ಹೊರ ಹೋಗುತ್ತಿರುವ ಸಂಸದ ತೇಜಸ್ವಿ ಸೂರ್ಯ 
ರಾಜ್ಯ

ಸಭೆಯಲ್ಲಿ ಭಾರೀ ಆಕ್ರೋಶ: ಠೇವಣಿದಾರರ ಪ್ರಶ್ನೆಗೆ ತಬ್ಬಿಬ್ಬು, ಸಿಟ್ಟಿಗೆದ್ದು ಹೊರನಡೆದ ತೇಜಸ್ವಿ ಸೂರ್ಯ; ಸಂಸದರ ಸ್ಪಷ್ಟನೆ ಹೀಗಿದೆ...

ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರಗೆ ನಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ನಡೆದ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರಗೆ ನಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್‌ 13ರಂದು ಗುರುರಾಘವೇಂದ್ರ ಕೋ ಆಪರೇಟಿವ್‌ ಬ್ಯಾಂಕ್‌ಗಳ ಠೇವಣಿದಾರರ ಸಭೆಯನ್ನು ಕರೆದಿದ್ದು, ಈ ವೇಳೆ ಸಂಸದ ತೇಜಸ್ವಿ ಸೂರ್ಯ ಹಾಗೂ ಠೇವಣಿದಾರರ ನಡುವೆ ಗದ್ದಲವುಂಟಾಗಿದೆ ಎನ್ನಲಾಗಿದೆ. ಈ ಕುರಿತ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

"ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಮತ್ತೊಮ್ಮೆ ಎಸ್ಕೇಪ್: ಕಾಂಗ್ರೆಸ್ ವ್ಯಂಗ್ಯ

ಘಟನೆ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಯ ತೇಜಸ್ವಿ ಸೂರ್ಯ ಮತ್ತೊಮ್ಮೆ "ಎಮರ್ಜೆನ್ಸಿ ಎಕ್ಸಿಟ್ ಡೋರ್" ಮೂಲಕ ಜನರಿಂದ ಎಸ್ಕೇಪ್ ಆಗಿದ್ದಾರೆಂದು ವ್ಯಂಗ್ಯವಾಡಿದೆ.

ಬೆಂಗಳೂರು ದಕ್ಷಿಣದ ಸಂಸದ 5 ವರ್ಷದುದ್ದಕ್ಕೂ ದೋಸೆ ತಿಂದುಕೊಂಡು, ಫುಟ್ ಬಾಲ್ ಆಡಿಕೊಂಡು, ಮೋಜು ಮಾಡಿಕೊಂಡು ಕಾಲ ಕಳೆದಿದ್ದರು, ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್ ನಲ್ಲಿ ಹಣ ಕಳೆದುಕೊಂಡ ಸಂತ್ರಸ್ತರ ಸಮಸ್ಯೆಯನ್ನು ಒಂದು ದಿನವೂ ಆಲಿಸದ ತೇಜಸ್ವಿ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆಯ ಸಮಯದಲ್ಲಿ ಮತದಾರರ ಮೇಲೆಯೇ ಹಲ್ಲೆ, ನಿಂದನೆ ಮಾಡಲು ಮುಂದಾಗುವ ತೇಜಸ್ವಿ ಸೂರ್ಯನ ಪಟಾಲಂನ ದುರಹಂಕಾರ ಮಿತಿ ಮೀರಿದೆ, ಮತದಾರರು ಈ ಅಹಂಗೆ ಪಾಠ ಕಲಿಸುವ ಸಮಯ ಬಂದಿದೆ. ಎಲ್ಲಾ ಕಡೆಯೂ ಮತದಾರರಿಂದ ಬಿಜೆಪಿ ಅಭ್ಯರ್ಥಿಗಳು ಗೋಬ್ಯಾಕ್ ಎದುರಿಸುತ್ತಿದ್ದಾರೆ, ಈ ಜನಾಕ್ರೋಶಕ್ಕೆ ಬಿಜೆಪಿ ದೂಳಿಪಟ ಮಾಡುವುದು ನಿಶ್ಚಿತ ಎಂದು ಹೇಳಿದೆ.

ಸಂಸದ ತೇಜಸ್ವಿ ಸೂರ್ಯ ಸ್ಪಷ್ಟನೆ:

ಘಟನೆ ಕುರಿತು ಸಂಸದರ ಕಚೇರಿ ಪ್ರತಿಕ್ರಿಯೆ ನೀಡಿದ್ದು, ಇಡೀ ಘಟನೆಗೆ ಕಾಂಗ್ರೆಸ್ ಕಾರಣ ಎಂದು ಆರೋಪಿಸಿದೆ. ಸಭೆಯಲ್ಲಿ ನಡೆದ ಈ ಕೋಲಾಹಲ ಪೂರ್ವನಿಯೋಜಿತವಾದುದ್ದಾಗಿದ್ದು, ಕಾಂಗ್ರೆಸ್ ಇದನ್ನು ಯೋಜಿಸಿತ್ತು ಎಂದು ಹೇಳಿದೆ. ಅಷ್ಟೇ ಅಲ್ಲದೇ ಸಭೆ ವೇಳೆ ಕೋಲಾಹಲ ಉಂಟುಮಾಡಿದ ವ್ಯಕ್ತಿಗಳು ಕಾಂಗ್ರೆಸ್ ಪಕ್ಷದ ನಾಯಕರಿಗೆ ಸ್ಥಳದಿಂದ ವೀಡಿಯೋ ಕರೆ ಮಾಡಿರುವ ದಾಖಲೆಗಳನ್ನು ಸಂಸದರ ಕಚೇರಿ ಬಿಡುಗಡೆ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT