ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ ರಮೇಶ್ ಅರವಿಂದ್
ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಟ ರಮೇಶ್ ಅರವಿಂದ್ 
ರಾಜ್ಯ

'ನಮ್ಮ ನಡೆ ಮತಗಟ್ಟೆ ಕಡೆ' ಧ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಿ: ತುಷಾರ್ ಗಿರಿನಾಥ್

Nagaraja AB

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ಯುವ ಮತದಾರು "ನಮ್ಮ ನಡೆ ಮತಗಟ್ಟೆಯ ಕಡೆ" ಧ್ಯೇಯದೊಂದಿಗೆ ಉತ್ಸಾಹದಿಂದ ಮತ ಚಲಾಯಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು.

ಭಾರತ ಚುನಾವಣಾ ಆಯೋಗ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಹಾಗೂ ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಜ್ಞಾನಜ್ಯೋತಿ ಸಭಾಂಗದಲ್ಲಿ ಇಂದು ನಡೆದ "ನಮ್ಮ ನಡೆ ಮತಗಟ್ಟೆಯ ಕಡೆ" ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಪ್ರತಿ ಬಾರಿಯ ಚುನಾವಣೆಯಲ್ಲೂ ಕಡಿಮೆ ಮತದಾನ ನಡೆಯುತ್ತದೆ. ಮತಗಟ್ಟೆಗಳ ಬಳಿ ಎಲ್ಲಾ ರೀತಿಯ ವ್ಯವಸ್ಥೆಗಳಿರಲಿದ್ದು, ಈ ಬಾರಿ ಹೆಚ್ಚು ಮತದಾನವಾಗಬೇಕು. ಎಲ್ಲರೂ ಒಟ್ಟಾಗಿ ಇತರರನ್ನೂ ಪ್ರೇರೇಪಿಸಿ ತಪ್ಪದೆ ಮತ ಚಲಾಯಿಸೇಕೆಂದು ತಿಳಿಸಿದರು.

ನಿಮ್ಮ ಅಭ್ಯರ್ಥಿಯನ್ನು ತಿಳಿದುಕೊಳ್ಳಿ(KYC-ECI) ಎಂಬ ತಂತ್ರಾಂಶದಲ್ಲಿ‌ ಚುನಾವಣೆಯಲ್ಲಿ ಸ್ಪರ್ಧಿಸಿದ ಎಲ್ಲಾ ಅಭ್ಯರ್ಥಿಗಳ‌ ಮಾಹಿತಿ ಲಭ್ಯಬಿದೆ. ತಾವೆಲ್ಲರೂ ತಂತ್ರಾಂಶವನ್ನು ಡೌನ್ ಲೋಡ್ ಮಾಡಿಕೊಂಡು ಅಭ್ಯರ್ಥಿಯ ಬಗ್ಗೆ ತಿಳಿದುಕೊಂಡು ಉತ್ತಮ ಅರ್ಭರ್ಥಿಯನ್ನು ಆಯ್ಕೆ ಮಾಡಬಹುದಿ ಎಂದು ಹೇಳಿದರು.

ಚುನಾವಣಾ ರಾಯಬಾರಿ ಹಾಗೂ ಚಿತ್ರ ನಟರಾದ ರಮೇಶ್ ಅರವಿಂದ್ ಮಾತನಾಡಿ, ಒಂದು ಇಟ್ಟಿಗೆಯಿಂದ ಕಟ್ಟಡ ಕಟ್ಟಲು ಸಾಧ್ಯವಿಲ್ಲ. ಸಾವಿರಾರು ಇಟ್ಟಿಗೆಗಳು ಸೇರಿದರೆ ಮಾತ್ರ ಕಟ್ಟಡ ಕಟ್ಟಲು ಸಾಧ್ಯ. ಅದೇ ರೀತಿ ಪ್ರತಿಯೊಂದು ಮತದಾರನೂ ಒಂದೊಂದು‌ ಇಟ್ಟಿಗೆಯ ಹಾಗೆ, ಎಲ್ಲರೂ ಒಟ್ಟಾಗಿ ಸೇರಿದರೆ ಮಾತ್ರ ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಿ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಧ್ಯ.ನಿಮ್ಮಲ್ಲೆರ ಕನಸು ಈಡೇರಬೆಕಾದರೆ ಮತದಾನ ದಿನವಾದ ಏಪ್ರಿಲ್ 26ರಂದು ನೀವೆಲ್ಲರೂ ಒಟ್ಟಾಗಿ ಸೇರಿದರೆ ಮಾತ್ರ ನಿಮ್ಮ ಡ್ರೀಮ್ ಟೀಮ್ ಕಟ್ಟಬಹುದು. ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಯುವ ಮತದಾರರಿಂದ ಮಾತ್ರ ಬದಲಾಯಿಸುವ ಸಾಮರ್ಥ್ಯವಿದೆ. ಆದ್ದರಿಂದ ನಿಮ್ಮ ಸ್ವವಿವೇಚನೆಯಿಂದ ಉತ್ತಮ ಅಭ್ಯರ್ಥಿಯನ್ನು ಆಯ್ಕೆ ಮಾಡಿ ಮತ ಚಾಲಾಯಿಸಲು ತಿಳಿಸಿದರು.

2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗಿ: ನಮ್ಮ ನಡೆ ಮತಗಟ್ಟೆಯ ಕಡೆ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಹಾರಾಣಿ ಕಾಲೇಜು, ನೃಪತುಂಗಾ ವಿಶ್ವವಿದ್ಯಾನಿಲಯ, ಆರ್.ವಿ ಕಾಲೇಜು, ಎಸ್.ಜೆ.ಆರ್.ಸಿ ಕಾಲೇಜು ಸೇರಿದಂತೆ ಹಲವಾರು ಕಾಲೇಜುಗಳಿಂದ 2000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೇ ವೇಳೆ ಎಲ್ಲಾ ವಿದ್ಯಾರ್ಥಿಗಳ ಮತದಾನ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು.

SCROLL FOR NEXT