ಮನೆ ದ್ವಂಸ ಪ್ರಕರಣ: ಗೋವಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ
ಮನೆ ದ್ವಂಸ ಪ್ರಕರಣ: ಗೋವಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಪತ್ರ 
ರಾಜ್ಯ

ಕನ್ನಡಿಗರ ಮನೆ ನೆಲಸಮ; ಪರ್ಯಾಯ ವ್ಯವಸ್ಥೆ ಕಲ್ಪಿಸಲು ಗೋವಾ ಮುಖ್ಯಮಂತ್ರಿಗೆ ಸಿದ್ದರಾಮಯ್ಯ ಮನವಿ

Ramyashree GN

ಬೆಂಗಳೂರು: ನೆರೆಯ ಗೋವಾದಲ್ಲಿ ಕನ್ನಡಿಗರ ಮನೆಗಳನ್ನು ನೆಲಸಮ ಮಾಡಲಾಗಿದೆ ಎಂಬ ಆರೋಪದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಅಲ್ಲಿನ ನಿವಾಸಿಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವವರೆಗೆ ತೆರವು ಪ್ರಕ್ರಿಯೆಯನ್ನು ತಕ್ಷಣವೇ ನಿಲ್ಲಿಸುವಂತೆ ಗೋವಾ ಮುಖ್ಯಮಂತ್ರಿಗೆ ಭಾನುವಾರ ಮನವಿ ಮಾಡಿದ್ದಾರೆ.

ಎಲ್ಲ ಸ್ಥಳಾಂತರಗೊಂಡ ಕುಟುಂಬಗಳಿಗೆ ಪುನರ್ವಸತಿಯನ್ನು ಕಲ್ಪಿಸುವಂತೆ ಅವರು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರಿಗೆ ಮನವಿ ಮಾಡಿದ್ದಾರೆ.

'ಗೋವಾದ ಸಂಗೋಲ್ಡಾದಲ್ಲಿ ಕನ್ನಡಿಗರಿಗೆ ಸೇರಿದ ಮನೆಗಳನ್ನು ಕೆಡವಿದ ಘಟನೆಯಿಂದ ತೀವ್ರ ಕಳವಳಗೊಂಡಿದ್ದೇನೆ. ಆ ಕುಟುಂಬಗಳಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸುವವರೆಗೆ ತೆರವು ಪ್ರಕ್ರಿಯೆಯನ್ನು ನಿಲ್ಲಿಸುವಂತೆ ನಾನು ಗೋವಾದ ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಅವರಿಗೆ ಮನವಿ ಮಾಡುತ್ತೇನೆ' ಎಕ್ಸ್‌ನಲ್ಲಿ ಸಿದ್ದರಾಮಯ್ಯ ಪೋಸ್ಟ್ ಮಾಡಿದ್ದಾರೆ.

ಪ್ರತಿ ಸಂತ್ರಸ್ತ ಕುಟುಂಬದ ಘನತೆ ಮತ್ತು ಸ್ಥಿರತೆಯನ್ನು ನಾವು ಎತ್ತಿಹಿಡಿಯುವುದು ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಪೋಸ್ಟ್‌ನಲ್ಲಿ ಮಾಧ್ಯಮ ವರದಿಗಳು ಮತ್ತು ಮನೆ ನೆಲಸಮಗೊಳಿಸುವ ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ.

SCROLL FOR NEXT