕ್ಷಿಣದಲ್ಲಿ 1,313 (ಶೇ 59.04) ಜನರು ಮತ ಚಲಾಯಿಸಿದ್ದಾರೆ.

ಮಹದೇವಪುರ, ಬ್ಯಾಟರಾಯನಪುರ, ದಾಸರಹಳ್ಳಿ, ಯಶವಂತಪುರ, ಆನೇಕಲ್, ಬೆಂಗಳೂರು ದಕ್ಷಿಣ ಮತ್ತು ಯಲಹಂಕ ಒಳಗೊಂಡ ಬೆಂಗಳೂರು ನಗರದಲ್ಲಿ ಒಟ್ಟು 824 ಮಂದಿ ಮತದಾನ ಮಾಡಿದ್ದು, ಶೇ 40.31ರಷ್ಟು ಮತದಾನವಾಗಿದೆ.

ಮಾಹಿತಿ ಪ್ರಕಾರ, 16 ಮತದಾರರು ಗೈರುಹಾಜರಾಗಿದ್ದರು ಮತ್ತು ಇಬ್ಬರು ಮತ ಚಲಾಯಿಸಲು ನಿರಾಕರಿಸಿದ್ದಾರೆ. ಮನೆಯಿಂದ ಮತದಾನಕ್ಕೆ ನೋಂದಾಯಿಸಿಕೊಂಡವರಲ್ಲಿ 18 ಮಂದಿ ಸಾವಿಗೀಡಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ಅಂಗವಾಗಿ ಮನೆಯಿಂದ ಮತದಾನ (ವಿಎಫ್‌ಹೆಚ್) ಹಂತ-2ರ ಅಡಿಯಲ್ಲಿ 85 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಅಂಗವಿಕಲರಿಗೆ ಮನೆಯಿಂದಲೇ ಮತ ಚಲಾಯಿಸಲು ಒಟ್ಟು ಐದು ದಿನಗಳನ್ನು ನಿಗದಿಪಡಿಸಲಾಗಿದೆ. ಚುನಾವಣಾಧಿಕಾರಿಗಳ ತಂಡ ನೋಂದಾಯಿತರ ಮನೆಗೆ ತೆರಳಿ ಅಂಚೆ ಮತದಾನಕ್ಕೆ ಅವಕಾಶ ನೀಡಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test Day 3: ಫಾಲೋ ಆನ್ ಭೀತಿಯಲ್ಲಿ ಲಂಕಾಪಡೆ, ಮಳೆಯಿಂದಾಗಿ 3ನೇ ದಿನದಾಟ ಮೊಟಕು!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!